Homeಮುಖಪುಟಸರ್ದಾರ್‌ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಸರ್ಕಾರ!

ಸರ್ದಾರ್‌ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಸರ್ಕಾರ!

ಕ್ರೀಡಾಂಗಣವು 1,10,000 ಆಸನಗಳನ್ನು ಹೊಂದಿದ್ದು, ಅದು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ.

- Advertisement -
- Advertisement -

ಅಹಮದಾಬಾದ್‌ನಲ್ಲಿರುವ ಮೊಟೆರಾದ ಸರ್ದಾರ್ ಪಟೇಲ್ ಕ್ರಿಕೆಟ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ ಎಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಬುಧವಾರ ಘೋಷಿಸಿದ್ದಾರೆ.

ವ್ಯಾಪಕವಾದ ನವೀಕರಣ ಕಾರ್ಯಗಳ ನಂತರ ಕ್ರೀಡಾಂಗನವನ್ನು ಇತ್ತೀಚೆಗೆ ಪುನಃ ತೆರೆಯಲಾಗಿದ್ದು ಅದನ್ನು ರಾಷ್ಟ್ರಪತಿ ಉದ್ಘಾಟಿಸಿದರು. ಹೊಸದಾಗಿ ನವೀಕೃತ ಕ್ರೀಡಾಂಗಣದಲ್ಲಿ ಇದೆ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಭಾರತ-ಇಂಗ್ಲೇಂಡ್ ನಡುವೆ ನಡೆಯುತ್ತಿರುವ ನಾಲ್ಕು ಪಂದ್ಯಗಳ ಸರಣಿಯ ಮೂರನೇ ಟೆಸ್ಟ್‌ ಕ್ರಿಕೆಟ್ ಪಂದ್ಯಾಟ ಬುಧವಾರದಿಂದ ಇಲ್ಲಿ ಪ್ರಾರಂಭವಾಗುತ್ತದೆ.

ಹೊಸದಾಗಿ ನವೀಕೃತಗೊಂಡ ಕ್ರೀಡಾಂಗಣವು 1,10,000 ಆಸನಗಳನ್ನು ಹೊಂದಿದ್ದು, ಇದೀಗ ಅದು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ.

ಇದನ್ನೂ ಓದಿ: ನಾನು ಶಂಖ ಊದುತ್ತೇನೆ, ಮಾಸ್ಕ್ ಧರಿಸುವ ಅಗತ್ಯವಿಲ್ಲ – ಬಿಜೆಪಿ ಸಚಿವೆ ಉಷಾ ಠಾಕೂರ್

ಉದ್ಘಾಟನಾ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ, ಬಿಸಿಸಿಐ ಕಾರ್ಯದರ್ಶಿ ಜೇ ಶಾ ಮತ್ತು ಕ್ರೀಡಾ ಸಚಿವ ಕಿರೆನ್ ರಿಜಿಜು ಉಪಸ್ಥಿತರಿದ್ದರು.

“ಮೊಟೆರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಪೋರ್ಟ್ಸ್ ಎನ್‌ಕ್ಲೇವ್ ಮತ್ತು ನರೇಂದ್ರ ಮೋದಿ ಕ್ರೀಡಾಂಗಣದೊಂದಿಗೆ ನಾರನ್‌ಪುರದಲ್ಲಿಯೂ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಲಾಗುವುದು. ಈ ಮೂರು ಯಾವುದೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸಲು ಸಜ್ಜುಗೊಳ್ಳಲಿದೆ. ಅಹಮದಾಬಾದ್ ಅನ್ನು ಭಾರತದ ‘ಕ್ರೀಡಾ ನಗರ’ ಎಂದು ಕರೆಯಲಾಗುತ್ತದೆ” ಎಂದು ಉದ್ಘಾಟನಾ ಸಮಾರಂಭದಲ್ಲಿ ಅಮಿತ್ ಶಾ ಹೇಳಿದ್ದಾರೆ.

ಕಳೆದ ತಿಂಗಳು ಎರಡು ಸೆಟ್‌ಗಳ ಆಂಜಿಯೋಪ್ಲ್ಯಾಸ್ಟಿಗೆ ಒಳಗಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ: ಕೇಂದ್ರ ಸಚಿವರು ಸುಳ್ಳು ಹೇಳಿದರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...