Homeಮುಖಪುಟಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಮಾಹಿತಿ ಸಲ್ಲಿಸಿದ ಎಸ್ ಬಿಐ

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಮಾಹಿತಿ ಸಲ್ಲಿಸಿದ ಎಸ್ ಬಿಐ

- Advertisement -
- Advertisement -

ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಕೊನೆಗೂ ಚುನಾವಣಾ ಬಾಂಡ್ ಗಳ ಮಾಹಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.

ಬ್ಯಾಂಕ್ ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ನ್ಯಾಯಾಲಯದ ಅದೇಶ ಪಾಲಿಸಿರುವ ಕುರಿತು ಇನ್ನೂ ಅಫಿಡವಿಟ್ ಸಲ್ಲಿಸಿಲ್ಲ ಎಂದು ತಿಳಿದು ಬಂದಿದೆ.

ನ್ಯಾಯಾಲಯದ ಆದೇಶದಂತೆ ಎಸ್ ಬಿಐ ನೀಡಿರುವ ಮಾಹಿತಿಯನ್ನು ಮಾರ್ಚ್ 15 ರಂದು ಚುನಾವಣಾ ಆಯೋಗ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕಿದೆ.

ಚುನಾವಣಾ ಬಾಂಡ್ ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ಜೂನ್ 30ರವರೆಗೆ ಸಮಯ ವಿಸ್ತರಿಸುವಂತೆ ಕೋರಿ ಎಸ್ ಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ( ಮಾ.11) ತಿರಸ್ಕರಿಸಿತ್ತು. ಇಂದು ಬ್ಯಾಂಕ್ ವ್ಯವಹಾರ ಕೊನೆಗೊಳ್ಳುವ ಮುನ್ನ ಮಾಹಿತಿ ಒದಗಿಸಲು ಖಡಕ್ ಆದೇಶ ನೀಡಿತ್ತು.

ಫೆ.15ರಂದು ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್ ಗಳ ಕುರಿತು ಮಾಹಿತಿಯನ್ನು ಆಯೋಗಕ್ಕೆ ಒದಗಿಸುವಂತೆ ಎಸ್ ಬಿಐಗೆ ಸೂಚಿಸಿತ್ತು ಮತ್ತು ಈ ಮಾಹಿತಿಯನ್ನು ಮಾರ್ಚ್ 12 ರೊಳಗೆ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಆದರೆ, ಗಡುವಿನೊಳಗೆ ಮಾಹಿತಿ ಒದಗಿಸದ ಎಸ್ ಬಿಐ ನಾನಾ ನೆಪ ಹೇಳಿ ಸಮಯ ವಿಸ್ತರಣೆ ಕೋರಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...