Homeಕರ್ನಾಟಕಮಣ್ಣು ಉಳಿಸುತ್ತೇವೆ: ರಾಜ್ಯ ಸರ್ಕಾರದೊಂದಿಗೆ ಜ್ಞಾಪನಪತ್ರಕ್ಕೆ ಸಹಿ ಹಾಕಿದ ಈಶಾ ಫೌಂಡೇಷನ್‌

ಮಣ್ಣು ಉಳಿಸುತ್ತೇವೆ: ರಾಜ್ಯ ಸರ್ಕಾರದೊಂದಿಗೆ ಜ್ಞಾಪನಪತ್ರಕ್ಕೆ ಸಹಿ ಹಾಕಿದ ಈಶಾ ಫೌಂಡೇಷನ್‌

ಈ ಹಿಂದೆ ‘ಕಾವೇರಿ ಕೂಗು’ ನಡೆಸಿ ಗಿಡ ನೆಡುವುದಾಗಿ ಹೇಳಿದ್ದ ಜಗ್ಗಿ ವಾಸುದೇವ್‌ ಕೋಟ್ಯಂತರ ಹಣ ಸಂಗ್ರಹಿಸಿರುವ ಆರೋಪ ಎದುರಿಸುತ್ತಿದ್ದಾರೆ. ಈಗ ‘ಮಣ್ಣು ಉಳಿಸಿ’ ಅಭಿಯಾನ ನಡೆಸುತ್ತಿದ್ದಾರೆ.

- Advertisement -
- Advertisement -

ಈಶಾ ಫೌಂಡೇಶನ್ ತನ್ನ ಸೇವ್ ಸಾಯಿಲ್‌ (ಮಣ್ಣು ಉಳಿಸಿ) ಅಭಿಯಾನದ ಭಾಗವಾಗಿ ಮಣ್ಣಿನ ಆರೋಗ್ಯ ಸುಧಾರಿಸುತ್ತೇವೆ ಎಂದು ಕರ್ನಾಟಕ ಸರ್ಕಾರದೊಂದಿಗೆ ಭಾನುವಾರ ಜ್ಞಾಪನ ಪತ್ರಕ್ಕೆ (ಎಂಒಯು) ಸಹಿ ಹಾಕಿದೆ.

ಜ್ಞಾಪಕ ಪತ್ರವು ಎರಡು ಅಥವಾ ಹೆಚ್ಚಿನ ಪಕ್ಷಗಳ ನಡುವಿನ ಒಪ್ಪಂದವಾಗಿದೆ. ಇದು ಕಾನೂನುಬದ್ಧ ಕ್ರಮವೇನೂ ಅಲ್ಲ. ಆದರೆ ಒಪ್ಪಂದದೊಂದಿಗೆ ಮುಂದುವರಿಯಲು ಉಭಯ ಪಕ್ಷಗಳ ಇಚ್ಛೆಯನ್ನು ಸಂಕೇತಿಸುತ್ತದೆ.

‘ಮಣ್ಣು ಉಳಿಸಿ’ ಅಭಿಯಾನ ಆರಂಭಿಸಿರುವ ಸ್ವಯಂ ಘೋಷಿತ ದೇವಗುರು ಜಗ್ಗಿ ವಾಸುದೇವ್ ತಮ್ಮ 100 ದಿನಗಳ ಮೋಟಾರ್ ಸೈಕಲ್ ಪ್ರಯಾಣದ ಅಂಗವಾಗಿ ಭಾನುವಾರ ಬೆಂಗಳೂರಿಗೆ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗಿಯಾದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಂಡನ್ ನಿಂದ ಆರಂಭವಾದ ಅಭಿಯಾನ ಕೊನೆಗೂ ಕಾವೇರಿ ತಲುಪುತ್ತಿದೆ ಎಂದು ಜಗ್ಗಿ ಹೇಳಿದ್ದಾರೆ. ಅಭಿಯಾನದ ಭಾಗವಾಗಿ 27,278 ಕಿ.ಮೀ. ಕ್ರಮಿಸಿದ್ದಾರೆ. ಕಳೆದ 94 ದಿನಗಳಲ್ಲಿ ನಡೆದ 593 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಈಶಾ ಫೌಂಡೇಷನ್‌ ಪ್ರತಿ ದೇಶದ ವಿಶಿಷ್ಟತೆಗಳ ಆಧಾರದ ಮೇಲೆ 193 ರಾಷ್ಟ್ರಗಳಿಗೆ ಪ್ರತ್ಯೇಕ ‘ಮಣ್ಣು ಉಳಿಸಿ’ ನೀತಿಗಳನ್ನು ರೂಪಿಸಿದೆ. ಆ ದೇಶಗಳಿಗೆ ದಾಖಲೆಗಳನ್ನು ಹಸ್ತಾಂತರಿಸಿದೆ. ವಿವಿಧ ದೇಶಗಳು ಆ ದಾಖಲೆಗಳನ್ನು ಗಂಭೀರವಾಗಿ ಪರಿಗಣಿಸಿವೆ ಎಂದು ಜಗ್ಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಪರಿಷ್ಕೃತ ಪಠ್ಯ ಪುಸ್ತಕಗಳನ್ನು ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ

74 ರಾಷ್ಟ್ರಗಳು ಶಿಫಾರಸುಗಳನ್ನು ಜಾರಿಗೆ ತರಲು ಒಪ್ಪಿಕೊಂಡಿವೆ. ಜ್ಞಾಪನ ಪತ್ರಕ್ಕೆ ಸಹಿಹಾಕಿವೆ ಎಂದು ತಿಳಿಸಿದ್ದಾರೆ. ಭಾರತದಲ್ಲಿ ಏಳೆಂಟು ರಾಜ್ಯಗಳು ಜ್ಞಾಪನ ಪತ್ರಕ್ಕೆ ಸಹಿ ಹಾಕುತ್ತಿವೆ. ಕರ್ನಾಟಕವೂ ಸಹಿ ಹಾಕಿದೆ.

“ಯುಎನ್ ಏಜೆನ್ಸಿಗಳ ಪ್ರಕಾರ ಮಣ್ಣಿನಲ್ಲಿ ಸಾವಯವ ಪ್ರಮಾಣವು ಕನಿಷ್ಠ 3 ಪ್ರತಿಶತದಷ್ಟು ಇರಬೇಕು. ಆದರೆ, ವಿಶ್ವದ ಒಂದೇ ಒಂದು ದೇಶ ಈ ಗುರಿ ತಲುಪಿಲ್ಲ” ಎಂದು ಜಗ್ಗಿ ಪ್ರತಿಪಾದಿಸಿದ್ದಾರೆ.

ಅರಮನೆ ಮೈದಾನದಲ್ಲಿ ಜಗ್ಗಿಯವರ ‘ಮಣ್ಣು ಉಳಿಸಿ’ ಕಾರ್ಯಕ್ರಮವನ್ನು ವೀಕ್ಷಿಸಲು ನೂರಾರು ಜನರು ಭಾನುವಾರ ಆಗಮಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಗ್ಗಿ ವಾಸುದೇವ್‌ ಜ್ಞಾಪನ ಪತ್ರಗಳ ದಾಖಲೆಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಂತೆ “ಮಣ್ಣು ಉಳಿಸಿ” ಎಂಬ ಘೋಷಣೆಗಳನ್ನು ಕೂಗಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದರು.

ಯಡಿಯೂರಪ್ಪ ಅವರು ಜಗ್ಗಿಯವರ ಪಾದ ಮುಟ್ಟಿ ಅವರ ಆಶೀರ್ವಾದ ಪಡೆದುಕೊಂಡರು. 25 ಲಕ್ಷ ರೂ. ಬೆಲೆ ಬಾಳುವ BMW 1600 GT ಸೂಪರ್‌ಬೈಕ್‌ನಲ್ಲಿ ಸವಾರಿ ಮಾಡುವ ಮೂಲಕ ಜಗ್ಗಿ ವಾಸುದೇವ್‌ ಸ್ಥಳಕ್ಕೆ ಆಗಮಿಸಿದ್ದರು.

‘ಕಾವೇರಿ ಕೂಗು’ ಹೆಸರಲ್ಲಿ ಕೋಟಿ ಕೋಟಿ ರೂ. ವಂಚನೆ!?

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಈಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ, ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಈ ಹಿಂದೆ ಆದೇಶಿಸಿತ್ತು.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ್ದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿತ್ತು.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿತ್ತು.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಅಕ್ರಮ ಕಟ್ಟಡ ಕುರಿತು ಪ್ರಶ್ನಿಸಿದ್ದಕ್ಕೆ ಸಂದರ್ಶನವನ್ನೇ ಬಿಟ್ಟು ಹೊರಟ ಜಗ್ಗಿ ವಾಸುದೇವ್‌

ಸ್ವಯಂಘೋಷಿತ ದೇವಮಾನವ, ಸದ್ಗುರು ಎಂದೂ ಕರೆಯಲ್ಪಡುವ ಜಗ್ಗಿ ವಾಸುದೇವ್ ಅವರು ತಾಳ್ಮೆಯ ಬಗ್ಗೆ ಅನೇಕ ಸಂದರ್ಭಗಳಲ್ಲಿ ಬೋಧನೆ ಮಾಡಿದ್ದಾರೆ. ಆದರೆ ಬಿಬಿಸಿ ತಮಿಳು ಮಾಧ್ಯಮಕ್ಕೆ ಸಂದರ್ಶನ ನೀಡುವ ವೇಳೆ ಸ್ವತಃ ಜಗ್ಗಿಯವರೇ ತಮ್ಮ ತಾಳ್ಮೆಯನ್ನು ಕಳೆದುಕೊಂಡ ಘಟನೆ ಇತ್ತೀಚೆಗೆ ನಡೆದಿತ್ತು.

ಸಂದರ್ಶನದ ಮಧ್ಯದಲ್ಲೇ ಕ್ಯಾಮೆರಾಗಳನ್ನು ಸ್ವಿಚ್ ಆಫ್ ಮಾಡಲು ಸೂಚಿಸಿದ್ದರು. ಬಿಬಿಸಿ ತಮಿಳಿನ ಕೆ.ಸುಬಗುಣಂ ಅವರು ಜಗ್ಗಿ ವಾಸುದೇವ್‌ ಅವರ ಸಂದರ್ಶನ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಸಂದರ್ಶನದ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪತ್ರಕರ್ತರ ಪ್ರಶ್ನೆಗಳಿಂದ ಜಗ್ಗಿ ವಿಚಲಿತರಾಗಿರುವುದು ಚರ್ಚೆಯಾಗುತ್ತಿದೆ.

ಜಗ್ಗಿ ಆರಂಭಿಸಿರುವ ‘ಮಣ್ಣು ಉಳಿಸಿ ಆಂದೋಲನ’ದ ಕುರಿತು ಸಂದರ್ಶನ ನಡೆಯುತ್ತಿತ್ತು. ಸ್ವಘೋಷಿತ ದೇವಮಾನವರಾದ ಜಗ್ಗಿ ತಮ್ಮ ದ್ವಿಚಕ್ರ ವಾಹನದಲ್ಲಿ ವಿವಿಧ ಸ್ಥಳಗಳಿಗೆ ಪ್ರಯಾಣಿಸಿ ಈ ಅಭಿಯಾನ ನಡೆಸುತ್ತಿದ್ದಾರೆ. ಆದರೆ ಜಗ್ಗಿಯವರ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಪರಿಸರ ಅನುಮತಿಯ ವಿವಾದದ ಕುರಿತು ಪ್ರಶ್ನೆಗಳು ಬರುತ್ತಿದ್ದಂತೆ ಸಿಟ್ಟಿಗೆದ್ದಿದ್ದರು. ಅಂತಿಮವಾಗಿ ಸಂದರ್ಶನವನ್ನು ಮೊಟಕುಗೊಳಿಸಲು ಸೂಚಿಸಿದ್ದರು.

ಕೊಯಮತ್ತೂರು ಜಿಲ್ಲೆಯ ಬೂಲುವಾಪಟ್ಟಿ ಗ್ರಾಮದಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಪೂರ್ವಾನುಮತಿ ಪಡೆದಿಲ್ಲ. ನಿರ್ಮಾಣ ಮುಗಿದ ಸುಮಾರು ಮೂರು ವರ್ಷಗಳ ನಂತರ ಅಗತ್ಯವಿರುವ ಅನುಮತಿಗಳನ್ನು ಕೇಳಲಾಗಿದೆ ಎಂದು 2018ರಲ್ಲಿ ಸದ್ಗುರುಗಳ ಈಶಾ ಫೌಂಡೇಶನ್ ವಿರುದ್ಧ ಕಂಟ್ರೋಲರ್ ಮತ್ತು ಆಡಿಟರ್ ಜನರಲ್‌‌ (ಸಿಎಜೆ) ಗಂಭೀರ ಆರೋಪಗಳನ್ನು ಮಾಡಿದ್ದರು.

ಇದನ್ನೂ ಓದಿರಿ: ‘ಸಾಯಿ ಪಲ್ಲವಿ ಬಾಯಿ ಮುಚ್ಕೊಂಡ್‌ ಫಿಲ್ಮ್‌ ಮಾಡಲಿ’: ಎಚ್.ಆರ್‌.ರಂಗನಾಥ್‌ ಹೇಳಿಕೆಗೆ ಜನಾಕ್ರೋಶ

ಗ್ರಾಮದಲ್ಲಿ 32,856 ಚದರ ಅಡಿ ವಿಸ್ತೀರ್ಣದ ವಿವಿಧ ಕಟ್ಟಡಗಳನ್ನು 1994 ರಿಂದ 2008 ರ ನಡುವೆ ಸೂಕ್ತ ಅನುಮತಿಯೊಂದಿಗೆ ನಿರ್ಮಿಸಲಾಗಿದೆ ಎಂದು ಸಿಎಜಿ ಹೇಳಿದ್ದರು. ಆದರೆ 2005 ಮತ್ತು 2008ರ ನಡುವೆ ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯದೆ ಕಟ್ಟಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು. ಇಶಾ ಸಂಸ್ಥೆಯು 2011ರಲ್ಲಿ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಮತ್ತು ಅನುಮೋದನೆ ನೀಡಬೇಕೆಂದು ಅರಣ್ಯ ಇಲಾಖೆಯನ್ನು ಕೋರಿತ್ತು.

“ಈಶಾ ಫೌಂಡೇಶನ್ ಈಗ ಪರಿಸರಕ್ಕಾಗಿ ಕೆಲಸ ಮಾಡುತ್ತಿದೆ” ಎಂದು ಬಿಬಿಸಿಯ ಸುಬಗುಣಂ ಪ್ರಸ್ತಾಪಿಸುತ್ತಾ “ಕಟ್ಟಡಗಳ ನಿರ್ಮಾಣಕ್ಕೆ ಅನುಮತಿಯನ್ನು ಪಡೆದಿಲ್ಲ ಎಂಬ ಆರೋಪದ ಬಗ್ಗೆ ಸದ್ಗುರುಗಳ ಅಭಿಪ್ರಾಯವೇನು?” ಎಂದು ಕೇಳಿದ್ದರು. ಇದರಿಂದ ತಾಳ್ಮೆ ಕಳೆದುಕೊಂಡು ಸಂದರ್ಶನ ಮೊಟುಕುಗೊಳಿಸಿದ್ದರು. (ಈ ಕುರಿತ ಪೂರ್ಣ ವಿವರ ಓದಲು ಇಲ್ಲಿ ಕ್ಲಿಕ್‌ ಮಾಡಿರಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...