Homeಮುಖಪುಟರಾಹುಲ್ ಗಾಂಧಿಯ ಲೋಕಸಭೆ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಪಿಐಎಲ್‌: ವಕೀಲನಿಗೆ ₹1ಲಕ್ಷ ದಂಡ

ರಾಹುಲ್ ಗಾಂಧಿಯ ಲೋಕಸಭೆ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಪಿಐಎಲ್‌: ವಕೀಲನಿಗೆ ₹1ಲಕ್ಷ ದಂಡ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಗೆ ಮರುನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ವಕೀಲನಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ₹1 ಲಕ್ಷ ದಂಡ ವಿಧಿಸಿದೆ.

ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ನೇತೃತ್ವದ ವಿಭಾಗೀಯ ಪೀಠವು ವಕೀಲ ಅಶೋಕ್ ಪಾಂಡೆ ಸಲ್ಲಿಸಿದ್ದ ಅರ್ಜಿಯು ಕ್ಷುಲ್ಲಕವಾಗಿದ್ದು, ನ್ಯಾಯಾಂಗದ ಸಮಯವನ್ನು ವ್ಯರ್ಥಗೊಳಿಸುವ ಯತ್ನ ಎಂದಿದೆ.

ಲೋಕಸಭೆಯ ಸದಸ್ಯರಾಗಿ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಮರುಸ್ಥಾಪಿಸುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಕೋರಿ ಪಾಂಡೆ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ಹಿನ್ನೆಲೆ: 2019 ರಲ್ಲಿ ಕರ್ನಾಟಕದ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ದ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಸೂರತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಳೆದ ವರ್ಷ ಮಾರ್ಚ್‌ನಲ್ಲಿ ಲೋಕಸಭೆಯಿಂದ ಅನರ್ಹಗೊಳಿಸಿತ್ತು.

ಸಮಾವೇಶದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ “ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ” ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ನೀರವ್ ಮೋದಿ ಮತ್ತು ಲಲಿತ್ ಮೋದಿಯಂತಹ ದೇಶ ಭ್ರಷ್ಟರೊಂದಿಗೆ ಹೋಲಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಸೂರತ್ ನ್ಯಾಯಾಲಯವು ರಾಹುಲ್‌ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರಿಂದ ನಿಯಮಗಳ ಪ್ರಕಾರ ಅವರ ಲೋಕಸಭಾ ಸದಸ್ಯತ್ವವು ರದ್ದುಗೊಂಡಿತ್ತು.

ತನಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್‌ ಶಿಕ್ಷೆಗೆ ತಡೆ ನೀಡಲು ನಿರಾರಿಸಿತ್ತು. ಕೊನೆಗೆ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆಗಸ್ಟ್ 2023 ರಲ್ಲಿ, ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಯವರ ಶಿಕ್ಷೆಯನ್ನು ತಡೆಹಿಡಿದಿತ್ತು. ಇದರಿಂದ ರಾಹುಲ್ ಗಾಂಧಿಯ ಸಂಸತ್‌ಗೆ ಮರು ನೇಮಕಗೊಂಡಿದ್ದರು.

ಇದನ್ನೂ ಓದಿ : ಬಿಲ್ಕಿಸ್ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿದ್ದ ಅಪರಾಧಿಗಳ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...