HomeUncategorized'ನಾಡ ಉಳಿಸಿ ಸಮಾವೇಶ': ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ - ಬಡಗಲಪುರ...

‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ರೈತರ ಭೂಮಿಗೆ ಕೈ ಹಾಕಿದರೆ ಸರಕಾರಕ್ಕೆ ಗಂಡಾಂತರ – ಬಡಗಲಪುರ ನಾಗೇಂದ್ರ ಎಚ್ಚರಿಕೆ!

- Advertisement -
- Advertisement -

ದೇವನಹಳ್ಳಿ, ಬೆಂಗಳೂರು: ವಿಶ್ವ ವ್ಯಾಪಾರ ಒಪ್ಪಂದಗಳ ಪರಿಣಾಮವಾಗಿ ಕಾರ್ಪೊರೇಟ್ ಯೋಜನೆಗಳು ರೈತರು ಮತ್ತು ಜನಚಳವಳಿಗಳ ಹಕ್ಕುಗಳನ್ನು ಹತ್ತಿಕ್ಕಲು ಯತ್ನಿಸುತ್ತಿವೆ ಎಂದು ಬಡಗಲಪುರ ನಾಗೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಾಡ ಉಳಿಸಿ ಸಮಾವೇಶ’ದಲ್ಲಿ ಇಂದು (ಜುಲೈ 4) ಮಾತನಾಡಿದ ಅವರು, ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯದ ಇತಿಹಾಸದಲ್ಲಿ ‘ಐತಿಹಾಸಿಕ ದಾಖಲೆ’ ಎಂದು ಬಣ್ಣಿಸಿ, ಸರ್ಕಾರವು ಬ್ರಿಟಿಷರ ಪದ್ಧತಿಗಳನ್ನೇ ಮುಂದುವರೆಸುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

“ನಾವು ‘ನೇಗಿಲ ಯೋಗಿ’ಯ ಹಾಡನ್ನು ಕೇಳಿದ್ದೇವೆ. ಆ ಸಂದರ್ಭದಲ್ಲಿ ನಾಡಿನ ಜನಚಳವಳಿಗಳಲ್ಲಿ ಹಸಿರು, ನೀಲಿ, ಕೆಂಪು ಬಾವುಟುಗಳು ಒಂದಾಗಿದ್ದವು. ಈಗಲೂ ಅದೇ ಐಕ್ಯತೆ ಇದೆ” ಎಂದು ನಾಗೇಂದ್ರ ಸ್ಮರಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ನೀತಿಗಳನ್ನು ಅನುಸರಿಸಿ ರೈತರ ಭೂಮಿಗೆ ಕೈ ಹಾಕುತ್ತಿವೆ ಎಂದು ಅವರು ಆರೋಪಿಸಿದರು.

ಐತಿಹಾಸಿಕ ದೇವನಹಳ್ಳಿ ಹೋರಾಟ – 1184 ದಿನಗಳ ಕೆಚ್ಚೆದೆಯ ಸತ್ಯಾಗ್ರಹ: ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಚಳವಳಿ 384 ದಿನಗಳ ಕಾಲ ನಡೆದಿತ್ತು. ಆದರೆ, ದೇವನಹಳ್ಳಿ ಹೋರಾಟ ಈಗಾಗಲೇ 1184 ದಿನಗಳನ್ನು ದಾಟಿದೆ. ಇದು ಸರಕಾರದ ವಿರುದ್ಧ ನಡೆದ ದಿಟ್ಟ ಹೋರಾಟವಾಗಿದೆ ಎಂದು ನಾಗೇಂದ್ರ ಒತ್ತಿ ಹೇಳಿದರು. “ಸಂಯುಕ್ತ ಹೋರಾಟವು ಈ ಚಳವಳಿಗೆ ಬೆನ್ನೆಲುಬಾಗಿ ನಿಂತು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೋರಾಟವನ್ನಾಗಿಸಿದೆ. ರೈತರ ಮತ್ತು ಭೂಮಿಯ ವಿಷಯದಲ್ಲಿ ರಾಜ್ಯದ ಎಲ್ಲ ವರ್ಗಗಳೂ ಒಂದಾಗಿರುವುದು ವಿಶಿಷ್ಟವಾಗಿದೆ” ಎಂದರು.

ಈ ಹೋರಾಟವು ನಾಡಿನ ಜಲ ಮತ್ತು ಸಂಪತ್ತನ್ನು ಉಳಿಸುವಲ್ಲಿ ರೂಪುಗೊಂಡ ಅಪರೂಪದ ಚಳವಳಿಯಾಗಿದೆ. ಇದು ಭವಿಷ್ಯದಲ್ಲಿ ಅನಿಷ್ಟ ದುಷ್ಟಕೂಟಗಳನ್ನು ನಾಶಮಾಡಲು ನಾಂದಿಯಾಗುತ್ತದೆ ಎಂದು ಬಡಗಲಪುರ ನಾಗೇಂದ್ರ ಭವಿಷ್ಯ ನುಡಿದರು.

ಬಿಜೆಪಿ-ಕಾಂಗ್ರೆಸ್ ಕಾರ್ಪೊರೇಟ್‌ಗಳ ‘ಒಂದೇ ನಾಣ್ಯದ ಎರಡು ಮುಖಗಳು’: “ಒಂದು ಕಡೆ ಮೋದಿ ಸರಕಾರ, ಮತ್ತೊಂದು ಕಡೆ ಸಿದ್ದರಾಮಯ್ಯ ಸರಕಾರ. ಎರಡು ಬೇರೆ ಬೇರೆ ಪಕ್ಷಗಳು, ಆದರೆ ಅವುಗಳ ನೀತಿಗಳು ಒಂದೇ. ಇವೆರಡೂ ಕಾರ್ಪೊರೇಟ್‌ ನೀತಿಗಳನ್ನು ಮುಂದುವರೆಸುತ್ತಿವೆ. ಆ ನಿಟ್ಟಿನಲ್ಲಿ ಭೂಮಿಗೆ ಕೈ ಹಾಕಕ್ಕೆ ಬಂದಿವೆ” ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇವನಹಳ್ಳಿ ಹೋರಾಟವು ಸರ್ಕಾರಗಳಿಗೆ ‘ಬಿಸಿ ಮುಟ್ಟಿಸಿದೆ’. “ಈಗ 10 ದಿನಗಳು ಸಮಯ ತೆಗೆದುಕೊಂಡು ಬ್ರಿಟಿಷರ ಪದ್ಧತಿಯನ್ನು ಮುಂದುವರೆಸಲು ಹೊರಟಿದೆ” ಎಂದು ಅವರು ತೀವ್ರವಾಗಿ ಖಂಡಿಸಿದರು.

ರೈತರು, ದಲಿತರು, ಕಾರ್ಮಿಕರ ಸ್ಪಷ್ಟ ಎಚ್ಚರಿಕೆ: “ಇದು ಬಸವಣ್ಣ, ಸಂಗೊಳ್ಳಿ ರಾಯಣ್ಣ, ಟಿಪ್ಪು ಸುಲ್ತಾನ, ಕಿತ್ತೂರು ರಾಣಿ ಚೆನ್ನಮ್ಮನ ನಾಡು. ಇಲ್ಲಿ ಸಾಧು-ಸಂತರು, ಸೂಫಿಗಳು ತಿರುಗಾಡಿದ ನೆಲ. ರೈತರು ಈಗ ಕೃಷಿ ಸಂಸ್ಕೃತಿಯನ್ನು ಉಳಿಸಲು ಹೊರಟಿದ್ದಾರೆ. ದಲಿತರು, ರೈತರು, ಕಾರ್ಮಿಕರು, ಕಲಾವಿದರು, ಸಾಹಿತಿಗಳು ನಾವೆಲ್ಲರೂ ಸರಕಾರಕ್ಕೆ ಸ್ಪಷ್ಟ ಸಂದೇಶ ಕೊಡುತ್ತಿದ್ದೇವೆ” ಎಂದು ನಾಗೇಂದ್ರ ಗುಡುಗಿದರು.

“ಸರಕಾರಕ್ಕೆ ಹೇಳುವುದು ಒಂದೇ, ನಾವು ಕೈಗಾರಿಕೆಗಳಿಗೆ ಭೂಮಿಯನ್ನು ಕೊಡುವುದಿಲ್ಲ. ಬಲವಂತದಿಂದ ಕಿತ್ತುಕೊಳ್ಳಲು ಪ್ರಯತ್ನ ಮಾಡಲು ಮುಂದಾದರೆ, ಒಂದಿಂಚು ಕೂಡ ಕೊಡುವುದಿಲ್ಲ. ಸಿದ್ದರಾಮಯ್ಯ ನಮ್ಮ ಭೂಮಿ ನಮಗೆ ನೀಡುವ ಭರವಸೆ ಇದೆ” ಎಂದು ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯಗೆ ನೇರ ಸವಾಲು: ‘ಭೂಮಿ ತಂಟೆಗೆ ಬಂದರೆ ರಸ್ತೆಯಲ್ಲಿ ತಿರುಗಾಡಲು ಸಾಧ್ಯವಿಲ್ಲ!’ “ನಂಜುಂಡಸ್ವಾಮಿ ಅವರ ಶಿಷ್ಯರಾಗಿರುವುದರಿಂದ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಿ. ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಆಗಬೇಕೆನ್ನುವ ವಿಶ್ವಾಸದಲ್ಲಿ ನೀವು ಇದ್ದೀರಿ. ಆದರೆ, ಇದೀಗ ಭೂಮಿಯನ್ನು ಕೈ ಬಿಡದಿದ್ದರೆ, ಮುಂದೆ ನೀವು ವಿಧಾನ ಸೌಧಕ್ಕೆ ಆಯ್ಕೆ ಆಗುವುದಕ್ಕೂ ಸಾಧ್ಯವಿಲ್ಲ. ಭೂಮಿ ತಂಟೆಗೆ ಬಂದರೆ, ನೀವು ರಸ್ತೆಯಲ್ಲಿ ಸುಲಭವಾಗಿ ತಿರುಗಾಡುವುದಕ್ಕೆ ಸಾಧ್ಯವಿಲ್ಲ” ಎಂದು ನಾಗೇಂದ್ರ ನೇರವಾಗಿ ಸವಾಲು ಹಾಕಿದರು.

“ನಮ್ಮ ಭೂಮಿ ನಮಗೆ ಸಿಗುವ ತನಕ ಹೋರಾಟ ನಿಲ್ಲಿಸುವುದಿಲ್ಲ, ನಾವು ಇಲ್ಲಿಂದ ಹೊರಡುವುದಿಲ್ಲ” ಎಂದು ದೃಢವಾಗಿ ಹೇಳಿದರು.

ವೇದಿಕೆಯಲ್ಲಿ ಮಾರೇಗೌಡ, ಗೋಪಿನಾಥ್, ರಮೇಶ್ ಚೀಮಾಚನಹಳ್ಳಿ, ಅಶ್ವಥ್ಥಪ್ಪ, ಪ್ರಭಾ ಬೆಳವಂಗಲ, ರಘು, ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಬಡಗಲಪುರ ನಾಗೇಂದ್ರ, ಎಸ್ ವರಲಕ್ಷ್ಮೀ, ನೂರ್ ಶ್ರೀಧರ್, ಎಚ್.ಆರ್.ಬಸವರಾಜಪ್ಪ, ಎಸ್ ಮೀನಾಕ್ಷಿ ಸುಂದರಂ, ಡಾ.ಸಿದ್ದನಗೌಡ ಪಾಟೀಲ್, ಗುರುಪ್ರಸಾದ್ ಕೆರಗೋಡು, ಯು ಬಸವರಾಜ, ಚುಕ್ಕಿ ನಂಜುಂಡಸ್ವಾಮಿ, ವಿ ನಾಗರಾಜ್, ಪಿ ಪಿ ಅಪ್ಪಣ್ಣ, ಡಿ.ಎಚ್.ಪೂಜಾರ್, ಕೆ.ವಿ.ಭಟ್, ಮಾವಳ್ಳಿ ಶಂಕರ್‌, ರಾಷ್ಟ್ರೀಯ ನಾಯಕಾರ ದರ್ಶನ್‌ ಪಾಲ್‌, ಯುದ್‌ವೀರ್‌ ಸಿಂಗ್‌, ರಾಕೇಶ್‌ ಟಿಕಾಯತ್‌, ಡಾ.ಸುನೀಲಮ್‌, ವಿಜು ಕೃಷ್ಣನ್‌, ಪಿ,ಟಿ.ಜಾನ್‌, ನಟ ಪ್ರಕಾಶ್ ರಾಜ್, ಪತ್ರಕರ್ತ ಇಂದೂಧರ ಹೊನ್ನಾಪುರ, ಚಿಂತಕ ಎಸ್.ಆರ್.ಹಿರೇಮಠ್‌ ಉಪಸ್ಥಿತರಿದ್ದರು.

ದೇವನಹಳ್ಳಿ: ಭೂಸ್ವಾಧೀನ ಅಧಿಸೂಚನೆ  ರದ್ದುಗೊಳಿಸಿ; ಸರಕಾರಕ್ಕೆ ಗುಜರಾತ್‌ನ ಪ್ರಮುಖ ಟ್ರೇಡ್ ಯೂನಿಯನ್ ಮಜೂರ್ ಅಧಿಕಾರ್ ಮಂಚ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...