Homeಚಳವಳಿಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

ಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸೇವಾ ದಳವು ಕಿರುಹೊತ್ತಗೆಯೊಂದನ್ನು ಪ್ರಕಟಿಸಿ ಹಂಚಿದ್ದು ವಿವಾದವನ್ನು ಹುಟ್ಟುಹಾಕಿದೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾ ಸಹ-ಸಂಸ್ಥಾಪಕ ವಿನಾಯಕ್ ದಾಮೋದರ್ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರೊಂದಿಗೆ “ಸಲಿಂಗಕಾಮ ಸಂಬಂಧ” ಹೊಂದಿದ್ದಾರೆಂದು ಬರೆಯಲಾಗಿದೆ.

ಸಾವರ್ಕರ್ ಅವರು ಗೂಡ್ಸೆ ಅವರೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಪುರುಷರನ್ನು ಪ್ರಚೋದಿಸಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. ಅಲ್ಲದೇ 1947 ರಲ್ಲಿ ದೇಶದ ವಿಭಜನೆಗೆ ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಅವರು ಕಾರಣ ಎಂದು ದೂಷಿಸಿದೆ.

‘ವೀರ್ ಸಾವರ್ಕರ್ ಕಿತ್ನೆ ವೀರ್? (ವೀರ್ ಸಾವರ್ಕರ್, ಎಷ್ಟು ಧೈರ್ಯಶಾಲಿ?) ’ಎಂಬ ಹೆಸರಿನ  ಕಿರುಪುಸ್ತಕವನ್ನು ಭೋಪಾಲ್‌ನ ಬೈರಘರ್‌ನಲ್ಲಿ ಗುರುವಾರ ನಡೆದ ಸೇವಾದಳದ ರಾಷ್ಟ್ರೀಯ ತರಬೇತಿ ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಸ್ವಯಂಸೇವಕರ ನಡುವೆ ವಿತರಿಸಲಾಯಿತು.

ಕೈಪಿಡಿ

ಡೊಮಿನಿಕ್ ಲ್ಯಾಪಿಯರ್ ಮತ್ತು ಲ್ಯಾರಿ ಕಾಲಿನ್ಸ್ ಅವರ ಪುಸ್ತಕ ‘ಫ್ರೀಡಮ್ ಅಟ್ ಮಿಡ್ನೈಟ್’ ನಲ್ಲಿ ಉಲ್ಲೇಖಿಸಿರುವ ಒಂದು ಉದಾಹರಣೆಯನ್ನು ಉಲ್ಲೇಖಿಸಿರುವ ಕಿರುಪುಸ್ತಕವು, “ಬ್ರಹ್ಮಚಾರ್ಯವನ್ನು ತೆಗೆದುಕೊಳ್ಳುವ ಮೊದಲು, ಗೂಡ್ಸೆಯು ತಮ್ಮ ರಾಜಕೀಯ ಮಾರ್ಗದರ್ಶಕ ಸಾವರ್ಕರ್ ಅವರೊಂದಿಗೆ ಸಲಿಂಗಕಾಮಿ ಸಂಬಂಧವನ್ನು ಹೊಂದಿದ್ದರು.” ಎಂದು ಬರೆಯಲಾಗಿದೆ.

ಕಿರುಹೊತ್ತಿಗೆಯ ಪುಟ 14ರಲ್ಲಿ “ಅಲ್ಪಸಂಖ್ಯಾತ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತೆ ಹಿಂದೂ ಪುರುಷರನ್ನು ಸಾವರ್ಕರ್ ಪ್ರಚೋದಿಸುತ್ತಿದ್ದರು” ಎಂದು ಹೇಳಲಾಗಿದೆ. ಸಾರ್ವಕರ್‌ ವಿಭಜನೆಯ ಬೀಜಗಳನ್ನು ಬಿತ್ತಿದರು ಮತ್ತು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪ್ರತಿಪಾದಿಸಿದರು ಎಂದು ಬರೆಯಲಾಗಿದೆ. “ಸಾವರ್ಕರ್ ಮತ್ತು ಅವರ ಸ್ನೇಹಿತರು ಕೋಮು ಗಲಭೆಯಲ್ಲಿ ಮುಸ್ಲಿಮರು ಕೊಲ್ಲಲ್ಪಡುವ ಬಗ್ಗೆ ತಿಳಿದಾಗಲೆಲ್ಲಾ ಸಂತೋಷದಿಂದ ನೃತ್ಯ ಮಾಡುತ್ತಿದ್ದರು” ಎಂದು ಕಿರುಪುಸ್ತಕ ಹೇಳುತ್ತದೆ.

’ಆರ್‌ಎಸ್‌ಎಸ್ ಮತ್ತು ಬಿಜೆಪಿ, ಕೆಲವು ಸಂಗತಿಗಳು ಮತ್ತು ಮಾಹಿತಿ’ ಎಂಬ ಶೀರ್ಷಿಕೆಯ ಎರಡನೇ ಕಿರುಪುಸ್ತಕದಲ್ಲಿ ಸೇವಾ ದಳವು ಮೊದಲಿನಿಂದಲೂ ಆರ್‌ಎಸ್‌ಎಸ್‌ ಸಂಘಟನೆಯು ಫ್ಯಾಸಿಸಂ ಮತ್ತು ನಾಜಿಸಂನಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳುತ್ತದೆ. “ಆರ್‌ಎಸ್ಎಸ್ ಯಾವಾಗಲೂ ಪ್ರಸಿದ್ಧ ಸರ್ವಾಧಿಕಾರಿಗಳನ್ನು ಆರಾಧಿಸುತ್ತದೆ. 1930 ಮತ್ತು 1940 ರ ದಶಕದ ಸರ್ವಾಧಿಕಾರಿಗಳಾದ ಹಿಟ್ಲರ್ ಮತ್ತು ಮುಸೊಲಿನಿ”ಯನ್ನುಅನುಸರಿಸುತ್ತದೆ ಎಂದು ಕಿರುಪುಸ್ತಕ ಹೇಳುತ್ತದೆ.

ಬಿಜೆಪಿ ವಕ್ತಾರ ರಜನೀಶ್ ಅಗ್ರವಾಲ್ ಅವರು ಕಿರುಹೊತ್ತಗೆಯ ಬಗ್ಗೆ ಮಾತನಾಡಿ ಕಾಂಗ್ರೆಸ್‌ ಪಕ್ಷವು ಆಗಾಗೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಹಿಟ್ಲರ್ ಮತ್ತು ಮುಸೊಲಿನಿಗಿಂತ ಮುನ್ನವೇ ಆರ್‌ಎಸ್‌ಎಸ್ 1925 ರಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಸಾವರ್ಕರ್‌ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ಅವರ ನೆನಪಿನಲ್ಲಿ ಅಂಚೆ ಚೀಟಿ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಲಾಲ್ಜಿ ದೇಸಾಯಿ ಕಿರುಪುಸ್ತಕದ ವಿಷಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಪುಸ್ತಕದಲ್ಲಿನ ವಿವರಗಳು ಸತ್ಯಗಳನ್ನು ಆಧರಿಸಿವೆ. ಬಿಜೆಪಿಯಿಂದ ವೀರರಂತೆ ಕರೆಯಲ್ಪಟ್ಟ ಜನರ ವಾಸ್ತವತೆಯನ್ನು ಸಾರ್ವಜನಿಕರು ತಿಳಿದುಕೊಳ್ಳುವುದು ಬಹಳ ಮುಖ್ಯ” ಎಂದು ದೇಸಾಯಿ ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ತಮಗಿಷ್ಟ ಬಂದವರೊಡನೆ ಸಂಬಂಧಹೊಂದಲು ಕಾನೂನುಬದ್ಧ ಹಕ್ಕನ್ನು ಹೊಂದಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೇವಾ ದಳದ ಕಿರುಪುಸ್ತಕದಲ್ಲಿ ‘ಗೂಡ್ಸೆ ಮತ್ತು ಸಾವರ್ಕರ್ ದೈಹಿಕ ಸಂಬಂಧವನ್ನು ಹೊಂದಿದ್ದರು’ ಎಂಬ ಹೇಳಿಕೆ ಬಂದಿದೆ. ವೀರ್ ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ ಮತ್ತು ಒಬ್ಬ ಮಹಾನ್ ವ್ಯಕ್ತಿಯಾಗಿ ಉಳಿಯುತ್ತಾರೆ. ಒಂದು ವಿಭಾಗವು ಅವನ ವಿರುದ್ಧ ಮಾತನಾಡುತ್ತಲೇ ಇರುತ್ತದೆ, ಅವರು ಯಾರೇ ಆಗಿರಲಿ ಅದು ಅವರ ಮನಸ್ಸಿನಲ್ಲಿರುವ ಕೊಳೆಯನ್ನು ತೋರಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...