Homeಅಂತರಾಷ್ಟ್ರೀಯಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

- Advertisement -
- Advertisement -

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2) ವರದಿ ಮಾಡಿದೆ.

ಅಮೆರಿಕ-ಇಸ್ರೇಲ್‌ನ ಜಂಟಿ ದಾಳಿಗೆ ಪ್ರತಿಯಾಗಿ ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ನಡೆಸುತ್ತಿರುವ ಮೂರನೇ ದಿನದ ದಾಳಿಯ ಭಾಗವಾಗಿ ಈ ಘಟನೆ ನಡೆದಿದ್ದು, ಇದು ಪರಿಸ್ಥಿತಿಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ರಾಸ್ ತನುರಾ ಎಂಬುವುದು ಸೌದಿ ಅರೇಬಿಯಾದ ಸಮುದ್ರ ತೀರದಲ್ಲಿರುವ ಒಂದು ಬೃಹತ್ ತೈಲ ಕೇಂದ್ರ. ಇದು ಮಧ್ಯಪ್ರಾಚ್ಯದಲ್ಲೇ ಅತಿ ದೊಡ್ಡದಾದ ತೈಲ ಶುದ್ಧೀಕರಣ ಘಟಕಗಳಲ್ಲಿ ಒಂದು. ಇಲ್ಲಿ ಪ್ರತಿದಿನ ಸುಮಾರು 5.5 ಲಕ್ಷ ಬ್ಯಾರೆಲ್‌ಗಳಷ್ಟು ತೈಲವನ್ನು ಸಂಸ್ಕರಿಸಲಾಗುತ್ತದೆ. ಅಷ್ಟೇ ಅಲ್ಲದೆ, ಸೌದಿ ಅರೇಬಿಯಾದಿಂದ ಬೇರೆ ದೇಶಗಳಿಗೆ ಕಚ್ಚಾ ತೈಲವನ್ನು ಕಳುಹಿಸಲು ಇದು ಪ್ರಮುಖವಾದ ದಾರಿಯಾಗಿದೆ (ರಫ್ತು ಕೇಂದ್ರವಾಗಿದೆ).

ರಾಸ್ ತನುರಾ ತೈಲ ಕೇಂದ್ರವನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ವರದಿ ತಿಳಿಸಿದೆ. ಈ ಕೇಂದ್ರದ ಮೇಲೆ ದಾಳಿ ಮಾಡಲು ಬಂದಿದ್ದ ಎರಡು ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಸೌದಿ ರಕ್ಷಣಾ ಸಚಿವಾಲಯದ ವಕ್ತಾರರು ಅಲ್ ಅರೇಬಿಯಾ ಟಿವಿಯಲ್ಲಿ ಮಾಹಿತಿ ನೀಡಿದ್ದಾರೆ. ದಾಳಿ ಡ್ರೋನ್‌ಗಳ ಅವಶೇಷಗಳು ಬಿದ್ದಿದ್ದರಿಂದ ಸಣ್ಣ ಮಟ್ಟದ ಬೆಂಕಿ ಕಾಣಿಸಿಕೊಂಡಿತ್ತಾದರೂ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಸ್ ತನುರಾ ತೈಲ ಕೇಂದ್ರವನ್ನು ಮುಚ್ಚಿರುವುದು ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆಯ ಆತಂಕವನ್ನು ಹೆಚ್ಚಿಸುವ ಸಾಧ್ಯತೆಯಿದೆ. ವಿಶ್ವದ ಒಟ್ಟು ತೈಲ ಬಳಕೆಯ ಸುಮಾರು ಐದನೇ ಒಂದು ಭಾಗದಷ್ಟು ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಂಚಾರವು ಬಹುತೇಕ ಸ್ಥಗಿತಗೊಂಡಿದೆ. ಭಾನುವಾರ ಈ ಭಾಗದಲ್ಲಿ ಹಡಗುಗಳ ಮೇಲೆ ದಾಳಿ ನಡೆದ ನಂತರ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ, ಸೋಮವಾರದಂದು ಬ್ರೆಂಟ್ ಕಚ್ಚಾ ತೈಲದ ಬೆಲೆಯು ಸರಿಸುಮಾರು 10% ರಷ್ಟು ಏರಿಕೆಯಾಗಿದೆ.

“ಸೌದಿ ಅರೇಬಿಯಾದ ರಾಸ್ ತನುರಾ ತೈಲ ಸಂಸ್ಕರಣಾಗಾರ ಡ್ರೋನ್ ದಾಳಿಗೆ ತುತ್ತಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈಗ ಅರಬ್ಬಿ ಸಮುದ್ರದ (ಗಲ್ಫ್) ಇಂಧನ ಮೂಲಸೌಕರ್ಯಗಳು ಇರಾನ್‌ನ ನೇರ ಗುರಿಯಾಗಿವೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ” ಎಂದು ರಿಸ್ಕ್ ಇಂಟೆಲಿಜೆನ್ಸ್ ಸಂಸ್ಥೆಯಾದ ‘ವೆರಿಸ್ಕ್ ಮೇಪಲ್‌ಕ್ರಾಫ್ಟ್’ನ ಮಧ್ಯಪ್ರಾಚ್ಯ ವಿಭಾಗದ ಪ್ರಮುಖ ವಿಶ್ಲೇಷಕರಾದ ಟೊರ್ಬ್ಜೋರ್ನ್ ಸೋಲ್ಟ್‌ವೆಡ್ಟ್ ಹೇಳಿದ್ದಾಗಿ ರಾಯಿಟರ್ಸ್ ಉಲ್ಲೇಖಿಸಿದೆ.

ಸೌದಿ ಅರೇಬಿಯಾದ ಮೇಲಿನ ಈ ದಾಳಿಯು ಮತ್ತೊಂದು ಮಹತ್ವದ ಬದಲಾವಣೆಗೆ ಕಾರಣವಾಗುವ ಸಾಧ್ಯತೆಯಿದೆ. ಇದು ಸೌದಿ ಅರೇಬಿಯಾ ಮತ್ತು ಅದರ ನೆರೆಹೊರೆಯ ಗಲ್ಫ್ ರಾಷ್ಟ್ರಗಳು ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಗಳಲ್ಲಿ ನೇರವಾಗಿ ಕೈಜೋಡಿಸಲು ಪ್ರೇರೇಪಿಸಬಹುದು ಎಂದು ವಿಶ್ಲೇಷಿಸಲಾಗಿದೆ.

ಈ ಡ್ರೋನ್ ದಾಳಿಯು ಇತರ ಗಲ್ಫ್ ನಗರಗಳ ಮೇಲಿನ ಸರಣಿ ದಾಳಿಗಳ ಮುಂದುವರಿದ ಭಾಗವಾಗಿದೆ. ಅಬುಧಾಬಿ, ದುಬೈ, ದೋಹಾ, ಮನಾಮಾ ಮತ್ತು ಒಮಾನ್‌ನ ಪ್ರಮುಖ ವಾಣಿಜ್ಯ ಬಂದರಾದ ‘ದುಕ್ಮ್’ ಮೇಲೆ ಕೂಡ ಇಂತಹ ದಾಳಿಗಳು ನಡೆದಿವೆ. ಮುನ್ನೆಚ್ಚರಿಕೆ ಕ್ರಮವಾಗಿ, ಇರಾಕ್‌ನ ಕುರ್ದಿಸ್ತಾನ್ ಪ್ರಾಂತ್ಯದ ಬಹುತೇಕ ತೈಲ ಉತ್ಪಾದನಾ ಘಟಕಗಳನ್ನು ವಾರಾಂತ್ಯದಲ್ಲಿ ಮುಚ್ಚಲಾಗಿದೆ ಎಂದು ಅಲ್ಲಿನ ನಿರ್ವಾಹಕರು ತಿಳಿಸಿದ್ದಾರೆ. ಈ ಪ್ರದೇಶದಿಂದ ಫೆಬ್ರವರಿ ತಿಂಗಳಿನಲ್ಲಿ ಪ್ರತಿದಿನ ಸುಮಾರು 2,00,000 ಬ್ಯಾರೆಲ್ ತೈಲವನ್ನು ಟರ್ಕಿಗೆ ರಫ್ತು ಮಾಡಲಾಗುತ್ತಿತ್ತು.

ಸೌದಿ ಅರೇಬಿಯಾದ ಅತ್ಯಂತ ಸುಭದ್ರವಾದ ಇಂಧನ ಕೇಂದ್ರಗಳ ಮೇಲೆ ಈ ಹಿಂದೆಯೂ ದಾಳಿಗಳು ನಡೆದಿವೆ. ಅದರಲ್ಲಿ ಮುಖ್ಯವಾಗಿ ಸೆಪ್ಟೆಂಬರ್ 2019ರಲ್ಲಿ ನಡೆದ ದಾಳಿ ಅತಿ ದೊಡ್ಡದಾಗಿತ್ತು. ಅಂದು ಅಬ್ಕೈಕ್ ಮತ್ತು ಖುರೈಸ್ ತೈಲ ಘಟಕಗಳ ಮೇಲೆ ಹಿಂದೆಂದೂ ಕಂಡಿರದ ರೀತಿಯಲ್ಲಿ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ನಡೆದಿದ್ದವು.

ನಂತರ 2021ರಲ್ಲಿಯೂ ಯೆಮನ್‌ನ ಹೌತಿ ಬಂಡುಕೋರರು ರಾಸ್ ತನುರಾ ಮೇಲೆ ದಾಳಿ ನಡೆಸಿದ್ದರು. ಈ ಘಟನೆಯನ್ನು ಸೌದಿ ಅರೇಬಿಯಾವು “ಜಾಗತಿಕ ಇಂಧನ ಭದ್ರತೆಯ ಮೇಲಿನ ದಾಳಿಯ ವಿಫಲ ಪ್ರಯತ್ನ” ಎಂದು ಕರೆದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...