Homeಮುಖಪುಟಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಡಿಗೆ ಮಾಡಿದ ಅಪಮಾನ: ಎಚ್‌ಡಿಕೆ ಆಕ್ರೋಶ

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಡಿಗೆ ಮಾಡಿದ ಅಪಮಾನ: ಎಚ್‌ಡಿಕೆ ಆಕ್ರೋಶ

- Advertisement -
- Advertisement -

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಿಪಡಿಸಿದ್ದಾರೆ.

ಯಲಹಂಕದ ಡೈರಿ ವೃತ್ತದ ಬಳಿ 34 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೇಲ್ಸೇತುವೆಗೆ ’ಸ್ವಾತಂತ್ರ್ಯ ಯೋಧ ವೀರ ಸಾವರ್ಕರ್‌’ ಎಂದು ಹೆಸರಿಡಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧರಿಸಿದೆ. ಸಾವರ್ಕರ್‌ ಜನ್ಮದಿನವಾದ ಮೇ 28 ರಂದು ಮೇಲ್ಸೇತುವೆ ಸಿಎಂ ಯಡಿಯೂರಪ್ಪನವರಿಂದ ಉದ್ಘಾಟನೆಯಾಗಲಿದೆ ಯಲಹಂಕ ಕ್ಷೇತ್ರದ ಶಾಸಕರಾದ ಎಸ್‌.ಆರ್‌ ವಿಶ್ವನಾಥ್‌ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಎಚ್‌.ಡಿ ಕುಮಾರಸ್ವಾಮಿಯವರು, ಸ್ವಾತಂತ್ರ್ಯಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹ ಪಡಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.


ಇದನ್ನೂ ಓದಿ: ಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ? 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಮನುವ್ಯಾದಿಗಳಿಗೆ ಸಾವರ್ಕರ್ ಮತ್ತು ಗೋಡ್ಸೆಗಳೇ ಆದರ್ಶ ಪುರುಷರು.

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಆಡಳಿತದ 10 ವರ್ಷಗಳಲ್ಲಿ ‘ED’ ದಾಳಿಗಳಲ್ಲಿ ಹೆಚ್ಚಳ: ವರದಿ

0
ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ 'ಇಡಿ' ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ...