Homeಮುಖಪುಟಸಾವರ್ಕರ್ ಹೆಸರಿನಲ್ಲಿ ಕಾಲೇಜು ನಿರ್ಮಾಣಕ್ಕೆ ಮುಂದಾದ ಕೇಂದ್ರ ಸರ್ಕಾರ - ತೀವ್ರ ವಿರೋಧ

ಸಾವರ್ಕರ್ ಹೆಸರಿನಲ್ಲಿ ಕಾಲೇಜು ನಿರ್ಮಾಣಕ್ಕೆ ಮುಂದಾದ ಕೇಂದ್ರ ಸರ್ಕಾರ – ತೀವ್ರ ವಿರೋಧ

- Advertisement -
- Advertisement -

ಮಹಾತ್ಮ ಗಾಂಧಿ ಕೊಲೆ ಆರೋಪಿ, ಹಿಂದುತ್ವ ಸಿದ್ದಾಂತದ ಪಿತಾಮಹ ವಿ.ಡಿ. ಸಾವರ್ಕರ್ ಅವರ ಹೆಸರಿನ ಕೇಂದ್ರ ಸರ್ಕಾರ ಕಾಲೇಜನ್ನು ಉದ್ಘಾಟಿಸುವ ಘೋಷಣೆ ಮಾಡಿದ್ದು, ಕಾಂಗ್ರೆಸ್ ಮತ್ತು ಅದರ ವಿದ್ಯಾರ್ಥಿ ವಿಭಾಗವಾದ ಎನ್‌ಎಸ್‌ಯುಐ ವಿರೋಧ ವ್ಯಕ್ತಪಡಿಸಿದೆ. ಉದ್ದೇಶಿತ ಕಾಲೇಜಿಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದೆ. ಸಾವರ್ಕರ್ ಹೆಸರಿನಲ್ಲಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಾವರ್ಕರ್ ಕಾಲೇಜಿಗೆ ಶಿಲಾನ್ಯಾಸ ಮಾಡುವ ನಿರೀಕ್ಷೆಯಿದ್ದು, ಎನ್‌ಎಸ್‌ಯುಐ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಧಾನಿಗೆ ಪತ್ರ ಬರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪತ್ರದಲ್ಲಿ, “ಡಾ. ಮನಮೋಹನ್ ಸಿಂಗ್ ಅವರ ಹೆಸರನ್ನು ದೆಹಲಿ ವಿಶ್ವವಿದ್ಯಾಲಯದ ಅಡಿಯಲ್ಲಿ ವಿಶ್ವ ದರ್ಜೆಯ ಕಾಲೇಜು; ಅವರ ಹೆಸರಿಗೆ ಮೀಸಲಾಗಿರುವ ಕೇಂದ್ರ ವಿಶ್ವವಿದ್ಯಾಲಯ; ಭಾರತ ವಿಭಜನೆಯ ನಂತರದ ಅವರ ವಿದ್ಯಾರ್ಥಿ ಜೀವನದಿಂದ ಹಿಡಿದು ಜಾಗತಿಕ ಐಕಾನ್ ಆಗುವವರೆಗೆ ಅವರ ಜೀವನ ಪ್ರಯಾಣವನ್ನು ಶೈಕ್ಷಣಿಕ ಪಠ್ಯಕ್ರಮ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸೇರಿಸಬೇಕು.” ಎಂದು ಎನ್‌ಎಸ್‌ಯುಐ ಹೇಳಿದೆ. ಸಾವರ್ಕರ್ ಹೆಸರಿನಲ್ಲಿ

“ಡಾ. ಸಿಂಗ್ ಅವರ ಜ್ಞಾನ, ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ಸೇವೆಗೆ ಅವರು ನೀಡಿರುವ ಕೊಡುಗೆ ಮಹತ್ವದ್ದಾಗಿದೆ… ಈ ಸಂಸ್ಥೆಗಳಿಗೆ ಅವರ ಹೆಸರನ್ನು ಇಡುವುದು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದ್ದು, ದೇಶದಲ್ಲಿ ಹಲವಾರು ಸ್ವಾತಂತ್ರ್ಯ ಹೋರಾಟಗಾರರಿದ್ದು, ಸರ್ಕಾರವು ಅದರಿಂದ ಹೊಸ ಕಾಲೇಜಿಗೆ ಹೆಸರು ಆಯ್ಕೆ ಮಾಡುವಂತೆ ಒತ್ತಾಯಿಸಿದೆ.

ಕಾಂಗ್ರೆಸ್ ಸಂಸದ ಡಾ. ಸೈಯದ್ ನಸೀರ್ ಹುಸೇನ್ ಪ್ರತಿಕ್ರಿಯಿಸಿ, “ದೇಶದ ಸಾರ್ವಭೌಮತ್ವ ಮತ್ತು ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಇದ್ದಾರೆ. ಈ ಕಾಲೇಜಿಗೆ ಅವರಲ್ಲಿ ಒಬ್ಬರ ಹೆಸರಿಟ್ಟಿದ್ದರೆ, ಅದು ಅವರಿಗೆ ಸಲ್ಲಿಸುವ ಗೌರವವಾಗುತ್ತಿತ್ತು” ಎಂದು ಹೇಳಿದ್ದಾರೆ.

“ಆದರೆ ಬಿಜೆಪಿಗೆ ಯಾವುದೇ ನಾಯಕರು ಅಥವಾ ಐಕಾನ್‌ಗಳು ಇಲ್ಲದ ಕಾರಣ, ಅವರು ಬ್ರಿಟಿಷರನ್ನು ಬೆಂಬಲಿಸಿದವರನ್ನು ಉತ್ತೇಜಿಸುತ್ತಿದ್ದಾರೆ ಮತ್ತು ಕಾನೂನುಬದ್ಧಗೊಳಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಪ್ರಸ್ತಾಪಿತ ಕಾಲೇಜನ್ನು ನಜಾಫ್‌ಗಢದ ರೋಶನ್‌ಪುರದಲ್ಲಿ ಅಂದಾಜು 140 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ವರದಿಯಾಗಿದ್ದು, ಪ್ರಧಾನಿ ಮೋದಿ ಈ ಯೋಜನೆಗೆ ಅಡಿಪಾಯ ಹಾಕಲಿದ್ದಾರೆ. ಅದರ ಜೊತೆಗೆ ದೆಹಲಿ ವಿಶ್ವವಿದ್ಯಾಲಯಕ್ಕಾಗಿ ಇತರ ಎರಡು ಪ್ರಮುಖ ಉಪಕ್ರಮಗಳಾದ ಪೂರ್ವ ದೆಹಲಿಯ ಸೂರಜ್‌ಮಲ್ ವಿಹಾರ್‌ನಲ್ಲಿ ಪೂರ್ವ ಕ್ಯಾಂಪಸ್‌ನಲ್ಲಿರುವ ಶೈಕ್ಷಣಿಕ ಬ್ಲಾಕ್ ಮತ್ತು ದ್ವಾರಕಾದ ಪಶ್ಚಿಮ ಕ್ಯಾಂಪಸ್‌ನಲ್ಲಿರುವ ಮತ್ತೊಂದು ಶೈಕ್ಷಣಿಕ ಬ್ಲಾಕ್‌ಗೆ ಕೂಡಾ ಮೋದಿ ಅಡಿಪಾಯ ಹಾಕಲಿದ್ದಾರೆ.

ಒಟ್ಟಾರೆಯಾಗಿ, ಈ ಯೋಜನೆಗಳು ರೂ. 600 ಕೋಟಿಗಿಂತ ಹೆಚ್ಚಿನ ಹೂಡಿಕೆಯನ್ನು ಯೋಜನೆಗಳಾಗಿದ್ದು, ಶಿಕ್ಷಣ ಮತ್ತು ಸಂಶೋಧನೆಗಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ.

ಏತನ್ಮಧ್ಯೆ, ಇದರ ಬಗ್ಗೆ ಪ್ರತಿಕ್ರಿಯಿಸಿದ ಡಿಯು ಉಪಕುಲಪತಿ ಪ್ರೊಫೆಸರ್ ಯೋಗೇಶ್ ಸಿಂಗ್, “ದೆಹಲಿ ವಿಶ್ವವಿದ್ಯಾಲಯವು ಈಗ ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದಲ್ಲಿ ಎಲ್ಲಾ ದಿಕ್ಕುಗಳಲ್ಲಿ ಕ್ಯಾಂಪಸ್‌ಗಳನ್ನು ಹೊಂದಲಿದೆ ಎಂದು ತಿಳಿದು ನಮಗೆ ಹೆಮ್ಮೆಯಾಗುತ್ತದೆ. ಪ್ರಧಾನಿ ನಾಳೆ ಈ ಮೂರು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಕೈಗೆಟುಕುವ ಮತ್ತು ಉತ್ತಮ ಶಿಕ್ಷಣವನ್ನು ನೀಡುವುದು ಅವರ ಉದ್ದೇಶವಾಗಿದೆ. ಈ ಯೋಜನೆಗಳ ಮೂಲಕ, ನಾವು ವಿದ್ಯಾರ್ಥಿಗಳಿಗೆ ಹೊಸ ಸೀಟುಗಳು ಮತ್ತು ಹೊಸ ಅವಕಾಶಗಳನ್ನು ಸೃಷ್ಟಿಸುತ್ತೇವೆ.” ಎಂದು ಹೇಳಿದ್ದಾರೆ.

“ಈ ಯೋಜನೆಯು ಸರಿಸುಮಾರು ಎರಡು ವರ್ಷಗಳಲ್ಲಿ ಪೂರ್ಣಗೊಳ್ಳುತ್ತದೆ ಮತ್ತು ಈ ಸಂಪೂರ್ಣ ಯೋಜನೆಗೆ ₹600 ಕೋಟಿ ಹಣವನ್ನು ಒದಗಿಸಿದ್ದಕ್ಕಾಗಿ ನಾವು ಸರ್ಕಾರಕ್ಕೆ ಧನ್ಯವಾದ ಹೇಳುತ್ತೇವೆ. ಪ್ರಧಾನಿ ಕ್ಯಾಂಪಸ್‌ಗಳನ್ನು ಉದ್ಘಾಟಿಸುವಾಗ ದೃಶ್ಯಗಳನ್ನು ನೇರ ಪ್ರಸಾರ ಮಾಡಲು ನಾವು ವ್ಯವಸ್ಥೆ ಮಾಡಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸೇನೆಯ ಅವಹೇಳನ ಆರೋಪ: ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್

ಸೇನೆಯ ಅವಹೇಳನ ಆರೋಪ: ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...