Homeಮುಖಪುಟಸಸಿಕಾಂತ್ ಸೆಂಥಿಲ್ ಸೇರ್ಪಡೆ ನಮಗೆ & ದೇಶಕ್ಕೆ ಶಕ್ತಿ-ಸ್ಪೂರ್ತಿ ತಂದಿದೆ: ದಿನೇಶ್‌ ಗುಂಡೂರಾವ್

ಸಸಿಕಾಂತ್ ಸೆಂಥಿಲ್ ಸೇರ್ಪಡೆ ನಮಗೆ & ದೇಶಕ್ಕೆ ಶಕ್ತಿ-ಸ್ಪೂರ್ತಿ ತಂದಿದೆ: ದಿನೇಶ್‌ ಗುಂಡೂರಾವ್

ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು

- Advertisement -
- Advertisement -

ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರಿದ ಕೆಲವೇ ತಿಂಗಳುಗಳಲ್ಲಿ ಮತ್ತೊರ್ವ ಐಎಎಸ್ ಅಧಿಕಾರಿ ತಮಿಳುನಾಡು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ತಮಿಳುನಾಡು ಮೂಲದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಸೇರಿದ್ದಾರೆ.

ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಈ ಬಗ್ಗೆ ದಿನೇಶ್ ಗುಂಡೂರಾವ್ ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಜ್ವಾಲಾಮುಖಿಯ ಕಂಪನ : ಸಸಿಕಾಂತ್ ಸೆಂಥಿಲ್‌ರವರ ಮೊದಲ ಬರಹ…

“ಕಾಂಗ್ರೆಸ್ ಕುಟುಂಬಕ್ಕೆ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸರ್‌ಗೆ ಸ್ವಾಗತ. ನಿಮ್ಮ ಸೇರ್ಪಡೆ ತಮಿಳುನಾಡಿನಲ್ಲಿ ಮಾತ್ರವಲ್ಲದೆ ನಮಗೆ ಮತ್ತು ಇಡೀ ದೇಶಕ್ಕೆ ದೊಡ್ಡ ಶಕ್ತಿ ಮತ್ತು ಸ್ಪೂರ್ತಿ ತಂದಿದೆ” ಎಂದು ಬರೆದುಕೊಂಡಿದ್ದಾರೆ.

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಇದನ್ನೂ ಓದಿ: ಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

ತನ್ನ ದಕ್ಷತೆ, ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಸಸಿಕಾಂತ್, ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಉದ್ಯೋಗಕ್ಕೆ ರಾಜೀನಾಮೆ ಕೊಟ್ಟರು. ಇವರು “ದೇಶದ ಇಂದಿನ ಪರಿಸ್ಥಿತಿಯಲ್ಲಿ ತಾನು ಐಎಎಸ್ ಅಧಿಕಾರಿಯಾಗಿದ್ದು, ದೇಶವನ್ನು ಕಾಡುತ್ತಿರುವ ಅಪಾಯದ ವಿರುದ್ಧ ಹೋರಾಡಲಾಗದು” ಎಂಬ ಹೇಳಿಕೆಯಿಂದ ಜನರಲ್ಲಿ ಅಚ್ಚರಿ ಉಂಟುಮಾಡಿದ್ದರು. ಜೊತೆಗೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಟ್ವಿಟರ್‌ನಲ್ಲಿ ತಮ್ಮ ನಿಲುವನ್ನು ಪೋಸ್ಟ್ ಮಾಡಿರುವ ಸಸಿಕಾಂತ್ ’ಹೋರಾಟವನ್ನು ಮುಂದುವರೆಸುವ ನನ್ನ ಪ್ರಯತ್ನದಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದೇನೆ ಎಂದು ನಾನು ಎಲ್ಲರಿಗೂ ತಿಳಿಸಲು ಬಯಸುತ್ತೇನೆ’ ಎಂದಿದ್ದರು.

ಈ ವ್ಯವಸ್ಥೆಯ ವಿರುದ್ಧ ತಳಮಟ್ಟದಲ್ಲಿ ಕೆಲಸ ಮಾಡುವವರ ಜೊತೆಗೆ ಕೈಜೋಡಿಸುತ್ತೇನೆ. ಈ ಕೆಲಸವನ್ನು ಸರ್ವೀಸ್‍ನಲ್ಲಿ ಇದ್ದು ಮಾಡಲು ಆಗುತ್ತಿಲ್ಲ. ಹಾಗಾಗಿ ನಾನು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ

’ನಾನು ಎಲ್ಲಿದ್ದರೂ ನನ್ನ ಜೀವನದುದ್ದಕ್ಕೂ ನಿರ್ಲಕ್ಷ್ಯಕ್ಕೆ ಒಳಗಾದವರಿಗೆ ಧ್ವನಿಯಾಗಲು ಪ್ರಯತ್ನಿಸುತ್ತಿರುವ ಕಾರ್ಯಕರ್ತನಾಗಿದ್ದೇನೆ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ಅದೇ ರೀತಿ ಮುಂದುವರಿಯುತ್ತೇನೆ’ ಎಂಬ ಭರವಸೆ ನೀಡಿದ್ದರು.

ತಮಿಳುನಾಡಿನ ಎಐಸಿಸಿ ಉಸ್ತುವಾರಿ ಮತ್ತು ಕರ್ನಾಟಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಸಸಿಕಾಂತ್‌ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದು ಬದಲಾಗುತ್ತದೆಂಬ ವಿಶ್ವಾಸ ನನಗಿದೆ -ಸಸಿಕಾಂತ್ ಸೆಂಥಿಲ್ ಸಂದರ್ಶನ..

ಅಧಿಕಾರಿ ಸಸಿಕಾಂತ್ 2009ರ ಬ್ಯಾಚ್​​ನ ಕರ್ನಾಟಕ ಕೇಡರ್​ ಐಎಎಸ್​ ಅಧಿಕಾರಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ, ಕಳೆದ ವರ್ಷದ ಸೆಪ್ಟೆಂಬರ್ 6 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ತಮ್ಮ ದಕ್ಷತೆ ಮತ್ತು ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದರು. ಕೇಂದ್ರ ಸರ್ಕಾರದ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆಗಳನ್ನ ಅವರು ವಿರೋಧಿಸಿದ್ದರು.

ನಾಗರಿಕ ಸೇವೆಗಳಿಗೆ ರಾಜೀನಾಮೆ ನೀಡಿದ ನಂತರ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸೆಂಥಿಲ್ ಟೀಕಿಸಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆ, ಅಭಿಯಾನಗಳಲ್ಲಿ ಭಾಗಿಯಾಗಿದ್ದರು.

ಸಸಿಕಾಂತ್ ಸೆಂಥಿಲ್ ಅವರ ಕಿರಿಯ ಸಹೋದ್ಯೋಗಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿಗೆ ಸೇರುವ ಮೂಲಕ ತಮಿಳುನಾಡಿನಲ್ಲಿ ರಾಜಕೀಯ ಧುಮುಕಿದ್ದಾರೆ. ಪ್ರಸ್ತುತ ಅಣ್ಣಾಮಲೈ ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದಾರೆ.


ಇದನ್ನೂ ಓದಿ: ವೈರಲ್ ಆದ ಐಎಎಸ್ ಅಧಿಕಾರಿ ಸೆಂಥಿಲ್ ಕುರಿತ ಬರಹ: ‘ನಾನು ಕಂಡ ಸಸಿಕಾಂತ್ ಸೆಂಥಿಲ್’ ಬರಹಕ್ಕೆ ನೆಟ್ಟಿಗರು ಥ್ರಿಲ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...