Homeಮುಖಪುಟದೆಹಲಿ ಗಲಭೆ ಪ್ರಕರಣ | ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ತ್ವರಿತ ವಿಲೇವಾರಿಗೆ ಸುಪ್ರೀಂ ಕೋರ್ಟ್...

ದೆಹಲಿ ಗಲಭೆ ಪ್ರಕರಣ | ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ತ್ವರಿತ ವಿಲೇವಾರಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ದೆಹಲಿ ಗಲಭೆ ಹಿಂದಿನ ಪಿತೂರಿ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮನವಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ (ಅ.25) ದೆಹಲಿ ಹೈಕೋರ್ಟ್‌ಗೆ ಸೂಚಿಸಿದೆ. ಶಾರ್ಜೀಲ್ ಇಮಾಮ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಏಪ್ರಿಲ್ 2022 ರಿಂದ ಇತ್ಯರ್ಥವಾಗದೆ ಬಾಕಿ ಉಳಿದಿದೆ.

ತನ್ನ ಜಾಮೀನು ಅರ್ಜಿಯನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಲು ಕೋರಿ ಇಮಾಮ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಪರಿಗಣಿಸಿದೆ. ಆದಷ್ಟು ಬೇಗ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವಂತೆ ಹೈಕೋರ್ಟ್‌ಗೆ ಕೋರುವ ಸ್ವಾತಂತ್ರ್ಯ ಅರ್ಜಿದಾರರಿಗೆ ಇದೆ ಎಂದು ಹೇಳಿದೆ. ಇಮಾಮ್ ಅವರ ಜಾಮೀನು ಅರ್ಜಿಯನ್ನು ನವೆಂಬರ್ 25 ರಂದು ವಿಚಾರಣೆಗೆ ಹೈಕೋರ್ಟ್‌ನಲ್ಲಿ ಪಟ್ಟಿ ಮಾಡಿರುವುದನ್ನು ಇದೇ ವೇಳೆ ಪೀಠ ಗಮನಿಸಿದೆ.

ವಿಚಾರಣೆಯ ಆರಂಭದಲ್ಲಿ, ಹೈಕೋರ್ಟ್‌ನಲ್ಲಿ ವಿಷಯ ಬಾಕಿ ಇರುವಾಗ ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಏಕೆ ಸಲ್ಲಿಸಿದ್ದಾರೆ? ಎಂದು ಪೀಠವು ಕೇಳಿತ್ತು.

ಇದಕ್ಕೆ ಉತ್ತರಿಸಿದ ಇಮಾಮ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ಅವರು, “ನಾವು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ನೀಡುವಂತೆ ಒತ್ತಾಯಿಸುತ್ತಿಲ್ಲ. ಹೈಕೋರ್ಟ್‌ನಲ್ಲಿರುವ ಜಾಮೀನು ಅರ್ಜಿಯ ವಿಚಾರಣೆ ತ್ವರಿತಗೊಳಿಸಲು ನಿರ್ದೇಶಿಸುವಂತೆ ಮನವಿ ಮಾಡಿದ್ದೇವೆ” ಎಂದರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಾಯ್ದೆಯ ಸೆಕ್ಷನ್ 21(2)ರ ಪ್ರಕಾರ, ಹೈಕೋರ್ಟ್ ಮೂರು ತಿಂಗಳೊಳಗೆ ಮೇಲ್ಮನವಿಯನ್ನು ತೀರ್ಮಾನಿಸಬೇಕೆಂಬ ಆದೇಶವಿದೆ ಎಂದು ದವೆ ತಿಳಿಸಿದರು. ಜಾಮೀನು ತಿರಸ್ಕಾರವನ್ನು ಪ್ರಶ್ನಿಸಿ ಇಮಾಮ್ ಅವರ ಮೇಲ್ಮನವಿಯನ್ನು ಏಪ್ರಿಲ್ 29, 2022 ರಂದು ಸಲ್ಲಿಸಲಾಗಿದೆ. ಅದನ್ನು 64 ಬಾರಿ ಮುಂದೂಡಲಾಗಿದೆ ಎಂದು ವಕೀಲ ದವೆ” ಹೇಳಿದರು.

“ನಾವು ಯಾರ ವಿರುದ್ಧ ಏನೂ ಹೇಳುತ್ತಿಲ್ಲ. ನಾವು ಯಾರನ್ನೂ ದೂಷಿಸುತ್ತಿಲ್ಲ. ಆದರೆ, ನಮ್ಮ ಕಕ್ಷಿದಾರರ ಅರ್ಜಿಯನ್ನು ಪುರಸ್ಕರಿಸಿ ಅಥವಾ ತಿರಸ್ಕರಿಸಿ ಒಟ್ಟಿನಲ್ಲಿ ಅದನ್ನು ವಿಲೇವಾರಿ ಮಾಡಿ” ಎಂದು ದವೆ ಮನವಿ ಮಾಡಿದರು.

ಅರ್ಜಿದಾರರ ವಿರುದ್ಧ ಎಂಟು ಎಫ್‌ಐಆರ್‌ಗಳಿವೆ ಎಂದು ನ್ಯಾಯಮೂರ್ತಿ ತ್ರಿವೇದಿ ಹೇಳಿದಾಗ, ಪ್ರಸ್ತುತ ವಿಷಯವು 2020ರ ದೆಹಲಿ ಗಲಭೆಯ ಹಿಂದಿನ ಪಿತೂರಿ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿ ದಾಖಲಾದ ಕೇವಲ ಒಂದು ಎಫ್‌ಐಆರ್‌ಗೆ ಸಂಬಂಧಿಸಿದೆ ಎಂದು ದವೆ ಸ್ಪಷ್ಟಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ನಂತರ ಈಶಾನ್ಯ ದೆಹಲಿಯಲ್ಲಿ ನಡೆದ 2020ರ ಕೋಮು ಗಲಭೆಯ ಹಿಂದಿನ ಪಿತೂರಿಯ ಆರೋಪದ ಮೇಲೆ ಶಾರ್ಜೀಲ್ ಇಮಾಮ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಮಾಮ್ ಅವರನ್ನು ಜನವರಿ 28, 2020ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದಿನಿಂದ ಇಮಾಮ್ ವಿಚಾರಣಾಧೀನ ಕೈದಿಯಾಗಿ ಇಮಾನ್ ಜೈಲಿನಲ್ಲಿದ್ದಾರೆ. ಅವರ ವಿರುದ್ದ ಇದುವರೆಗೆ ಆರೋಪಗಳನ್ನು ರೂಪಿಸಲಾಗಿಲ್ಲ.

ಇದನ್ನೂ ಓದಿ : ಅವಹೇಳನಕಾರಿ ಹೇಳಿಕೆ; ತೆಲಂಗಾಣ ಸಚಿವೆ ಸುರೇಖಾಗೆ ಛೀಮಾರಿ ಹಾಕಿದ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...