Homeಮುಖಪುಟಟೂಲ್‌ಕಿಟ್‌ ಪ್ರಕರಣ: ಛತ್ತೀಸ್‌ಗಢ ಸರ್ಕಾರದ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ

ಟೂಲ್‌ಕಿಟ್‌ ಪ್ರಕರಣ: ಛತ್ತೀಸ್‌ಗಢ ಸರ್ಕಾರದ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಮತ್ತು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು ಕಾಂಗ್ರೆಸ್‌ ಮೇಲೆ ಟೂಲ್‌ಕಿಟ್‌ ಆರೋಪ ಹೊರಿಸಿ ಮಾಡಿದ್ದ ಟ್ವೀಟ್‌‌ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ಗೆ ಛತ್ತೀಸ್‌ಘಡ ಹೈಕೋರ್ಟ್ ಇತ್ತೀಚೆಗೆ ಮಧ್ಯಂತರ ಪರಿಹಾರ ನೀಡಿ ಆದೇಶ ಹೊರಟಿಸಿದೆ. ಹೈಕೋರ್ಟ್‌‌ನ ಆದೇಶದ ವಿರುದ್ಧ ಛತ್ತೀಸ್‌ಗಢ ಸರ್ಕಾರ ಎರಡು ಪ್ರತ್ಯೇಕ ಮೇಲ್ಮನವಿಗಳನ್ನು ಸಲ್ಲಿಸಿರುವುದನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರನ್ನು ಒಳಗೊಂಡ ಜಸ್ಟೀಸ್‌ ಸೂರ್ಯ ಕಾಂತ್‌, ಹಿಮಾ ಕೊಹ್ಲಿ ಇದ್ದ ಪೀಠವು ಈ ನಿಲುವು ತಾಳಿದೆ ಎಂದು ‘ಲೈವ್‌ ಲಾ’ ಹಾಗೂ ‘ದಿ ವೈರ್‌’ ವರದಿ ಮಾಡಿವೆ.

ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಮತ್ತು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ

“ಛತ್ತೀಸ್‌ಗಢ  ಹೈಕೋರ್ಟ್‌ ಪ್ರಕರಣವನ್ನು ಇತ್ಯರ್ಥಪಡಿಸಲಿ. ಈ ಟೂಲ್‌ಕಿಟ್‌‌ ವ್ಯವಹಾರದಲ್ಲಿ ತಡೆ ತರಲು ವಿವಿಧ ನ್ಯಾಯಾಲಯಗಳಲ್ಲಿ ಜನರಿದ್ದಾರೆ. ನಾವ್ಯಾಕೆ ಇದರ ಕುರಿತು ವಿಶೇಷ ಆದ್ಯತೆಯನ್ನು ನೀಡಬೇಕು” ಎಂದು ಸರ್ವೊಚ್ಚ ನ್ಯಾಯಾಲಯದ ಪೀಠ ಕೇಳಿದೆ.

ಕಾಂಗ್ರೆಸ್‌ನ ಛತ್ತೀಸ್‌ಗಢ ವಿದ್ಯಾರ್ಥಿ ಘಟಕವಾದ ನ್ಯಾಷನಲ್‌ ಸ್ಟೂಡೆಂಟ್‌ ಯೂನಿಯನ್ ಆಫ್‌ ಇಂಡಿಯಾ (ಎನ್‌ಎಸ್‌ಯುಐ) ಅಧ್ಯಕ್ಷ ಆಕಾಶ್‌ ಶರ್ಮ ಅವರು, ಸಿಂಗ್‌ ಮತ್ತು ಪಾತ್ರ ಸೇರಿದಂತೆ ಇತರರ ಮೇಲೆ ದೂರು ನೀಡಿದ್ದರು. ನಕಲಿ ಲೆಟರ್‌ಹೆಡ್‌ ಬಳಸಿ ಕಾಂಗ್ರೆಸ್‌ ಹೆಸರಲ್ಲಿ ಕೋವಿಡ್‌ -19 ಕುರಿತ ಟೂಲ್‌ಕಿಟ್‌‌ ಹಂಚಿದ್ದಾರೆ ಎಂದು ಆರೋಪಿಸಿದ್ದರು.

ಜೂನ್‌ 11ರಂದು ಛತ್ತೀಸ್‌ಗಢ ಹೈಕೋರ್ಟ್‌ ಎರಡು ವಿಭಿನ್ನ ಆದೇಶಗಳನ್ನು ಹೊರಡಿಸಿ, ಸಿಂಗ್‌ ಮತ್ತು ಪಾತ್ರ ಮೇಲೆ ದಾಖಲಾಗಿರುವ ಎಫ್‌ಐಆರ್‌ಗೆ ಮಧ್ಯಂತರ ಬಿಡುಗಡೆಯನ್ನು ನೀಡಿತ್ತು. ರಾಜಕೀಯ ದ್ವೇಷ ಮತ್ತು ದುರುದ್ದೇಶಪೂರಿತವಾಗಿ ಎಫ್‌ಐಆರ್‌ ದಾಖಲಾಗಿದೆ ಎಂದಿತ್ತು.

 ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...