Homeಮುಖಪುಟರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು 'ವಂಚನೆ' ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು...

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

- Advertisement -
- Advertisement -

ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕ ಅನಿಲ್ ಅಂಬಾನಿ ಅವರನ್ನು ‘ವಂಚನೆ’ ಎಂದು ವರ್ಗೀಕರಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಈ ಕುರಿತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.

ರಿಸರ್ವ್ ಬ್ಯಾಂಕ್‌ನ ವಂಚನೆ ಅಪಾಯ ನಿರ್ವಹಣೆಯ ಕುರಿತಾದ ನಿರ್ದೇಶನಗಳು ಮತ್ತು ವಂಚನೆಗಳ ವರ್ಗೀಕರಣ, ವರದಿ ಹಾಗೂ ನಿರ್ವಹಣೆಯ ಕುರಿತಾದ ನೀತಿಗೆ ಅನುಗುಣವಾಗಿ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕರನ್ನು ಜೂನ್ 13 ರಂದು ‘ವಂಚನೆ’ ಎಂದು ಎಸ್‌ಬಿಐ ವರ್ಗೀಕರಿಸಿದೆ. ಇದೀಗ ಸಿಬಿಐಗೆ ದೂರು ಸಲ್ಲಿಸಲು ಮುಂದಾಗಿದೆ ಎಂದು ಲೋಕಸಭೆಗೆ ನಿಡಿದ ಲಿಖಿತ ಉತ್ತರದಲ್ಲಿ ಪಂಕಜ್ ಚೌಧರಿ ತಿಳಿಸಿದ್ದಾರೆ.

ವಂಚನೆ ಎಂದು ವರ್ಗೀಕರಿಸಿರುವ ಕುರಿತು ಎಸ್‌ಬಿಐ ಜೂನ್ 24 ರಂದು ಆರ್‌ಬಿಐಗೆ ವರದಿ ಮಾಡಿದೆ. ಜುಲೈ 1 ರಂದು, ರಿಲಯನ್ಸ್ ಕಮ್ಯುನಿಕೇಷನ್ಸ್ ತನ್ನ ಬಹಿರಂಗಪಡಿಸುವಿಕೆಯ ಅನುಸರಣೆಯ ಭಾಗವಾಗಿ ವಂಚನೆ ವರ್ಗೀಕರಣದ ಬಗ್ಗೆ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ಗೆ ಮಾಹಿತಿ ನೀಡಿದೆ ಎಂದು ಸಚಿವ ಚೌಧರಿ ವಿವರಿಸಿದ್ದಾರೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಎಸ್‌ಬಿಐ ನೀಡಿರುವ ಸಾಲದಲ್ಲಿ ಫಂಡ್-ಬೇಸ್ಡ್ ಪ್ರಿನ್ಸಿಪಲ್ ಬಾಕಿ 2,227.64 ಕೋಟಿ ರೂಪಾಯಿಗಳು. ಇದರ ಜೊತೆಗೆ, ಆಗಸ್ಟ್ 26, 2016 ರಿಂದ ಸಂಗ್ರಹವಾದ ಬಡ್ಡಿ ಮತ್ತು ಇತರ ವೆಚ್ಚಗಳು ಹಾಗೂ ನಾನ್-ಫಂಡ್ ಬೇಸ್ಡ್ ಬ್ಯಾಂಕ್ ಗ್ಯಾರಂಟಿ 786.52 ಕೋಟಿ ರೂಪಾಯಿ ಸೇರಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

2016ರ ದಿವಾಳಿತನ ಸಂಹಿತೆಯ ಅಡಿಯಲ್ಲಿ ಟೆಲಿಕಾಂ ಸಂಸ್ಥೆಯು ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಗೆ ಒಳಗಾಗುತ್ತಿದೆ ಎಂದು ತಿಳಿಸಿದ್ದಾರೆ.

ದಿವಾಳಿತನ ಪ್ರಕರಣಗಳನ್ನು ಪರಿಹರಿಸಲು ಮತ್ತು ನಿಷ್ಕ್ರಿಯ ಸ್ವತ್ತುಗಳನ್ನು ತ್ವರಿತವಾಗಿ ಬಿಡುಗಡೆ ಮಾಡಲು ಈ ಸಂಹಿತೆಯು ಕಾನೂನು ಚೌಕಟ್ಟನ್ನು ಒದಗಿಸುತ್ತದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಸಂಬಂಧಿಸಿದ ಸಾಲ ಪರಿಹಾರ ಯೋಜನೆಯನ್ನು (ರೆಸಲ್ಯೂಶನ್ ಪ್ಲಾನ್) ಕ್ರೆಡಿಟರ್‌ಗಳ ಸಮಿತಿಯು (ಕಮಿಟಿ ಆಫ್ ಕ್ರೆಡಿಟರ್ಸ್) ಅನುಮೋದಿಸಿದೆ ಎಂದು ಸಚಿವರು ತಿಳಿಸಿದ್ದು, ಈ ಯೋಜನೆಯನ್ನು ಮಾರ್ಚ್ 6, 2020 ರಂದು ಮುಂಬೈನ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್‌ಗೆ (ಎನ್‌ಸಿಎಲ್‌ಟಿ) ಸಲ್ಲಿಕೆ ಮಾಡಲಾಗಿದೆ. ಆದರೆ, ಈ ಯೋಜನೆಗೆ ಟ್ರಿಬ್ಯೂನಲ್‌ನಿಂದ ಇನ್ನೂ ಅನುಮೋದನೆ ಬಾಕಿಯಿದೆ ಎಂದಿದ್ದಾರೆ.

ಎಸ್‌ಬಿಐ ಈ ಹಿಂದೆ, ಅಂದರೆ ನವೆಂಬರ್ 2020 ರಲ್ಲಿ ಖಾತೆ ಮತ್ತು ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿತ್ತು ಮತ್ತು ಜನವರಿ 2021ರಲ್ಲಿ ಸಿಬಿಐಗೆ ದೂರು ಸಲ್ಲಿಸಿತ್ತು. ಆದಾಗ್ಯೂ, ಜನವರಿ 6, 2021ರಂದು ದೆಹಲಿ ಹೈಕೋರ್ಟ್ ನೀಡಿದ ‘ಯಥಾಸ್ಥಿತಿ’ ಆದೇಶದ ಹಿನ್ನೆಲೆಯಲ್ಲಿ ದೂರನ್ನು ಹಿಂತಿರುಗಿಸಲಾಗಿದೆ ಎಂದು ಸಚಿವ ಚೌಧರಿ ಹೇಳಿದ್ದಾರೆ.

ಸಾಲದಾತರು ಖಾತೆಗಳನ್ನು ವಂಚನೆ ಎಂದು ವರ್ಗೀಕರಿಸುವ ಮೊದಲು ಸಾಲಗಾರರಿಗೆ ತಮ್ಮನ್ನು ತಾವು ಪ್ರತಿನಿಧಿಸಲು ಅವಕಾಶವನ್ನು ಒದಗಿಸಬೇಕೆಂದು ಮಾರ್ಚ್ 2023ರಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮೇರೆಗೆ, ಖಾತೆಯಲ್ಲಿನ ವಂಚನೆ ವರ್ಗೀಕರಣವನ್ನು ಸೆಪ್ಟೆಂಬರ್ 2023ರಲ್ಲಿ ಎಸ್‌ಬಿಐ ರದ್ದುಗೊಳಿಸಿತು ಎಂದು ಸಚಿವರು ಹೇಳಿದ್ದಾರೆ.

ಜುಲೈ 15, 2024 ರಂದು ಆರ್‌ಬಿಐ ಹೊರಡಿಸಿದ ಸುತ್ತೋಲೆಯ ಪ್ರಕಾರ, ವರ್ಗೀಕರಣ ಪ್ರಕ್ರಿಯೆಯನ್ನು ಪುನಃ ನಡೆಸಲಾಯಿತು ಮತ್ತು ಖಾತೆಯನ್ನು ಮತ್ತೊಮ್ಮೆ ‘ವಂಚನೆ’ ಎಂದು ವರ್ಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

2019ರಲ್ಲಿ, ರಿಲಯನ್ಸ್ ಕಮ್ಯುನಿಕೇಷನ್ಸ್‌ ಸುಮಾರು 45,000 ಕೋಟಿ ರೂ.ಗಳ ಸಾಲವನ್ನು ಪಾವತಿಸಲು ಆಸ್ತಿಗಳನ್ನು ಮಾರಾಟ ಮಾಡಲು ವಿಫಲವಾದ ನಂತರ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ ಮೂಲಕ ದಿವಾಳಿತನಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ಹೇಳಿತ್ತು.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...