Homeಮುಖಪುಟಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಸಾವಿತ್ರಿಬಾಯಿಯವರು 184 ವರ್ಷಗಳ ಹಿಂದೆ ದಮನಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಮೊದಲ ಶಿಕ್ಷಕಿ.

- Advertisement -
- Advertisement -

19ನೇ ಶತಮಾನದಲ್ಲಿ ಶಿಕ್ಷಣದಲ್ಲಿ ಕ್ರಾಂತಿಯನ್ನು ತಂದು, ಆಧುನಿಕ ಶಿಕ್ಷಣದ ತಾಯಿ, ಮೊದಲ ಮಹಿಳಾ ಶಿಕ್ಷಕಿ ಎಂದು ಕರೆಸಿಕೊಂಡಿರುವವರು ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆಯವರು. ಇವರಿಗೆ ಗೌರವ ಸಲ್ಲಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ಪ್ರತಿವರ್ಷ ಜನವರಿ 3 ರಂದು ‘ಸಾವಿತ್ರಿ ಉತ್ಸವ’ ಆಚರಿಸಲಿದೆ ಎಂದು ಘೋಷಿಸಿದೆ.

ಜನವರಿ 3 ರಂದು ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಇನ್ನು ಮುಂದೆ ಸಾವಿತ್ರಿ ಉತ್ಸವ ಆಚರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

’ಉತ್ಸವದ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಸಾವಿತ್ರಿಬಾಯಿ ಫುಲೆ ಅವರ ಸಮಾಜ ಸುಧಾರಣೆ ಕಾರ್ಯಗಳ ಬಗ್ಗೆ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳು ನಡೆಯಲಿವೆ’ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಡಿ.14 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿರುವ ದೆಹಲಿಯ ಹೋರಾಟನಿರತ ರೈತರು

1831ರ ಜನವರಿ 3 ರಂದು ಮಹಾರಾಷ್ಟ್ರದ ಸತಾರ ಜಿಲ್ಲೆಯ ನೈಗಾಂನ್‌ನಲ್ಲಿ ಹುಟ್ಟಿದ ಸಾವಿತ್ರಿಬಾಯಿಯವರು 184 ವರ್ಷಗಳ ಹಿಂದೆಯೇ ದಮನಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಮೊದಲ ಶಿಕ್ಷಕಿ. ಒಂಬತ್ತನೇ ವರ್ಷದಲ್ಲಿ ಮದುವೆಯಾದ ಸಾವಿತ್ರಿಬಾಯಿಯವರು ಮುಂದೆ ಆಧುನಿಕ ಫೆಮಿನಿಸಂ ಚಳವಳಿಯ ತಾಯಿಯೆಂದು ಗುರುತಿಸಲ್ಪಡುತ್ತಾರೆ. ಪತಿ ಜ್ಯೋತಿಬಾ ಫುಲೆ ಅವರೊಂದಿಗೆ ಮಹಿಳಾ ಸಬಲೀಕರಣದಲ್ಲಿ, ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಮಹಿಳೆಯರ ಹಕ್ಕುಗಳಿಗಾಗಿ ನಿರಂತರವಾಗಿ ಚಳವಳಿಗಳನ್ನು ಸಂಘಟಿಸಿದ ಸಾವಿತ್ರಿಬಾಯಿಯವರು 1848ರಲ್ಲಿ ಪುಣೆಯ ನಾರಾಯಣಪೇಟೆಯ ಬಿಂದೇವಾಡದಲ್ಲಿ ಪತಿ ಜ್ಯೋತಿಬಾರೊಂದಿಗೆ ಕೈಜೋಡಿಸಿ ಮೊದಲ ಬಾರಿಗೆ ಬಾಲಕಿಯರ ಶಾಲೆಯನ್ನು ಪ್ರಾರಂಭಿಸಿದರು.

ಲಿಂಗ ಮತ್ತು ಜಾತಿ ಆಧಾರದಲ್ಲಿ ಸಮಾಜದಲ್ಲಿ ನಡೆಯುತ್ತಿದ್ದ ತಾರತಮ್ಯವನ್ನು ನಿರ್ಮೂಲನೆ ಮಾಡಲು  ಹೋರಾಟ ನಡೆಸಿದರು. 1897ರಲ್ಲಿ ಪ್ಲೇಗ್‌ಪೀಡಿತ ರೋಗಿಗಳ ಸೇವೆಯಲ್ಲಿ ತೊಡಗಿದ್ದಾಗ ಸ್ವತಃ ತಾವೇ ಆ ಕಾಯಿಲೆಯ ಸೋಂಕಿಗೆ ಬಲಿಯಾಗಿ ತೀರಿಕೊಂಡರು.


ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...