Homeಕರ್ನಾಟಕನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ - ದರ್ಶನ್ ಪಾಲ್...

ನಾಡ ಉಳಿಸಿ ಸಮಾವೇಶ: ದೇವನಹಳ್ಳಿ ರೈತರ ಭೂಮಿಗೆ ಕೈಹಾಕಿದರೆ ದೇಶಾದ್ಯಂತ ಹೋರಾಟ – ದರ್ಶನ್ ಪಾಲ್ ಪ್ರಬಲ ಎಚ್ಚರಿಕೆ!

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ಪ್ರದೇಶದ ರೈತರ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಕರ್ನಾಟಕ ಸರ್ಕಾರ ಮಣಿಯದಿದ್ದರೆ, ದೇಶಾದ್ಯಂತ ಈ ಹೋರಾಟವನ್ನು ವಿಸ್ತರಿಸಬೇಕಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ನಾಯಕ ದರ್ಶನ್ ಪಾಲ್ ಎಚ್ಚರಿಕೆ ನೀಡಿದ್ದಾರೆ. ಇಂದು (ಶುಕ್ರವಾರ, ಜುಲೈ 4) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದಲ್ಲಿ ಭಾಗವಹಿಸಿದ್ದ ಅವರು, ರೈತರ ಭೂಮಿ ಕಿತ್ತುಕೊಳ್ಳುವ ಸರ್ಕಾರದ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ದೇವನಹಳ್ಳಿ ಹೋರಾಟಕ್ಕೆ ರಾಷ್ಟ್ರಮಟ್ಟದ ಬೆಂಬಲ: “ನಾನು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಇಲ್ಲಿನ ರೈತರ ಹೋರಾಟಕ್ಕೆ ಬೆಂಬಲ ನೀಡಲು ಬಂದಿದ್ದೇನೆ. ಬೆಂಗಳೂರು ಜಿಲ್ಲೆಯ ದೇವನಹಳ್ಳಿಯ ಸಾವಿರಾರು ಜನರು ಭೂಸ್ವಾಧೀನ ವಿರೋಧಿಸಿ ಕಳೆದ 1185 ದಿನಗಳಿಂದ ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು ಸಂತೋಷದ ಸಂಗತಿ,” ಎಂದು ದರ್ಶನ್ ಪಾಲ್ ಹೇಳಿದರು. ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಭೇಟಿಯ ನಂತರ ಹೋರಾಟದ ಮುಂದಿನ ರೂಪುರೇಷೆಗಳು ಸ್ಪಷ್ಟವಾಗಲಿವೆ ಎಂದು ಅವರು ತಿಳಿಸಿದರು.

ಕರಾಳ ಕಾಯ್ದೆಗಳ ವಿರುದ್ಧದ ಹೋರಾಟದ ಪುನರಾವರ್ತನೆ? ಕೇಂದ್ರದ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ 13 ತಿಂಗಳ ಸುದೀರ್ಘ ಹೋರಾಟ ನಡೆಸಿ, ಮೋದಿ ಸರ್ಕಾರ ಕೃಷಿ ವಿರೋಧಿ ಕಾನೂನುಗಳನ್ನು ವಾಪಸ್ ಪಡೆದುಕೊಳ್ಳುವಂತೆ ಮಾಡಿದ್ದನ್ನು ದರ್ಶನ್ ಪಾಲ್ ನೆನಪಿಸಿಕೊಂಡರು. “ಅದೇ ಉತ್ಸಾಹದಲ್ಲಿ ದೇವನಹಳ್ಳಿಯ ಈ ಹೋರಾಟವೂ ನಡೆಯುತ್ತಿದೆ. ಅದಕ್ಕೆ ನಮ್ಮೆಲ್ಲರ ಬೆಂಬಲ ಇದೆ,” ಎಂದು ಅವರು ದೃಢಪಡಿಸಿದರು. “ಮೂರು ವರ್ಷದ ಸುದೀರ್ಘ ಹೋರಾಟ ಎಂದರೆ ಸಾಮಾನ್ಯ ವಿಷಯವಲ್ಲ. ದೇವನಹಳ್ಳಿಯ ರೈತರು ಅದನ್ನು ಮಾಡಿ ತೋರಿಸಿದ್ದಾರೆ,” ಎಂದು ಶ್ಲಾಘಿಸಿದರು.

ರೈತರ ಒಪ್ಪಿಗೆ ಇಲ್ಲದೆ ಒಂದಿಂಚು ಭೂಮಿಯೂ ಇಲ್ಲ! ಅನೇಕ ರಾಜ್ಯ ಸರ್ಕಾರಗಳು 2013ರಲ್ಲಿ ಭೂ ಸ್ವಾಧೀನ ಕಾಯಿದೆಯನ್ನು ಅಂಗೀಕರಿಸಿವೆ. ಈ ಕಾಯಿದೆಯ ಪ್ರಕಾರ, ಸರ್ಕಾರ ಕೈಗಾರಿಕಾ ಉದ್ದೇಶಕ್ಕೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾದರೆ ಶೇಕಡಾ 70ರಷ್ಟು ರೈತರ ಒಪ್ಪಿಗೆ ಕಡ್ಡಾಯ. ಜೊತೆಗೆ, ಜೀವನ ಭದ್ರತೆ ಸೇರಿದಂತೆ ಎಲ್ಲ ಅಂಶಗಳು ಈ ಪ್ರಕ್ರಿಯೆಯಲ್ಲಿ ಒಳಗೊಳ್ಳಬೇಕು. ಆದರೆ, “ದೇವನಹಳ್ಳಿಯಲ್ಲಿ ಶೇಕಡ 80ರಷ್ಟು ಜನ ರೈತರು ಭೂಮಿ ಕೊಡಲ್ಲ ಎಂದು ಬರೆದುಕೊಟ್ಟಿದ್ದಾರೆ. ರೈತರ ಒಪ್ಪಿಗೆ ಇಲ್ಲದೇ ಒಂದಿಂಚು ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳಬಾರದು,” ಎಂದು ದರ್ಶನ್ ಪಾಲ್ ಆಗ್ರಹಿಸಿದರು.

“ಸರ್ಕಾರ ಎಲ್ಲ ಕಡೆಗಳಲ್ಲಿ ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನ ಮುಂದುವರಿಸಿದೆ. ಕೈಗಾರಿಕೆಗಳಿಗೆ ಕೊಟ್ಟಿರುವ ಭೂಮಿಯನ್ನು ಕಿತ್ತು ನಾವು ಅಲ್ಲಿ ಬೆಳೆ ಬೆಳೆಯುತ್ತೇವೆ ಎಂದರೆ ಅವರು ಕೊಡುತ್ತಾರೆಯೇ? ಸರ್ಕಾರ ಭೂಮಿಯನ್ನು ಖಾಸಗಿ ಮಾಲಕರಿಗೆ ಕೊಡುತ್ತಿರುವುದನ್ನು ನಾವು ವಿರೋಧಿಸುತ್ತೇವೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರಕ್ಕೆ ತೀಕ್ಷ್ಣ ಪ್ರಶ್ನೆಗಳು: ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ನಡೆದಾಗ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಬಿಜೆಪಿ ಸರ್ಕಾರ ರೈತರ ವಿರುದ್ಧ ದಾಳಿ ಮಾಡುತ್ತಿದ್ದರೂ, ಪಂಜಾಬ್ ಸರ್ಕಾರ ರೈತರಿಗೆ ನೈತಿಕವಾಗಿ, ಹಣಕಾಸಿನ ಮೂಲಕ ಸಂಪೂರ್ಣ ಬೆಂಬಲ ನೀಡಿತ್ತು. ಆ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ 700ಕ್ಕೂ ಹೆಚ್ಚು ರೈತರಿಗೆ ತಲಾ 5 ಲಕ್ಷ ರೂ. ಪರಿಹಾರ ಮತ್ತು ಮನೆಗೊಂದು ಸರ್ಕಾರಿ ಕೆಲಸ ಘೋಷಿಸಿತ್ತು. “ಆದರೆ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಯಾಕೆ ಈ ರೀತಿ ನಡೆದುಕೊಳ್ಳುತ್ತಿದೆ?” ಎಂದು ದರ್ಶನ್ ಪಾಲ್ ನೇರವಾಗಿ ಪ್ರಶ್ನಿಸಿದರು.

“ರಾಹುಲ್ ಗಾಂಧಿ ದೆಹಲಿಯ ಗಡಿಗಳಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದರು. ಆದರೆ, ಇಲ್ಲಿ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಯಾವ ಪಾತ್ರವನ್ನು ನಿರ್ವಹಿಸಿತೋ, ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ನಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಜನರನ್ನು ಬೆದರಿಸುತ್ತಿದೆ, ಹೋರಾಟಗಾರರ ವಿರುದ್ಧ ಪೊಲೀಸರನ್ನು ಚೂ ಬಿಡಲಾಗುತ್ತಿದೆ,” ಎಂದು ಅವರು ಆಪಾದಿಸಿದರು.

ಜುಲೈ 20ರ ಗಡುವು ಮತ್ತು ರಾಷ್ಟ್ರವ್ಯಾಪಿ ಹೋರಾಟದ ಕರೆ: ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಕನ್ಯಾಕುಮಾರಿ ಇಂದ ಕಾಶ್ಮೀರದವರೆಗೂ ವ್ಯಾಪಿಸಿದೆ. “ರಾಜ್ಯ ಸರ್ಕಾರ ಈ ಹೋರಾಟಕ್ಕೆ ಮಣಿದು, ರೈತರ ಭೂಮಿ ಪಡೆದುಕೊಳ್ಳುವುದಿಲ್ಲ ಎಂದು ಘೋಷಿಸದಿದ್ದರೆ, ದೇಶಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ದೇಶದ ಉದ್ದಗಲಕ್ಕೂ ಬೆಂಬಲ ಕೊಡಬೇಕಾಗುತ್ತದೆ. ಆದ್ದರಿಂದ ಈಗಲೇ ರೈತರ ಪರವಾಗಿ ಘೋಷಣೆ ಮಾಡಿ,” ಎಂದು ದರ್ಶನ್ ಪಾಲ್ ಒತ್ತಾಯಿಸಿದರು.

“ನಾವು ದೆಹಲಿಯ ಗಡಿಗಳನ್ನು ಮಾತ್ರವಲ್ಲ, ದೆಹಲಿಯ ರೈಲ್ವೇ ಸ್ಟೇಷನ್‌ಗಳು ಸೇರಿದಂತೆ ದಿಲ್ಲಿಗೆ ಬರುವ ಎಲ್ಲ ಮಾರ್ಗಗಳನ್ನು ದಿಗ್ಬಂಧನ ಮಾಡಿದ್ದೆವು. ರೈತರು ಈ ಬೆದರಿಕೆಗಳಿಗೆ ಹೆದರುವುದಿಲ್ಲ. ಎಸ್.ಕೆ.ಎಂ. ಅವರ ಜೊತೆಗಿದೆ. ಹಾಗಾಗಿ, ಸರ್ಕಾರ ರೈತಪರ ತೀರ್ಮಾನ ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ದೇಶವ್ಯಾಪಿ ವಿಸ್ತರಿಸುತ್ತೇವೆ,” ಎಂದು ಅವರು ಪುನರುಚ್ಚರಿಸಿದರು.

ರೈತರ ದೃಢ ಸಂಕಲ್ಪಕ್ಕೆ ಅಭಿನಂದನೆ: “ಅರ್ಧ ಎಕರೆ, ಒಂದು ಎಕರೆ ಭೂಮಿಯಲ್ಲಿ ರೈತರು ತರಕಾರಿ, ಹಣ್ಣು-ಹಂಪಲ ಬೆಳೆಯುತ್ತಿದ್ದಾರೆ. ಅದನ್ನು ಈಗ ಕಿತ್ತುಕೊಳ್ಳಲು ಹೊರಟಿದೆ. ಈಗ ಒಂದಿಂಚು ಭೂಮಿಯನ್ನು ಕೂಡ ಕೊಡುವುದಿಲ್ಲ ಎಂದು ತೀರ್ಮಾನ ಮಾಡಿರುವುದು ಸಂತೋಷದ ಸಂಗತಿ, ಅದಕ್ಕೆ ನಮ್ಮ ಅಭಿನಂದನೆಗಳು,” ಎಂದು ದರ್ಶನ್ ಪಾಲ್ ರೈತರ ಸಂಕಲ್ಪವನ್ನು ಶ್ಲಾಘಿಸಿದರು. “ಜಾತಿವಾದಿಗಳಿಗೆ, ಮತೀಯವಾದಿಗಳಿಗೆ ಒಳಗಾಗದೆ, ಒಗ್ಗಟ್ಟಾಗಿ ನಾವು ಹೋರಾಟವನ್ನು ಮುಂದುವರಿಸಬೇಕು,” ಎಂದು ಅವರು ಕರೆ ನೀಡಿದರು.

ವಿಮಾನ ನಿಲ್ದಾಣಗಳ ಸಮೀಪದಲ್ಲಿ ಸರ್ಕಾರಗಳು ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ಮಾಡುತ್ತಿವೆ. ಇದರ ವಿರುದ್ಧ ನಮ್ಮ ಧ್ವನಿ ಎಂದಿಗೂ ಇರುತ್ತದೆ ಎಂದು ಎಸ್‌ಕೆಎಂ ನಾಯಕರು ಸ್ಪಷ್ಟಪಡಿಸಿದರು. ಜುಲೈ 20ರಂದು ನಡೆಯುವ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ದೇವನಹಳ್ಳಿ ರೈತರ ಬೇಡಿಕೆಗಳನ್ನು ಪ್ರಮುಖವಾಗಿ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು ಎಂದು ದರ್ಶನ್ ಪಾಲ್ ತಿಳಿಸಿದರು.

‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...