Homeಮುಖಪುಟಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

ಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಸಾವರ್ಕರ್ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದ ದೂರುದಾರರಾಗಿರುವ ಸತ್ಯಕಿ ಸಾವರ್ಕರ್ ಅವರು, ಮಹಾತ್ಮ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ವಿನಾಯಕ್ ಗೋಡ್ಸೆಯ ಮೊಮ್ಮಗ ಎಂಬ ವಾಸ್ತವ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಲೋಕಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ವಕೀಲ ಮಿಲಿಂದ್ ಪವಾರ್ ಮೂಲಕ ಪುಣೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ರಾಹುಲ್ ಗಾಂಧಿ, “ದೂರುದಾರ ಸತ್ಯಕಿ ಅವರು ತಾನು ವಿನಾಯಕ ಸಾವರ್ಕರ್ ಅವರ ಸೋದರಳಿಯ ಅಶೋಕ್ ಸಾವರ್ಕರ್ ಅವರ ಮಗ ಎಂದು ಹೇಳಿಕೊಂಡಿದ್ದಾರೆ. ಆದರೆ, ತನ್ನ ತಾಯಿ ಹಿಮಾನಿ ಅವರು ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ಗೋಡ್ಸೆಯ ಮಗಳು ಎಂಬ ಅಂಶವನ್ನು ಅವರು ಮರೆಮಾಚಿದ್ದಾರೆ” ಎಂದಿದ್ದಾರೆ.

ನಾಥೂರಾಮ್ ಗೋಡ್ಸೆ ಮತ್ತು ಗೋಪಾಲ್ ಗೋಡ್ಸೆ ಇಬ್ಬರೂ ಗಾಂಧಿ ಕೊಲೆ ಪ್ರಕರಣದ ಅಪರಾಧಿಗಳು

“ಸತ್ಯಕಿ ಅವರು ತನ್ನ ದೂರಿನ ಜೊತೆಗೆ ‘ತಂದೆಯ ಕಡೆಯ’ ವಂಶವೃಕ್ಷವನ್ನು ಮಾತ್ರ ಬಹಿರಂಗಪಡಿಸಿದ್ದಾರೆ. ‘ತಾಯಿಯ ಕಡೆಯ’ ವಂಶವೃಕ್ಷವನ್ನು ಬಹಿರಂಗಪಡಿಸಿಲ್ಲ. ಇದರಿಂದಾಗಿ ಅವರು (ಸತ್ಯಕಿ) ಗೋಪಾಲ್ ಗೋಡ್ಸೆಯ ಮೊಮ್ಮಗ ಎಂಬ ಅಂಶವು ದಾಖಲಾಗಿಲ್ಲ” ಎಂದು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಮಹಾತ್ಮಾ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ಸಾವರ್ಕರ್ ಕೂಡ ‘ಸಹ-ಆರೋಪಿ’ ಆಗಿದ್ದರು. ಆದರೆ, ಸರಿಯಾದ ಪುರಾವೆಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಲಾಯಿತು, ಶಿಕ್ಷೆಗೆ ಗುರಿಪಡಿಸಲಾಗಿಲ್ಲ. ಈ ಅಂಶವನ್ನು ಸತ್ಯಕಿ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದಲ್ಲದೆ, ಗೋಡ್ಸೆ ಮತ್ತು ಸಾವರ್ಕರ್ ಇಬ್ಬರೂ ‘ಹಿಂದೂ ರಾಷ್ಟ್ರ’ದ ಕಟ್ಟಾ ಬೆಂಬಲಿಗರಾಗಿದ್ದರು. ಭಾರತದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಹೊರಗಿನವರಂತೆ ಹೇಗೆ ಪರಿಗಣಿಸಿದ್ದರು ಮತ್ತು ವಿಭಜನೆಯ ಸಮಯದಲ್ಲಿ ಮಹಾತ್ಮ ಗಾಂಧಿಯವರು ಮುಸ್ಲಿಮರಿಗೆ ‘ದಯಪಾಲಿಸಿದ್ದರು’ ಎಂದು ಪರಿಗಣಿಸಿ ಅವರನ್ನು ಕೊಲ್ಲಲು ಹೇಗೆ ಸಂಚು ರೂಪಿಸಿದರು ಎಂಬುದನ್ನು ತೋರಿಸಲು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ‘ಐತಿಹಾಸಿಕ ಸಂಗತಿಗಳನ್ನು’ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಸಾವರ್ಕರ್ ಎರಡು ರಾಷ್ಟ್ರಗಳ ಸಿದ್ಧಾಂತದ ಪ್ರಮುಖ ಪ್ರತಿಪಾದಕರಾಗಿದ್ದರು. ಇದು ಹಿಂದೂಗಳು ಮತ್ತು ಮುಸ್ಲಿಮರುದ್ದು ‘ವಿಭಿನ್ನ ರಾಷ್ಟ್ರಗಳು’ ಎಂದು ಪ್ರತಿಪಾದಿಸಿದ್ದರು. ಇದನ್ನು ನಂತರ ಮುಸ್ಲಿಂ ಲೀಗ್ ನಾಯಕ ಮೊಹಮ್ಮದ್ ಅಲಿ ಜಿನ್ನಾ ಕೂಡ ಬೆಂಬಲಿಸಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಸಾವರ್ಕರ್ ಜೈಲಿನಲ್ಲಿದ್ದಾಗಿನಿಂದಲೂ ‘ಮುಸ್ಲಿಂ ವಿರೋಧಿ’ ಬರಹಗಳಿಗೆ ಹೆಸರುವಾಸಿಯಾಗಿದ್ದರು” ಎಂಬುವುದಾಗಿ ಅರ್ಜಿಯಲ್ಲಿ ಆರೋಪಿಸಲಾಗಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ದೂರುದಾರ ಸತ್ಯಕಿ ಅವರಿಂದ ರಾಹುಲ್ ಗಾಂಧಿ ಅರ್ಜಿಯಲ್ಲಿ ಮಾಡಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ಕೇಳಿದ್ದಾರೆ.

2023ರಲ್ಲಿ ಲಂಡನ್‌ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದಾರೆ ಎಂದು ಸತ್ಯಕಿ ಸಾವರ್ಕರ್ ಮೊಕದ್ದಮೆ ಹೂಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನಹಾನಿ) ಅಡಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಬೇಕು ಮತ್ತು ಅಪರಾಧ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 357 ಅಡಿ ಅವರಿಂದ ಪರಿಹಾರ ಕೊಡಿಸಬೇಕು ಎಂದು ಸತ್ಯಕಿ ಕೋರಿದ್ದಾರೆ.

ಈ ಪ್ರಕರಣವನ್ನು ತೀರ್ಮಾನಿಸುವಲ್ಲಿ ನಿರ್ಣಾಯಕವಾಗಿರುವ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯೊಂದಿಗೆ ಹೊಂದಿರುವ ನೇರ ಕೌಟುಂಬಿಕ ಸಂಬಂಧವನ್ನು ದೂರುದಾರ ಸತ್ಯಕಿ ಸಾವರ್ಕರ್ ಉದ್ದೇಶಪೂರ್ವಕವಾಗಿ ಬಚ್ಚಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದಲ್ಲದೆ, ದೂರುದಾರ ಸತ್ಯಕಿ ಸಾವರ್ಕರ್ ಸುಳ್ಳು, ಮಾನಹಾನಿಕಾರಕ ಹಾಗೂ ನ್ಯಾಯಾಂಗ ನಿಂದನೆಯ ದೂರು ಸಲ್ಲಿಸಿದ್ದಾರೆ ಎಂದು ಆರೋಪಿಸಿ, ಮತ್ತೊಂದು ಪ್ರತ್ಯೇಕ ಅರ್ಜಿಯನ್ನೂ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಮೇ 9ರಂದು ದೂರುದಾರ ಸತ್ಯಕಿ ಸಾವರ್ಕರ್, ನಾನು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದೇನೆ ಎಂದು ದಾರಿ ತಪ್ಪಿಸುವ ಅರ್ಜಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಎರಡೂ ಪ್ರತ್ಯೇಕ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ದೂರುದಾರ ಸತ್ಯಕಿ ಸಾವರ್ಕರ್ ಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಆಪರೇಷನ್ ಸಿಂದೂರ್ ಪೋಸ್ಟ್‌ಗಾಗಿ ಮುಸ್ಲಿಂ ವಿದ್ಯಾರ್ಥಿನಿಯ ಬಂಧನ: ಕಾಲೇಜು ಮೊದಲು ಶಿಸ್ತಿಗೊಳಪಡಲಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....