Homeಮುಖಪುಟಆರು ವಕೀಲರನ್ನು ಬದಲಾಯಿಸಿದ್ದಕ್ಕೆ ಮಹಿಳೆಗೆ ಜೈಲು ಶಿಕ್ಷೆ : ತೀರ್ಪು 'ಆಘಾತಕಾರಿ' ಎಂದ ಸುಪ್ರೀಂ ಕೋರ್ಟ್‌

ಆರು ವಕೀಲರನ್ನು ಬದಲಾಯಿಸಿದ್ದಕ್ಕೆ ಮಹಿಳೆಗೆ ಜೈಲು ಶಿಕ್ಷೆ : ತೀರ್ಪು ‘ಆಘಾತಕಾರಿ’ ಎಂದ ಸುಪ್ರೀಂ ಕೋರ್ಟ್‌

- Advertisement -
- Advertisement -

ಚೆಕ್ ಬೌನ್ಸ್ ಪ್ರಕರಣದ ಮೇಲ್ಮನವಿ ವಿಚಾರಣೆಗೆ ವೇಳೆ ಆರು ತಿಂಗಳಲ್ಲಿ ಆರು ಬಾರಿ ವಕೀಲರನ್ನು ಬದಲಾಯಿಸಿದ್ದಕ್ಕಾಗಿ ಹರಿಯಾಣದ ಫರಿದಾಬಾದ್ ಸೆಷನ್ಸ್ ಕೋರ್ಟ್‌ನಿಂದ ಜೈಲು ಶಿಕ್ಷೆಗೊಳಗಾದ ಮಹಿಳೆಯನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ನವೆಂಬರ್ 27ರಂದು ಆದೇಶಿಸಿದ್ದು, ಕೆಳ ನ್ಯಾಯಾಲದ ಆದೇಶ ‘ಆಘಾತಕಾರಿ’ ಎಂದಿದೆ.

ಈ ಪ್ರಕರಣವು ಮಹಿಳೆಯ ತಾಯಿ ನೀಡಿದ ಚೆಕ್‌ಗಳಿಗೆ ಸಂಬಂಧಿಸಿದ್ದು, 7 ಲಕ್ಷ ಮತ್ತು 5.02 ಲಕ್ಷ ರೂ. ಮೌಲ್ಯದ ಚೆಕ್‌ಗಳು ಬೌನ್ಸ್ ಆಗಿತ್ತು. ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ತಾಯಿ ಮತ್ತು ಮಗಳು ಇಬ್ಬರನ್ನೂ ಅಪರಾಧಿಗಳು ಎಂದು ತೀರ್ಪು ನೀಡಿ ಶಿಕ್ಷೆ ವಿಧಿಸಿತ್ತು ಮತ್ತು ಜಾಮೀನು ಕೊಟ್ಟಿತ್ತು. ವಿಚಾರಣಾ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮಹಿಳೆ ಫರಿದಾಬಾದ್‌ನ ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ಎಂಟು ವರ್ಷಗಳಿಂದ ಬಾಕಿ ಉಳಿದಿತ್ತು.

ಈ ನಡುವೆ ಮಹಿಳೆ 6 ತಿಂಗಳಲ್ಲಿ 6 ವಕೀಲರನ್ನು ಬದಲಾಯಿಸಿದ್ದು. ಈ ಕಾರಣಕ್ಕೆ ವಿಚಾರಣೆಗೆ ಅಸಹಕಾರ ಎಂದ ಸೆಷನ್ಸ್ ಕೋರ್ಟ್, ಮಹಿಳೆಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಗೊಳಿಸಿ ವಶಕ್ಕೆ ಪಡೆಯಲು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಮಹಿಳೆ ಹೈಕೋರ್ಟ್ ಮತ್ತು ನಂತರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್. ವಿ ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ ಪೀಠ, ಮಹಿಳೆಯ ತಾಯಿ ನಿಧನರಾಗಿದ್ದು, ಆದರೆ ಸೆಷನ್ಸ್ ಕೋರ್ಟ್ ಮರಣ ಪ್ರಮಾಣಪತ್ರವನ್ನು ಸ್ವೀಕರಿಸಿಲ್ಲ ಎಂಬುದನ್ನು ಗಮನಿಸಿದೆ. ಈ ಪ್ರಮಾಣಪತ್ರ ಕಾನೂನುಬದ್ಧವಾಗಿದೆಯೇ ಎಂಬುದನ್ನು ಪರಿಶೀಲಿಸಲು ಸೆಷನ್ಸ್ ನ್ಯಾಯಾಲಯವು ಸಂಬಂಧಪಟ್ಟ ಸ್ಟೇಷನ್ ಹೌಸ್ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ವಕೀಲರು ನ್ಯಾಯಾಲಯಕ್ಕೆ ಸಹಾಯ ಮಾಡದಿದ್ದರೆ, ಅಮಿಕಸ್ ಕ್ಯೂರಿಯನ್ನು ನೇಮಿಸಬಹುದು ಅಥವಾ ಆರೋಪಿಗೆ ಪರ್ಯಾಯ ವಕೀಲರನ್ನು ವ್ಯವಸ್ಥೆ ಮಾಡಬಹುದು. ಇದು ಸೂಕ್ತವಾದ ಕ್ರಮ. ಆದರೆ ಅವರನ್ನು ಜೈಲಿಗೆ ಹಾಕುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

ಸುಪ್ರೀಂ ಕೋರ್ಟ್ ಮಹಿಳೆಯನ್ನು 1 ಲಕ್ಷ ರೂ. ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಿದೆ. ಶಿಕ್ಷೆಯನ್ನು ಈಗಾಗಲೇ ಸ್ಥಗಿತಗೊಳಿಸಿದ ನಂತರವೂ, ಸೆಷನ್ಸ್ ನ್ಯಾಯಾಲಯವು ಪ್ರತಿಯೊಂದು ವಿಚಾರಣೆಯ ದಿನಾಂಕದಂದು ಮಹಿಳೆ ಹಾಜರಾಗಲೇಬೇಕೆಂದು ಒತ್ತಾಯ ಮಾಡಿರುವುದು ಆಘಾತಕಾರಿ ಎಂದು ನ್ಯಾಯಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...