Homeಕರ್ನಾಟಕಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

ಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ರಾಜ್ಯದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿ ವಿ.ಡಿ.ಸಾವರ್ಕರ್‌ ಫೋಟೋ ಇರುವ ಫ್ಲೆಕ್ಸ್ ಅಳವಡಿಸಿ ವಿವಾದಕ್ಕೆ ಸಿಲುಕಿದೆ.

ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದಲ್ಲಿ ವಿ.ಡಿ. ಸಾವರ್ಕರ್ ಇರುವ ಫ್ಲೆಕ್ಸ್ ಒಂದನ್ನು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹಾಕಲಾಗಿದೆ. ಕಾಂಗ್ರೆಸ್‌ ಪಕ್ಷದ ಸೈದ್ಧಾಂತಿಕ ವಿರೋಧಿಯಾದ ಸಾವರ್ಕರ್‌ ಫೋಟೋ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಲೆಕ್ಸ್ ಕಿತ್ತೆಸೆದ ಕಾರ್ಯಕರ್ತರು

ಭಾರತ್ ಜೋಡೋ ಯಾತ್ರೆಯಲ್ಲಿ ವಿ.ಡಿ. ಸಾವರ್ಕರ್ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಜನ ಫೋಟೋ ಕ್ಲಿಕ್ಕಿಸಿಕೊಳ್ಳಲು ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಅನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ.

ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್‌ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಫ್ಲೆಕ್ಸ್ ಪ್ರಕಟಿಸಿರುವ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹೆಸರೂ ಇದೆ.

ಫ್ಲೆಕ್ಸ್ ಹಾಕಲು ಗುತ್ತಿಗೆ ಪಡೆದವರು ಎಲ್ಲ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ಯಾತ್ರೆಯುದ್ದಕ್ಕೂ ಹಾಕಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕಿ ಫ್ಲೆಕ್ಸ್ ಮುದ್ರಿಸಿದ್ದಾರೆ. ಹಾಗಾಗಿ ಈ ಯಡವಟ್ಟು ಸಂಭವಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಕೆಲವರು ಇದು ಕಾಂಗ್ರೆಸ್ ಪಕ್ಷದ ವಿರೋಧಿಗಳ ಕೈವಾಡವೂ ಇರಬಹುದು ಎಂದು ಶಂಕಿಸಿದ್ದಾರೆ.

ಕೇರಳದಲ್ಲೂ ಕಾಣಿಸಿಕೊಂಡಿತ್ತು ಸಾವರ್ಕರ್‌ ಚಿತ್ರ

ಕೇರಳದ ನೆಡುಂಬಸ್ಸೆರಿ ಬಳಿಯ ಅಥಣಿಯಲ್ಲಿ ಯಾತ್ರೆಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿಯ ಚಿತ್ರ ಸೆಪ್ಟೆಂಬರ್‌ 21 ರಂದು ಕಾಣಿಸಿಕೊಂಡಿತ್ತು. ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದರ ನಂತರ ಎಚ್ಚೆತ್ತ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿ ಅದನ್ನು ಮರೆಮಾಚಿದ್ದರು.

ಈ ನಡುವೆ ಪಕ್ಷವೂ ಸ್ಥಳೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯನ್ನು ಘಟನೆಗೆ ಹೊಣೆಯನ್ನಾಗಿಸಿ ಅಮಾನತು ಮಾಡಿತ್ತು. “ಪಕ್ಷದ ಸ್ಥಳೀಯ ಕಾರ್ಯಕರ್ತರೊಬ್ಬರು ಈ ಫ್ಲೆಕ್ಸ್‌ ಕಟ್ಟಿದ್ದಾರೆ. ಅವರು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಿ ಕೊಡುವಂತೆ ಫ್ಲೆಕ್ಸ್‌‌ ಮುದ್ರಣ ಮಾರಾಟಗಾರರನ್ನು ಕೇಳಿದ್ದರು. ಅದನ್ನು ಮುದ್ರಿಸುವಾಗ ಈ ಚಿತ್ರವೂ ಪ್ರಮಾದದಿಂದಾಗಿ ಮುದ್ರಣಗೊಂಡಿದೆ. ಸಮಸ್ಯೆ ಗಮನಕ್ಕೆ ಬಂದ ಕೂಡಲೇ ತೆಗೆಸಲು ಸೂಚನೆ ನೀಡಲಾಗಿದೆ” ಎಂದು ಕಾಂಗ್ರೆಸ್‌ ಮುಖಂಡರು ಸಮಜಾಯಿಷಿ ನೀಡಿದ್ದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ

ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸೇರಿದಂತೆ ಐವರನ್ನು ಖುಲಾಸೆಗೊಳಿಸಿ ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯ ಬುಧವಾರ (ನವೆಂಬರ್ 26) ತೀರ್ಪು ನೀಡಿದೆ ಎಂದು ಬಾರ್ & ಬೆಂಚ್ ವರದಿ...

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ -...