ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಯಲ್ಲಿ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಅವರ ಕೈವಾಡ ಇರುವ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದರೆ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಳ್ಳಲಿದ್ದೇನೆ ಎಂದು ಅವರ ಸಂಪುಟ ಸಹೋದ್ಯೋಗಿ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ದೇಶಮುಖ್ ಹತ್ಯೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಬಿಜೆಪಿ ನಾಯಕ ಪಾಟೀಲ್ ಭಾನುವಾರ ಸಾಂಗ್ಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸರಪಂಚ್ ಹತ್ಯೆಗೆ ಸಂಬಂಧಿಸಿದ ಸುಲಿಗೆ ಪ್ರಕರಣದಲ್ಲಿ ಸಚಿವ ಮುಂಡೆ ಅವರ ಸಹಚರ ವಾಲ್ಮಿಕ್ ಕರಡ್ ಅವರನ್ನು ಬಂಧಿಸಲಾಗಿದೆ. ಸಚಿವ ಮುಂಡೆ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಪ್ರಭಾವಿ ನಾಯಕರೂ ಆಗಿದ್ದಾರೆ. ಎನ್‌ಸಿಪಿಯು ಮಹಾರಾಷ್ಟ್ರದ ಆಡಳಿತರೂಢ ಮಹಾಯುತಿ ಮೈತ್ರಿಯ ಪಕ್ಷವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ದೇಶಮುಖ್ ಅವರನ್ನು ಡಿಸೆಂಬರ್ 9 ರಂದು ಅಲ್ಲಿ ವಿಂಡ್‌ಮಿಲ್ ಯೋಜನೆಯನ್ನು ನಿರ್ವಹಿಸುತ್ತಿರುವ ಇಂಧನ ಸಂಸ್ಥೆಯ ವಿರುದ್ಧ ಸುಲಿಗೆ ಪ್ರಯತ್ನವನ್ನು ತಡೆಯಲು ಪ್ರಯತ್ನಿಸಿದ್ದಕ್ಕಾಗಿ ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲ್ಲಲಾಯಿತ್ತು.
ಬೀಡ್ ಜಿಲ್ಲೆಯ ಪಾರ್ಲಿಯ ಎನ್‌ಸಿಪಿ ಶಾಸಕ ಮುಂಡೆ ಅವರನ್ನು ಕರಾದ್ ಅವರೊಂದಿಗಿನ ಸಂಪರ್ಕದ ಬಗ್ಗೆ ಆಡಳಿತ ಮೈತ್ರಿಕೂಟದ ಕೆಲವು ಸಹೋದ್ಯೋಗಿಗಳು ಮತ್ತು ವಿರೋಧ ಪಕ್ಷಗಳು ಟೀಕಿಸುತ್ತಿವೆ.
“ಸಂತೋಷ್ ದೇಶಮುಖ್ ಹತ್ಯೆಯ ತನಿಖೆ ನಡೆಯುತ್ತಿದೆ. ಪ್ರತಿಯೊಂದು ವಿಷಯವೂ ವಿಭಿನ್ನವಾಗಿದೆ. ಸರ್ಕಾರದ ಮುಖ್ಯಸ್ಥರಾಗಿ ದೇವೇಂದ್ರ ಫಡ್ನವೀಸ್ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಪೂರ್ಣ ಸಾಮರ್ಥ್ಯ ಹೊಂದಿದ್ದಾರೆ. ಆರೋಪಗಳಲ್ಲಿ ಹುರುಳಿದೆ ಎಂದು ಅವರು ಭಾವಿಸಿದರೆ, ಅವರು ತಕ್ಷಣ ಕ್ರಮ ಕೈಗೊಂಡು ಮುಂಡೆ ಅವರನ್ನು ರಾಜೀನಾಮೆ ನೀಡುವಂತೆ ಕೇಳುತ್ತಾರೆ” ಎಂದು ಸಚಿವ ಪಾಟೀಲ್ ಹೇಳಿದ್ದಾರೆ.
“ಮಹಾರಾಷ್ಟ್ರ ಸರ್ಕಾರವು ಈಗಾಗಲೇ ಸರಪಂಚ್ ದೇಶಮುಖ್ ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಕಠಿಣ ಆರೋಪಗಳನ್ನು ಹೊರಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ಬಿಜೆಪಿ ನಾಯಕರೂ ಆಗಿರುವ ಪಾಟೀಲ್ ಹೇಳಿದ್ದಾರೆ. ಪೊಲೀಸ್ ಯಂತ್ರಾಂಗವೂ ಪ್ರಕರಣವನ್ನು ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಮತ್ತು ಅದರ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ಸಹ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಹೆಚ್ಚುವರಿಯಾಗಿ, ತನಿಖೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವಾಲ್ಮಿಕ್ ಕರಾದ್ ಮತ್ತು ಇತರ ಆರೋಪಿಗಳ ವಿರುದ್ಧ ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ)ಯನ್ನು ಅನ್ವಯಿಸುವುದು ಸೇರಿದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪಾಟೀಲ್ ಹೇಳಿದ್ದಾರೆ. ಕರದ್ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂಓದಿ: ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು
ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು


