Homeಕರ್ನಾಟಕಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟದಿಂದ ಜುಲೈ 10 ರಂದು ಶಿವಮೊಗ್ಗ ಬಂದ್ ಗೆ ಕರೆ

ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟದಿಂದ ಜುಲೈ 10 ರಂದು ಶಿವಮೊಗ್ಗ ಬಂದ್ ಗೆ ಕರೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಕುಡಿಯುವ ನೀರು ತರುವ ಯೋಜನೆಗೆ ಮಲೆನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ಜೂನ್ 22 ರಂದು ಸಾಗರದಲ್ಲಿ ಸಭೆ ಸೇರಿದ್ದ ನೂರಾರು ಜನರು ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ಅಸ್ತಿತ್ವಕ್ಕೆ ತಂದಿದ್ದು ಒಕ್ಕೂಟದ ವತಿಯಿಂದ ಈ ಯೋಜನೆ ವಿರೋಧಿಸಿ ಜುಲೈ 10 ರಂದು ಶಿವಮೊಗ್ಗ ಬಂದ್ ಗೆ ಕರೆ ನೀಡಲಾಗಿದೆ.

ಸಾಗರ ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆಯಿದೆ. ಈ ಭಾಗದಲ್ಲಿ ಶರಾವತಿ ನದಿ ಇದ್ದರೂ ಸಮಗ್ರ ನೀರಾವರಿ ಯೋಜನೆ ಇಲ್ಲ. ಮುಳುಗಡೆಯಾಗುವ ಸಾಗರ, ಹೊಸನಗರಕ್ಕೆ ನೀರಾವರಿಗಾಗಿ ನೀರು ಕೊಡಬೇಕು. ಜೋಗದ ಪಕ್ಕದ ತಾಲ್ಲೂಕು ಸೊರಬ, ಶಿಕಾರಿಪುರ ಬರದಿಂದ ನರಳುತ್ತಿವೆ. ಸಾಗರ ತಾಲ್ಲೂಕಿನ 133 ಹಳ್ಳಿಗಳಗೆ ಟ್ಯಾಂಕರ್ ಮೂಲಕ ನೀರು ಕೊಡುವ ಪರಿಸ್ಥಿತಿ ಬಂದಿದೆ. ಸಾಗರದ ಅರ್ಧ ಭಾಗದಲ್ಲಿ ನೀರಿನ ಅಭಾವವಿದೆ. ಮೊದಲು ನಮಗೆ ನೀರು ಕೊಟ್ಟು ನಂತರ ಯೋಜನೆಯನ್ನು ಜಾರಿಗೊಳಿಸಲಿ. ಡಿಪಿಆರ್ ಪ್ರಸ್ತಾಪ ಕೈಬಿಟ್ಟು ಇಲ್ಲಿನ ಕುಡಿಯುವ ನೀರಿನ ಕೊರತೆಯ ಡಿಪಿಆರ್ ಮಾಡಬೇಕು. ಇಲ್ಲಿನ ನೀರು ಮೊದಲು ಶಿವಮೊಗ್ಗ ಜಿಲ್ಲೆಯ ಕೃಷಿ ಉದ್ದೇಶಕ್ಕೆ ಬಳಕೆಯಾಗಬೇಕು. ಸಮುದ್ರಕ್ಕೆ ಹೋಗುವ ನೀರನ್ನು ನಮಗೆ ನೀಡಿ ಎಂಬುದು ಸ್ಥಳೀಯರ ಹಕ್ಕೊತ್ತಾಯವಾಗಿದೆ.

ವಿದ್ಯುತ್ ಉತ್ಪಾದನೆಗೆ ಇರುವ ಈ ನದಿಯಿಂದ ನಾವು ಪ್ರಯೋಜನ ಪಡೆದಿಲ್ಲ. ಬರೀ ತ್ಯಾಗ ಮಾಡಿದ್ದೀವಿ. ನೀವು ಕುಡಿಯುವ ನೀರಿಗಾಗಿ ಬಳಸಿದರೆ ನಮಗೆ ಮೊದಲು ಆದ್ಯತೆ ನೀಡಿ. 3ಲಕ್ಷ ಎಕರೆ ಭೂಮಿ ನೀರಾವರಿ ಸೌಲಭ್ಯವಿಲ್ಲದೇ ಒಂದೂ ಬೆಳೆ ಬೆಳೆಯಲಾಗದೆ ಉಳಿದಿದೆ. ಹೀಗಿರುವಾಗ ನಮ್ಮನ್ನು ಕಡೆಗಣಿಸುವುದು ಸರಿಯಲ್ಲ ಎಂದು ಆರೋಪಿಸಿದ್ದಾರೆ.

ಯೋಜನೆ ಕೈಬಿಡಲು ಸರ್ಕಾರಕ್ಕೆ ಹದಿನೈದು ದಿನಗಳ ಗಡುವು ನೀಡಿದ್ದು ಸರ್ಕಾರ ಹಿಂದೆ ಸರಿಯದಿದ್ದರೆ ಹೋರಾಟ ತೀವ್ರಗೊಳ್ಳಲಿದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಜಿಲ್ಲೆಯ ಪ್ರತಿಯೊಂದು ಸಂಘ ಸಂಸ್ಥೆಗಳು ಬೆಂಬಲ ನೀಡಿ ಹೋರಾಟದಲ್ಲಿ ಪಾಲ್ಗೊಳ್ಳಬೇಕೇಂದು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಎಚ್.ಬಿ ರಾಘವೇಂದ್ರ, ನಾ.ಡಿಸೋಜಾ, ಹೆಗ್ಗೋಡು ಪ್ರಸನ್ನ, ಶಂಕರ್ ಶರ್ಮಾ, ಹರ್ಷ ಕುಮಾರ್ ಕುಗ್ವೆ, ಮೇಘರಾಜ್, ಪರಮೇಶ್ವರ್, ಶ್ರೀಂಕಂಠ ಕೂಡಿಗೆ, ಅಶೋಕ್ ಮುಂತಾದವರು ಭಾಗವಹಿಸಿದ್ದರು.

ಇನ್ನೊಂದು ಕಡೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ ಕೂಡ ಯೋಜನೆ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿಯೂ ಸಾಕಷ್ಟು ವಿರೋಧ ವ್ಯಕ್ತವಾಗಿದೆ. #SaveSharavathiRiver ಎಂಬ ಹ್ಯಾಷ್ ಟ್ಯಾಗ್ ಬಳಸಿ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...