Homeಮುಖಪುಟಶಿವಸೇನೆ, NCP ಶಾಸಕರ ವಿರುದ್ಧದ ಅನರ್ಹತೆ ಅರ್ಜಿ; ಸ್ಪೀಕರ್‌ಗೆ ಗಡುವು ನೀಡಿದ ಸುಪ್ರೀಂಕೋರ್ಟ್‌

ಶಿವಸೇನೆ, NCP ಶಾಸಕರ ವಿರುದ್ಧದ ಅನರ್ಹತೆ ಅರ್ಜಿ; ಸ್ಪೀಕರ್‌ಗೆ ಗಡುವು ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನೆಯ ಶಾಸಕರ ಅನರ್ಹತೆ ಅರ್ಜಿಗಳ ಕುರಿತು 2023ರ ಡಿ.31 ಮೊದಲು ಅಂತಿಮ ಆದೇಶಗಳನ್ನು ನೀಡುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಪ್ರಕ್ರಿಯೆಗಳನ್ನು ವಿಳಂಬಗೊಳಿಸಲು ಅನುಮತಿ ನೀಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ(ಎನ್‌ಸಿಪಿ) ಸಂಬಂಧಿಸಿದ ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು 2024, ಜ.31ರ ಗಡುವನ್ನು ನಿಗದಿಪಡಿಸಿದೆ. ಇದರಲ್ಲಿ ಉಪಮುಖ್ಯಮಂತ್ರಿ ಎಂ.ಅಜಿತ್‌ ಪವಾರ್‌ ಮತ್ತು ಇತರ ಎಂಟು ಮಂದಿ ಶಾಸಕರನ್ನು ಅನರ್ಹಗೊಳಿಸಲು ಆಗ್ರಹಿಸಲಾಗಿದೆ.

ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಸಲ್ಲಿಸಿದ ಅರ್ಜಿಗಳ ಕುರಿತು ಸ್ಪೀಕರ್‌ಗೆ ಹೆಚ್ಚಿನ ಸಮಯಾವಕಾಶ ನೀಡಲು ಪೀಠ ನಿರಾಕರಿಸಿದೆ.

ಅ.17ರಂದು ಎರಡು ಅನರ್ಹತೆಯ ಅರ್ಜಿ ಕುರಿತು ಸಮಯ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯವು ಸ್ಪೀಕರ್‌ಗೆ ಹೇಳಿತ್ತು.

ಕಳೆದ ವರ್ಷ ಏಕನಾಥ ಶಿಂದೆ ನೇತೃತ್ವದಲ್ಲಿ ಶಿವಸೇನೆಯ ಶಾಸಕರು ಬಂಡಾಯ ಎದ್ದು ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಈ ಪ್ರಕರಣ ಸಂಬಂಧ ಏಕನಾಥ ಶಿಂಧೆ ಹಾಗೂ 15 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಮಹಾವಿಕಾಸ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಬೇಕು ಎಂದು ಕೋರಿ ಉದ್ಧವ್ ಠಾಕ್ರೆ ಬಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು.

ಪ್ರಕರಣದ ಸಂಬಂಧ ತೀರ್ಪು ಪ್ರಕಟಿಸಿದ್ದ ಸುಪ್ರೀಂಕೋರ್ಟ್‌, ಉದ್ಧವ್‌ ಠಾಕ್ರೆ ವಿಶ್ವಾಸಮತ ಸಾಬೀತು ಪಡಿಸದೆ ರಾಜೀನಾಮೆ ನೀಡಿದ್ದರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗದು ಎಂದು ಹೇಳಿತ್ತು. ಅಲ್ಲದೆ ಶಾಸಕರ ಅನರ್ಹತೆ ಕುರಿತು ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸ್ಪೀಕರ್‌ಗೆ ಸೂಚನೆ ನೀಡಿತ್ತು.

ನಿರ್ಧಾರದ ವಿಳಂಬದ ವಿರುದ್ಧ ಶಿವಸೇನೆಯ(ಉದ್ದವ್‌ ಬಣದ)  ಸುನೀಲ್ ಪ್ರಭು ಮತ್ತು ಎನ್‌ಸಿಪಿಯ ಜಯಂತ್ ಪಾಟೀಲ್ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಪುನರಾರಂಭಿಸಿದ ಪೀಠವು, ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ನಾವು ಸ್ಪೀಕರ್‌ಗೆ ಪದೇ ಪದೇ ಸಮಯ ನೀಡಿದ್ದೇವೆ. ಈಗ ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿಯವರು ಅಫಿಡವಿಟ್ ಸಲ್ಲಿಸಿದ್ದಾರೆ. ಅನರ್ಹತೆ ಅರ್ಜಿಗಳಲ್ಲಿ ಶಿವಸೇನೆಯ ಮತ್ತು ಎನ್‌ಸಿಪಿಯದ್ದು ಇದೆ ಎಂದು ಅದು ಹೇಳುತ್ತದೆ. ದೀಪಾವಳಿ ರಜೆಯಲ್ಲಿ ಸೆಕ್ರೆಟರಿಯೇಟ್‌ನ್ನು ಮುಚ್ಚಲಾಗುವುದು ಮತ್ತು ಚಳಿಗಾಲದ ವಿಧಾನಸಭೆಯ ಅಧಿವೇಶನವು ನಾಗ್ಪುರದಲ್ಲಿ ನಡೆಯಲಿದೆ ಎಂದು ಅಫಿಡವಿಟ್ ಹೇಳುತ್ತದೆ. ಇದು ಅನರ್ಹತೆಯ ನಿರ್ಧಾರದಲ್ಲಿ ವಿಳಂಬಕ್ಕೆ ಕಾರಣವಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಕೋರ್ಟ್ ಹೇಳಿದೆ.

ಚುನಾವಣೆ ಘೋಷಣೆಯಾಗುವವರೆಗೆ ಈ ಪ್ರಕ್ರಿಯೆಗಳು ಮುಂದುವರಿಯುತ್ತಾ  ಎಂಬುದು ನಮ್ಮ ಕಳವಳವಾಗಿದೆ ಎಂದು ಪೀಠ ಹೇಳಿದೆ. ಠಾಕ್ರೆ ಬಣದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಕೋರ್ಟ್‌ಗೆ ಹಾಜರಾಗಿದ್ದು, ಸ್ಪೀಕರ್ ನಿರಂಕುಶವಾಗಿ ವರ್ತಿಸುತ್ತಿದ್ದಾರೆ ಮತ್ತು ಕಲಾಪವನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಇದನ್ನು ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...