Homeಮುಖಪುಟಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. - ಸಿದ್ದು

ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. – ಸಿದ್ದು

- Advertisement -
- Advertisement -

ಯಲಹಂಕ‌ ಮೇಲ್ಸೆತುವೆಗೆ ವಿ.ಡಿ. ಸಾವರ್ಕರ್ ಹೆಸರಿಡುವ ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿ ನಿರ್ಮಾಣಗೊಂಡಿರುವ ಮೇಲ್ಸೇತುವೆಯೊಂದು ಉದ್ಘಾಟನೆಗೂ ಮುನ್ನವೇ ದೊಡ್ಡ ವಿವಾದವೆಬ್ಬಿಸಿದೆ. ಇದಕ್ಕೆ ಏಕಮಾತ್ರ ಕಾರಣ ಅದಕ್ಕೆ ಸಾವರ್ಕರ್‌ ಹೆಸರಿಡುವುದಾಗಿದೆ.

ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರಿಡಬೇಕೆಂದು ಮುಖ್ಯಮಂತ್ರಿಗಳನ್ನು ಅವರನ್ನು ಆಗ್ರಹಿಸುತ್ತೇನೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ತೆರೆ ಹಿಂದಿನ‌ ಸೂತ್ರಧಾರರೇ ಹೊರತು, ಚುನಾಯಿತ ಸರ್ಕಾರ ಅಲ್ಲ‌ ಎನ್ನುವುದಕ್ಕೆ ಯಲಹಂಕ ಮೇಲ್ಸೆತುವೆಗೆ ಸಾವರ್ಕರ್ ಹೆಸರಿಡುವ ಅವಸರದ ನಿರ್ಧಾರವೇ‌ ಪುರಾವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಅವರೇ, ನೀವು ವಿರೋಧ ಪಕ್ಷಗಳ ಸಹಕಾರ ಬಯಸುತ್ತಿರುವುದು
ಇಂತಹ ಜನವಿರೋಧಿ ನಿರ್ಧಾರಗಳಿಗಾಗಿಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು “ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ರವರ ಹೆಸರು ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು” ಎಂದು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಸಿ.ಟಿ ರವಿ “ಸಾವರ್ಕರ್ ಹೋರಾಟ ಮಾಡಿದ್ದು ದೇಶದ ಸಲುವಾಗಿ. ಕುಮಾರಸ್ವಾಮಿ ಯಾಕೆ ಇಷ್ಟು ಸಣ್ಣ ಮನಸ್ಸಿನವರಾದ್ರು ಗೊತ್ತಿಲ್ಲ. ದೇವೇಗೌಡರು ಹೊಳೆನರಸೀಪುರ ದಲ್ಲಿ ಹುಟ್ಟಿದ್ದಾರೆ. ಅವರನ್ನು ನಾವು ಯಾಕೆ ರಾಷ್ಟ್ರ ನಾಯಕರು ಅಂತಾ ಕರೀಬೇಕು” ಎಂದು ಪ್ರಶ್ನಿಸಿದ್ದಾರೆ.

ಯಾವುದೇ ಒಂದು ದೇಶದ ಪರವಾಗಿ ವಿ.ಡಿ.ಸಾವರ್ಕರ್ ಅವರು ಹೋರಾಟ ಮಾಡಿಲ್ಲ, ದೇಶದ ಪರವಾಗಿ ಅವರು ಹೋರಾಟ ಮಾಡಿದ್ದವರು. ಅಂತವರ ಬಗ್ಗೆ ಕುಮಾರಸ್ವಾಮಿ ಈ ರೀತಿ ಮಾತನಾಡಬಾರದು ಎಂದು ಸಿ.ಟಿ ರವಿ ತಿಳಿಸಿದ್ದಾರೆ.


ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಡಿಗೆ ಮಾಡಿದ ಅಪಮಾನ: ಎಚ್‌ಡಿಕೆ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...