Homeಮುಖಪುಟಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

- Advertisement -
- Advertisement -

ಗೋಮಾಂಸ ತಿನ್ನುವುದರ ಬಗ್ಗೆ ಸಾವರ್ಕರ್‌‌‌ಗೆ ಯಾವುದೆ ತಕರಾರು ಇರಲಿಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಭೋಪಾಲ್‌ನಲ್ಲಿ ಶನಿವರ ಹೇಳಿದ್ದಾರೆ. 2024ರಲ್ಲಿ ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಿ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭೋಪಾಲ್‌ನಲ್ಲಿ ನಡೆದ ಜನ ಜಾಗರಣ ಅಭಿಯಾನದಲ್ಲಿ ಮಾತನಾಡಿದ ದಿಗ್ವಿಜಯ ಸಿಂಗ್, ರಾಷ್ಟ್ರೀಯ ಆರ್‌ಎಸ್‌ಎಸ್‌ ಸಿದ್ಧಾಂತದೊಂದಿಗೆ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಹಿಂದು ಧರ್ಮಕ್ಕೂ ಹಿಂದುತ್ವಕ್ಕೂ ಸಂಬಂಧವಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

“ಸಾವರ್ಕರ್ ಅವರು ತಮ್ಮ ಪುಸ್ತಕದಲ್ಲಿ ಹಿಂದೂ ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಅವರು ಎಂದಿಗೂ ಗೋವನ್ನು ‘ಮಾತಾ’ (ತಾಯಿ) ಎಂದು ಪರಿಗಣಿಸಿಲ್ಲ ಮತ್ತು ಅವರಿಗೆ ಗೋಮಾಂಸ ಸೇವಿಸುವುದರ ಬಗ್ಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.

“ನಮ್ಮ ಹೋರಾಟ ಆರ್‌ಎಸ್‌ಎಸ್ ಸಿದ್ಧಾಂತದೊಂದಿಗೆ ಆಗಿದೆ. 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಅವರು ಮೊದಲು ಸಂವಿಧಾನವನ್ನು ಬದಲಾಯಿಸುತ್ತಾರೆ, ನಂತರ ಮೀಸಲಾತಿಯನ್ನು ಕೊನೆಗೊಳಿಸುತ್ತಾರೆ” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಸರ್ಕಾರದ ಆರ್ಥಿಕತೆಯ ದುರಾಡಳಿತವನ್ನು ಬಹಿರಂಗಪಡಿಸಲು ಕಾಂಗ್ರೆಸ್ ಪಕ್ಷವು ನವೆಂಬರ್ 14 ರಂದು ದೇಶಾದ್ಯಂತ ಆಂದೋಲನ ಕಾರ್ಯಕ್ರಮ ‘ಜನ್ ಜಾಗರಣ ಅಭಿಯಾನ’ವನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ:ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. if all downtrodden community ask for separate state for their own development what would be the consequences.
    If All OBC communities supports for sustinence of reservation till they attaining equality in all respect would BJP TAKE such decision.
    If all downtrodden community decide to support one big party in next election what would be the consequences.
    In case if all downtrodden converted to one religion for more population to avoid any troubles in future.
    If China and Japan helps to Downtrodden community to establishment of government.
    How is it possible to do so in this complications. India is a great multi and diversified cultured and unity in all religions society.
    Foolish people instigate for destabilise the existence .
    We are civilized cultured society people
    Have History of 10000 years civilization.

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...