Homeಮುಖಪುಟಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

ಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

- Advertisement -
- Advertisement -

ಛತ್ತೀಸ್‌ಗಢ ಮದ್ಯ ಹಗರಣ ಪ್ರಕರಣದ ಆರೋಪಿಯ ವಿರುದ್ಧ ‘ಯಾವುದೇ ಸಾಕ್ಷ್ಯಗಳಿಲ್ಲದೆ’ ಆರೋಪಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡಿದ್ದು, “ನಿಮಗೆ ಇದೇ ರೂಢಿಯಾಗಿದೆ” ಎಂದು ಛೀಮಾರಿ ಹಾಕಿದೆ.

ಛತ್ತೀಸ್‌ಗಢದಲ್ಲಿ ನಡೆದ 2,000 ಕೋಟಿ ರೂಪಾಯಿಗಳ ಮದ್ಯ ಹಗರಣದಲ್ಲಿ ಜಾಮೀನು ಕೋರಿ ಅರವಿಂದ್ ಸಿಂಗ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವಿಚಾರಣೆ ನಡೆಸಿತು.

“ಇದು ಹಲವಾರು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯ ಅಳವಡಿಸಿಕೊಂಡ ಮಾದರಿಯಾಗಿದೆ. ನೀವು ಯಾವುದೇ ಪುರಾವೆಗಳಿಲ್ಲದೆ ಆರೋಪಗಳನ್ನು ಮಾಡುತ್ತೀರಿ. ಈ ರೀತಿ ಪ್ರಾಸಿಕ್ಯೂಷನ್ ನ್ಯಾಯಾಲಯದ ಮುಂದೆ ನಿಲ್ಲುವುದಿಲ್ಲ” ಎಂದು ಪೀಠ ಹೇಳಿದೆ.

ವಿಚಾರಣೆಯ ಸಮಯದಲ್ಲಿ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು, ವಿಕಾಸ್ ಅಗರ್ವಾಲ್ ಎಂಬ ಇನ್ನೊಬ್ಬ ವ್ಯಕ್ತಿಯೊಂದಿಗೆ ಸಿಂಗ್ 40 ಕೋಟಿ ರೂ.ಗಳನ್ನು ಸಂಪಾದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಗರ್ವಾಲ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆಯೇ ಎಂದು ನ್ಯಾಯಾಲಯ ಕೇಳಿದಾಗ, ಅವರು ತಲೆಮರೆಸಿಕೊಂಡಿದ್ದಾರೆ ಎಂದು ರಾಜು ಅವರು ಉತ್ತರಿಸಿದ್ದಾರೆ.

“ಅವರು (ಸಿಂಗ್) 40 ಕೋಟಿ ರೂ. ಗಳಿಸಿದ್ದಾರೆ ಎಂದು ನೀವು ನಿರ್ದಿಷ್ಟ ಆರೋಪ ಮಾಡಿದ್ದೀರಿ. ಈಗ ನಿಮಗೆ ಈ ವ್ಯಕ್ತಿಗೆ ಈ ಕಂಪನಿ ಅಥವಾ ಯಾವುದೇ ಇತರ ಕಂಪನಿಯೊಂದಿಗೆ ಸಂಪರ್ಕವಿದೆಯೇ ಎಂದು ತೋರಿಸಲು ಸಾಧ್ಯವಾಗುತ್ತಿಲ್ಲ” ಎಂದು ಪೀಠ ಗರಂ ಆಗಿದೆ.

“ಅವರು ಆ ಕಂಪನಿಗಳ ನಿರ್ದೇಶಕರೇ, ಬಹುಪಾಲು ಷೇರುದಾರರೇ, ವ್ಯವಸ್ಥಾಪಕ ನಿರ್ದೇಶಕರೇ ಎಂಬುದನ್ನು ನೀವು ಹೇಳಬೇಕು. ಏನಾದರೂ ಇರಬೇಕು” ಎಂದಿದೆ.

ಇದಕ್ಕೆ ಉತ್ತರಿಸಿದೆ ರಾಜು ಅವರು, ಒಬ್ಬ ವ್ಯಕ್ತಿಯು ಕಂಪನಿಯನ್ನು ನಿಯಂತ್ರಿಸಬಹುದು. ಆದರೆ ಕಂಪನಿಯ ನಡವಳಿಕೆಗೆ ಅವನು ಜವಾಬ್ದಾರನಾಗಿರಬೇಕಾಗಿಲ್ಲ ಎಂದು ಹೇಳಿದ್ದಾರೆ.

ಏಪ್ರಿಲ್ 28 ರಂದು ಛತ್ತೀಸ್‌ಗಢ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್, ರಾಜ್ಯ ಅಧಿಕಾರಿಗಳು ದಾಖಲಿಸಿರುವ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎಷ್ಟು ಕಾಲ ಜೈಲಿನಲ್ಲಿ ಇಡುತ್ತೀರಿ? ಎಂದು ಕೇಳಿತ್ತು.

ಈ ಪ್ರಕರಣದಲ್ಲಿ ಮೂರು ಆರೋಪ ಪಟ್ಟಿಗಳನ್ನು ಸಲ್ಲಿಸಲಾಗಿದ್ದು, ತನಿಖೆ ಇನ್ನೂ ನಡೆಯುತ್ತಿದೆ ಎಂಬುವುದನ್ನು ನ್ಯಾಯಾಲಯ ಗಮನಿಸಿತ್ತು.

“ಮೂರು ಆರೋಪ ಪಟ್ಟಿಗಳನ್ನು ಸಲ್ಲಿಸಿದ ಬಳಿಕವೂ ತನಿಖೆ ನಡೆಯುತ್ತಿದೆ. ನೀವು ಆ ವ್ಯಕ್ತಿಯನ್ನು ಕಸ್ಟಡಿಯಲ್ಲಿ ಇರಿಸುವ ಮೂಲಕ ವಾಸ್ತವಿಕವಾಗಿ ಶಿಕ್ಷೆ ವಿಧಿಸುತ್ತಿದ್ದೀರಿ. ನೀವು ಪ್ರಕ್ರಿಯೆಯನ್ನು ಶಿಕ್ಷೆಯನ್ನಾಗಿ ಮಾಡಿದ್ದೀರಿ. ಇದು ಭಯೋತ್ಪಾದಕ ಅಥವಾ ತ್ರಿವಳಿ ಕೊಲೆಯ ಪ್ರಕರಣವಲ್ಲ” ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿತ್ತು.

ರಾಜ್ಯ ಸರ್ಕಾರ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿತ್ತು. ಪ್ರಕರಣದ ಇತರ ಆರೋಪಿಗಳೊಂದಿಗೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ವಾದಿಸಿತ್ತು.

ಆರೋಪಿಗಳ ಪರವಾಗಿ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಅಗರ್ವಾಲ್, ಪ್ರಕರಣದಲ್ಲಿ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದ್ದು, ಇನ್ನೂ ಆರೋಪಗಳನ್ನು ರೂಪಿಸಬೇಕಾಗಿದೆ ಎಂದು ವಾದಿಸಿದ್ದರು.

ಅರವಿಂದ್ ಸಿಂಗ್ ಮತ್ತು ಅಮಿತ್ ಸಿಂಗ್ ಅವರಿಗೆ ಮಾಜಿ ಅಬಕಾರಿ ಸಚಿವ ಕವಾಸಿ ಲಖ್ಮಾ ಅವರನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿ, ಮೇ 9ಕ್ಕೆ ವಿಚಾರಣೆಯನ್ನು ಮುಂದೂಡಿತ್ತು.

2019-22ರಲ್ಲಿ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಮತ್ತು ರಾಜಕೀಯ ವ್ಯಕ್ತಿಗಳು ಜಂಟಿಯಾಗಿ ಈ ಹಗರಣವನ್ನು ಎಸಗಿದ್ದು, 2,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಕ್ರಮ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಈ ಹಣ ವರ್ಗಾವಣೆ ಪ್ರಕರಣವು 2022 ರಲ್ಲಿ ದೆಹಲಿಯ ನ್ಯಾಯಾಲಯದಲ್ಲಿ ಸಲ್ಲಿಸಲಾದ ಆದಾಯ ತೆರಿಗೆ ಇಲಾಖೆ ಆರೋಪಪಟ್ಟಿಯಿಂದ ಹುಟ್ಟಿಕೊಂಡಿದೆ.

ಸಿಎಸ್‌ಎಂಸಿಎಲ್ (ಮದ್ಯ ಖರೀದಿ ಮತ್ತು ಮಾರಾಟದ ರಾಜ್ಯ ಸಂಸ್ಥೆ) ನಿಂದ ಸಂಗ್ರಹಿಸಿದ ಪ್ರತಿ ಮದ್ಯದ ಮೇಲೆ ರಾಜ್ಯದ ಡಿಸ್ಟಿಲರಿಗಳಿಂದ ಲಂಚವನ್ನು ಪಡೆಯಲಾಗಿದೆ ಮತ್ತು ದೇಶೀಯ ಮದ್ಯವನ್ನು ಲೆಕ್ಕದಿಂದ ಹೊರಗಿಟ್ಟು ಮಾರಾಟ ಮಾಡಲಾಗಿದೆ ಎಂದು ಇಡಿ ಆರೋಪಿಸಿದೆ.

ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ವರದಿ ಸುಪ್ರಿಂಕೋರ್ಟ್‌ಗೆ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...