Homeಮುಖಪುಟತಮಿಳುನಾಡು: ರಾಜಕೀಯ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್!

ತಮಿಳುನಾಡು: ರಾಜಕೀಯ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್!

ಎಐಎಡಿಎಂಕೆ ಪಕ್ಷದಲ್ಲಿ ತನಗೇ ಉನ್ನತ ಸ್ಥಾನ ಸಿಗಬೇಕೆಂದು ಪಟ್ಟು ಹಿಡಿದಿದ್ದ ಶಶಿಕಲಾ ಅವರ ಈ ನಡೆ ಕೊಂಚ ಸಂದೇಹವನ್ನು ಉಳಿಸಿದೆ

- Advertisement -
- Advertisement -

ತಮಿಳುನಾಡಿನ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದ ಶಶಿಕಲಾ ನಟರಾಜನ್ ನಿನ್ನೆ (ಮಾ.3) ರಾಜಕೀಯ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಇತ್ತೀಚೆಗಷ್ಟೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತ ಅವರ ಅಪ್ತೆ ಶಶಿಕಲಾ ರಾಜಕೀಯದಿಂದ ವಿಶ್ರಾಂತಿ ಪಡೆಯುವುದಾಗಿ ಹೇಳಿದ್ದಾರೆ.

ಶಶಿಕಲಾ ಈ ಮಹತ್ದದ ವಿಚಾರವನ್ನು ಮಾಧ್ಯಮ ಪ್ರಕಟಣೆಯ ಮೂಲಕ ಘೋಷಿಸಿದ್ದಾರೆ. “ನಾನು ಎಂದಿಗೂ ಅಧಿಕಾರ ಅಥವಾ ಸ್ಥಾನವನ್ನು ಗುರಿಯಾಗಿಸಿಕೊಂಡಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: AIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ ಶಶಿಕಲಾ ಈ ನಿರ್ಧಾರ ಪ್ರಕಟಸಿದ್ದಾರೆ. ಶಶಿಕಲಾ ಜೈಲಿನಿಂದ ಬಿಡುಗಡೆಯಾದ ನಂತರ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಪಕ್ಷದಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಈಗ ಶಶಿಕಲಾ ಅವರ ಈ ನಿರ್ಧಾರವು ಆಡಳಿತಾರೂಢ ಎಐಎಡಿಎಂಕೆ ನಾಯಕರಲ್ಲಿ ಮತ್ತು ಕಾರ್ಯಕರ್ತರಲ್ಲಿ ಕೊಂಚ ನಿರಾಳವನ್ನುಂಟುಮಾಡಿದೆ.

ಆದರೆ, ಕಳೆದ ಫೆಬ್ರವರಿ ತಿಂಗಳಿನಲ್ಲಿ, ಎಐಎಡಿಎಂಕೆ ಪಕ್ಷದಿಂದ ತನ್ನನ್ನು ಉಚ್ಚಾಟನೆ ಮಾಡಿದ್ದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿ ಮರು ಅರ್ಜಿ ಸಲ್ಲಿಸಿದ್ದ ಶಶಿಕಲಾ, ಈಗ ದಿಢೀರ್ ಎಂದು ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಎಐಎಡಿಎಂಕೆ ಪಕ್ಷದಲ್ಲಿ ತನಗೇ ಉನ್ನತ ಸ್ಥಾನ ಸಿಗಬೇಕೆಂದು ಪಟ್ಟು ಹಿಡಿದಿದ್ದ ಶಶಿಕಲಾ ಅವರ ಈ ನಡೆ ಕೊಂಚ ಸಂದೇಹವನ್ನು ಉಳಿಸಿದೆ. ಈಗ ಅವರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...