Homeಕರ್ನಾಟಕಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

- Advertisement -
- Advertisement -

ಗುಜರಾತ್ ಮೂಲಕ ಅಮುಲ್ ಹಾಲು ಮತ್ತು ಮೊಸರಿನ ಉತ್ಪನ್ನಗಳು ಬೆಂಗಳೂರು ಮಾರುಕಟ್ಟೆಗೆ ಲಗ್ಗೆ ಹಿಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದರಿಂದಾಗಿ ನಮ್ಮ ನಂದಿನಿ ಹಾಲಿನ ಮಾರುಕಟ್ಟೆ ಮೇಲೆ ನಕರಾತ್ಮಕ ಪರಿಣಾಮ ಬೀರಲಿದ್ದು, ರೈತರಿಗೆ ಅನ್ಯಾಯವಾಗಲಿದೆ ಎಂಬ ಆತಂಕ ವ್ಯಕ್ತವಾಗಿದೆ. ಹಾಗಾಗಿ ಕನ್ನಡಿಗರು ಟ್ವಿಟರ್‌ನಲ್ಲಿ #SaveNandini #SaveKMF ಹ್ಯಾಸ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿದ್ದಾರೆ.

ಈ ಹಿಂದೆ ಮಂಡ್ಯದಲ್ಲಿ ಅಮಿತ್ ಶಾರವರು ಕೆಎಂಎಫ್‌ನೊಂದಿಗೆ ಅಮುಲ್ ವಿಲೀನ ಮಾಡುವುದಾಗಿ ಹೇಳಿದ್ದಾಗಲೂ ಭಾರೀ ವಿರೋಧ ಕೇಳಿಬಂದಿತ್ತು. ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ಪಕ್ಷಗಳು ಸಹ ಅಮುಲ್ ಆಗಮನಕ್ಕೆ ವಿರೋಧ ವ್ಯಕ್ತಪಡಿಸಿವೆ.

“ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ….” ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು? ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1200 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಕಿಡಿಕಾರಿದ್ದಾರೆ.

ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್ ಪಕ್ಷ ಸಹ ಅಮುಲ್‌ಗೆ ವಿರೋಧ ವ್ಯಕ್ತಪಡಿಸಿದೆ. “ರಾಜ್ಯದೆಲ್ಲೆಡೆ ಕೆಎಂಎಫ್ ನಂದಿನಿಯ ಹಾಲು, ತುಪ್ಪ, ಬೆಣ್ಣೆ ಸಮರ್ಪಕವಾಗಿ ಸಿಗದೇ ಇರುವ ಸನ್ನಿವೇಶದಲ್ಲಿ ಗುಜರಾತ್ ನ ಅಮುಲ್ ಸಂಸ್ಥೆಯು ಆನ್ ಲೈನ್ ಮಾರುಕಟ್ಟೆಗೆ ಮುಂದಾಗಿರುವ ಈ ಬೆಳವಣಿಗೆ ಏನನ್ನು ಸೂಚಿಸುತ್ತಿದೆ? ನಂದಿನಿ ಹಾಲು ನಂಬಿ ಬದುಕುತ್ತಿರುವ ಅಸಂಖ್ಯ ಕನ್ನಡಿಗರ ಕೆಲಸದ ಮೇಲೆ ಇದು ಕರಿನೆರಳಿನಂತೆ ಭಾಸವಾಗುವುದಿಲ್ಲವೆ” ಎಂದು ಪ್ರಶ್ನಿಸಿದೆ.

ಕೆಎಂಎಫ್ ನಂದಿನಿ ಎಂಬ ನಮ್ಮ ನಾಡಿನ ಹೆಮ್ಮೆಯ ಸಂಸ್ಥೆಯನ್ನು ಹಂತ ಹಂತವಾಗಿ ಮುಗಿಸುವ ದುಷ್ಟ ಯೋಜನೆಯ ಭಾಗವಾಗಿ ಈ ಬೆಳವಣಿಗೆ ಕಾಣುತ್ತಿದೆ. ನೇರವಾಗಿ ವಿಲೀನ ಮಾಡಲು ಸಾಧ್ಯವಿಲ್ಲದಾಗ, ಈ ರೀತಿಯ ಕುತಂತ್ರಗಳು ಶುರುವಾಗುತ್ತವೆ. ದೈತ್ಯ ಸಂಸ್ಥೆ ಜತೆ ಸ್ಪರ್ಧೆ ಇದು ಎಂದು ಸುಮ್ಮನೆ ಕುಳಿತರೆ, ಭವಿಷ್ಯ ಅಯೋಮಯವಾಗಲಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...