Homeಮುಖಪುಟಪ್ರೊ.ಜಿ.ಎನ್‌ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಸರಕಾರ

ಪ್ರೊ.ಜಿ.ಎನ್‌ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಸರಕಾರ

- Advertisement -
- Advertisement -

ಮಾವೋವಾದಿ ಸಂಪರ್ಕದ ಆರೋಪದ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಮತ್ತು ಇತರ ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಸಾಯಿಬಾಬಾ ಮತ್ತು ಇತರ ಐವರನ್ನು ಖುಲಾಸೆಗೊಳಿಸಿತು, ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗಡ್ಚಿರೋಲಿ ಸೆಷನ್ಸ್ ನ್ಯಾಯಾಲಯದ 2017ರ ತೀರ್ಪನ್ನು ರದ್ದುಗೊಳಿಸಿತ್ತು.

ನ್ಯಾಯಮೂರ್ತಿಗಳಾದ ವಿನಯ್ ಜೋಶಿ ಮತ್ತು ವಾಲ್ಮೀಕಿ ಎಸ್‌ಎ ಮೆನೇಜಸ್ ಅವರಿದ್ದ ಬಾಂಬೆ ಹೈಕೋರ್ಟ್‌  ವಿಭಾಗೀಯ ಪೀಠ, ಸಾಯಿಬಾಬಾ ಮತ್ತು ಇತರ ಐವರಿಗೆ ತಲಾ 50,000 ರೂ.ಗಳ ಬಾಂಡ್‌ ಮೇಲೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಪ್ರಕರಣವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಕಾರಣ ಅವರನ್ನು ಖುಲಾಸೆಗೊಳಿಸುತ್ತಿರುವುದಾಗಿ ಪೀಠ ಹೇಳಿದೆ.

ಸೆಷನ್ಸ್‌ ಕೋರ್ಟ್‌ ತೀರ್ಪನ್ನು ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್‌ ನ್ಯಾಯಮೂರ್ತಿಗಳಾದ ವಿನಯ್ ಜೋಶಿ ಮತ್ತು ವಾಲ್ಮೀಕಿ ಎಸ್‌ಎ ಮೆನೇಜಸ್ ಅವರ ವಿಭಾಗೀಯ ಪೀಠವು, ಪ್ರಾಸಿಕ್ಯೂಷನ್ ಸಾಯಿಬಾಬಾ ಅವರ ವಿರುದ್ಧದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ ಎಂದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಆರೋಪ ಹೊರಿಸಲು ಪ್ರಾಸಿಕ್ಯೂಷನ್ ನೀಡಿದ ಅನುಮತಿಯನ್ನೂ ಹೈಕೋರ್ಟ್‌ ರದ್ದುಗೊಳಿಸಿತ್ತು.

2017ರಲ್ಲಿ, ಗಡ್ಚಿರೋಲಿಯ ಸೆಷನ್ಸ್ ನ್ಯಾಯಾಲಯವು ಸಾಯಿಬಾಬಾ ಮತ್ತು ಇತರರನ್ನು ಮಾವೋವಾದಿಗಳ ಜೊತೆ ನಂಟು ಮತ್ತು ದೇಶದ ವಿರುದ್ಧ ಯುದ್ಧ ಸಾರುವ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಪು ನೀಡಿತ್ತು. ಸಾಯಿಬಾಬಾ ಅವರು ಗಡ್ಚಿರೋಲಿ ಮತ್ತು ಇತರ ಪ್ರದೇಶಗಳಲ್ಲಿ ಮಾವೋವಾದಿಗಳಿಗೆ ಹಿಂಸಾಚಾರವನ್ನು ಪ್ರಚೋದಿಸುವ ಪುಸ್ತಕಗಳನ್ನು ನೀಡಲು ಉದ್ದೇಶಿಸಿದ್ದರು ಎಂದು ಆರೋಪಿಸಲಾಗಿತ್ತು.

ಸಾಯಿಬಾಬಾ ಮತ್ತು ಇತರರು ನಿಷೇಧಿತ ಸಿಪಿಐ-ಮಾವೋವಾದಿ ಮತ್ತು ರೆವಲ್ಯೂಷನರಿ ಡೆಮಾಕ್ರಟಿಕ್ ಫ್ರಂಟ್‌ಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು. ಮಹಾರಾಷ್ಟ್ರ ಪೊಲೀಸರು ಅವರಿಂದ ಮಾವೋವಾದಿ ಸಾಹಿತ್ಯ, ಕರಪತ್ರಗಳು, ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಆ ಬಳಿಕ ಗಾಲಿಕುರ್ಚಿಯ ಸಹಾಯದಿಂದ ನಡೆದಾಡುತ್ತಿದ್ದ ಸಾಯಿಬಾಬಾ ಅವರನ್ನು ಬಂಧಿಸಲಾಗಿತ್ತು. ಸಾಯಿಬಾಬಾ ಜೊತೆಗೆ  ಮಹೇಶ್ ಕರಿಮಾನ್ ಟಿರ್ಕಿ, ಪಾಂಡು ಪೋರಾ ನರೋಟೆ, ಹೇಮ್ ಕೇಶವದತ್ತ ಮಿಶ್ರಾ,  ಪ್ರಶಾಂತ್ ಸಾಂಗ್ಲಿಕರ್, ವಿಜಯ್ ಟಿರ್ಕಿ ಅವರನ್ನು ಬಂಧಿಸಲಾಗಿತ್ತು. ಸಾಯಿಬಾಬಾ ಮತ್ತು ಇತರ ಐವರನ್ನು 2017ರಲ್ಲಿ ಸೆಷನ್ಸ್ ನ್ಯಾಯಾಲಯವು ದೋಷಿಗಳೆಂದು ಘೋಷಿಸಿತ್ತು, ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಪಾಂಡು ಪೋರಾ ನರೋಟೆ ಆಗಸ್ಟ್ 2022ರಲ್ಲಿ ನಿಧನರಾಗಿದ್ದರು.

ಇದನ್ನು ಓದಿ: ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...