Homeಮುಖಪುಟರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ್ದ PIL ವಜಾಗೊಳಿಸಿದ ಸುಪ್ರೀಂ

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ್ದ PIL ವಜಾಗೊಳಿಸಿದ ಸುಪ್ರೀಂ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿ, ಅರ್ಜಿದಾರರಿಗೆ ₹ 1 ಲಕ್ಷ ದಂಡ ವಿಧಿಸಿದೆ.

ನ್ಯಾಯವಾದಿ ಅಶೋಕ ಪಾಂಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ಪೀಠವು, ಅರ್ಜಿದಾರರ ಯಾವುದೇ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿಲ್ಲ, ಹೀಗಾಗಿ ಅರ್ಜಿಯು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಹೇಳಿತು.

‘ಮೋದಿ’ ಉಪನಾಮ ಕುರಿತು ಟೀಕೆಗಾಗಿ ಸಂಬಂಧಿಸಿದ ಪ್ರಕರಣದಲ್ಲಿ ದೋಷ ನಿರ್ಣಯಕ್ಕೆ ಸರ್ವೋಚ್ಚ ನ್ಯಾಯಾಲಯವು ಆ.4ರಂದು ತಡೆಯಾಜ್ಞೆ ನೀಡಿದ ಬಳಿಕ ಲೋಕಸಭಾ ಸಚಿವಾಲಯವು ರಾಹುಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿತ್ತು.

ಮಾರ್ಚ್ 2023ರಲ್ಲಿ ಕೆಳಮನೆಯಿಂದ ಅನರ್ಹಗೊಂಡ ಕಾಂಗ್ರೆಸ್ ನಾಯಕನನ್ನು ವಯನಾಡ್ ಸಂಸದರಾಗಿ ಮರುಸ್ಥಾಪಿಸಲಾಯಿತು.

ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು, ”ಎಲ್ಲಾ ಕಳ್ಳರು ಸಾಮಾನ್ಯವಾಗಿ ಮೋದಿ ಎನ್ನುವ ಉಪನಾಮ ಹೊಂದಿರುತ್ತಾರೆ ಅದು ಹೇಗೆ? ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇದನ್ನೂ ಓದಿ: ಅಧಿಕಾರಕ್ಕೆ ಬಂದ್ರೆ ಅದಾನಿ ಗ್ರೂಪ್ ವಿರುದ್ಧ ತನಿಖೆ ನಡೆಸುತ್ತೇವೆ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

0
ಭಾರತಕ್ಕೆ ಚಿಕಿತ್ಸೆಗೆಂದು ಬಂದು ಕಳೆದ ವಾರ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅವರನ್ನು ಬುಧವಾರ ಕೋಲ್ಕತ್ತಾದಲ್ಲಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಢಾಕಾದಲ್ಲಿ ಸುದ್ದಿಗೋಷ್ಠಿಯಲ್ಲಿ...