Homeಮುಖಪುಟಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

- Advertisement -
- Advertisement -

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ರಾಹುಲ್ ಅವರ ವಿವಾದಿತ ಭಾಷಣದ ವೀಡಿಯೊವನ್ನು ಪ್ರದರ್ಶಿಸುವ ಮನವಿ ತಿರಸ್ಕರಿಸಿದ ಪುಣೆಯ ವಿಶೇಷ ಸಂಸದ/ಶಾಸಕ ನ್ಯಾಯಾಲಯ, ಅರ್ಜಿ ವಜಾಗೊಳಿಸಿದೆ.

ಗಮನಾರ್ಹವಾಗಿ, ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು, ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂದು ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ಅರ್ಜಿಯನ್ನು ವಜಾಗೊಳಿಸಿದರು.

ನವೆಂಬರ್ 14 ರಂದು ನ್ಯಾಯಾಲಯವು, ಮಾನನಷ್ಟ ಭಾಷಣವನ್ನು ಹೊಂದಿದೆ ಎಂದು ಹೇಳಲಾದ ಕಾಂಪ್ಯಾಕ್ಟ್ ಡಿಸ್ಕ್ (ಸಿಡಿ) ಅನ್ನು ಪ್ಲೇ ಮಾಡಿದಾಗ, ಅದು ಖಾಲಿ ಇರುವುದು ಕಂಡುಬಂದಿದೆ. ಕೇಸ್ ದಾಖಲಿಸಿದ ಸಮಯದಲ್ಲಿ ಸತ್ಯಕಿ ಈ ಸಿಡಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸದರಿ ಸಿಡಿ ಖಾಲಿಯಾಗಿದ್ದಾಗ, ರಾಹುಲ್ ಗಾಂಧಿಯವರ ಯೂಟ್ಯೂಬ್ ಚಾನೆಲ್‌ನ ಭಾಷಣ ವೀಡಿಯೊವನ್ನು ನೇರವಾಗಿ ಪ್ಲೇ ಮಾಡುವಂತೆ ಒತ್ತಾಯಿಸಿ ಸತ್ಯಕಿ ಅರ್ಜಿ ಸಲ್ಲಿಸಿದರು. ಅವರು ಸದರಿ ವೀಡಿಯೊದ ಲಿಂಕ್ ಅನ್ನು ಸಿಡಿಯೊಂದಿಗೆ ನ್ಯಾಯಾಲಯಕ್ಕೆ ನೀಡಿದ್ದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ಶಿಂಧೆ ತಮ್ಮ ಆದೇಶದಲ್ಲಿ, ಸತ್ಯಕಿ ಸಲ್ಲಿಸಿದ ಸಿಡಿಯನ್ನು ನ್ಯಾಯಾಲಯದ ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್‌ನಲ್ಲಿ ಪ್ರಸಾರ ಮಾಡುವಾಗ ಅದು ಖಾಲಿಯಾಗಿತ್ತು. ಅದರಲ್ಲಿ ಯಾವುದೇ ಡೇಟಾ ಇರಲಿಲ್ಲ ಎಂದು ಗಮನಸೆಳೆದರು.

ಸತ್ಯಕಿ ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65ಬಿ ಅಡಿಯಲ್ಲಿ ಕಡ್ಡಾಯ ಪ್ರಮಾಣಪತ್ರವನ್ನು ಸಿಡಿಗೆ ಲಗತ್ತಿಸಿದ್ದಾರೆ ಎಂದು ನ್ಯಾಯಾಧೀಶರು ಗಮನಿಸಿದರು.

“ದೂರುದಾರರು ಪ್ಲೇ ಮಾಡಲು ಕೋರಿರುವ ದೂರಿನಲ್ಲಿ ಉಲ್ಲೇಖಿಸಲಾದ ಯುಆರ್‌ಎಲ್‌ಗೆ ಪ್ರಮಾಣಪತ್ರವನ್ನು ಬಳಸಲಾಗುವುದಿಲ್ಲ. ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65-ಬಿ ಪ್ರಕಾರ ಯುಆರ್‌ಎಲ್‌ ಅನ್ನು ಪ್ರಮಾಣಪತ್ರವು ಬೆಂಬಲಿಸುವುದಿಲ್ಲ. ಆದ್ದರಿಂದ, ಯುಆರ್‌ಎಲ್‌ ಅನ್ನು ಸಾಕ್ಷ್ಯದಲ್ಲಿ ಸ್ವೀಕಾರಾರ್ಹವಲ್ಲ” ಎಂದು ನ್ಯಾಯಾಧೀಶರು ಹೇಳಿದರು.

2023 ರಲ್ಲಿ, ಆಪಾದಿತ ಮಾನನಷ್ಟ ಭಾಷಣವನ್ನು ಕೇಳಿದ ನಂತರ ದೂರುದಾರರು ತಕ್ಷಣ ದೂರು ದಾಖಲಿಸಿದ್ದಾರೆ ಎಂದು ವಿಶೇಷ ನ್ಯಾಯಾಲಯವು ಗಮನಿಸಿತು. “2023 ರಲ್ಲಿ, ಆಪಾದಿತ ಮಾನನಷ್ಟ ಭಾಷಣವನ್ನು ನೀಡಿದ, ಪ್ರಸಾರ ಮಾಡಿದ ಕಾರಣಕ್ಕೆ ಪ್ರಕರಣವನ್ನು ದಾಖಲಿಸಲಾಗಿದೆ. ಆದ್ದರಿಂದ, ಈ ನ್ಯಾಯಾಲಯದಲ್ಲಿ ಯುಆರ್‌ಎಲ್‌ ಅನ್ನು ಪ್ಲೇ ಮಾಡಲು ಸಾಧ್ಯವಿಲ್ಲ. ದೂರುದಾರರು ತಮ್ಮ ಪ್ರಕರಣವನ್ನು ಸಮಂಜಸವಾದ ಅನುಮಾನ ಮೀರಿ ಸಾಬೀತುಪಡಿಸಬೇಕು. ಈ ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ಈ ನ್ಯಾಯಾಲಯವು ಕಂಡುಕೊಳ್ಳುತ್ತದೆ. ದೂರುದಾರರ ಅರ್ಜಿಯನ್ನು ತಿರಸ್ಕರಿಸಲಾಗುವುದು” ಎಂದು ಹೇಳಿದರು.

ಈ ಚರ್ಚೆಗಳೊಂದಿಗೆ ನ್ಯಾಯಾಲಯವು ನ್ಯಾಯಾಲಯದ ಕೋಣೆಯಲ್ಲಿ ಯೂಟ್ಯೂಬ್‌ ವೀಡಿಯೊವನ್ನು ಪ್ಲೇ ಮಾಡಬೇಕೆಂಬ ಸತ್ಯಕಿ ಅವರ ಅರ್ಜಿಯನ್ನು ವಜಾಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...