Homeಮುಖಪುಟಕಾಂಗ್ರೆಸ್ ನಾಯಕ ಸುರ್ಜೇವಾಲಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂಕೋರ್ಟ್‌

ಕಾಂಗ್ರೆಸ್ ನಾಯಕ ಸುರ್ಜೇವಾಲಾಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಎರಡು ದಶಕಗಳಷ್ಟು ಹಳೆಯದಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಬಂಧನದಿಂದ ರಕ್ಷಣೆಯನ್ನು ನೀಡಿದೆ.

ವಾರಣಾಸಿಯ ವಿಭಾಗೀಯ ಆಯುಕ್ತರ ಕಚೇರಿ ಆವರಣದಲ್ಲಿ ಹಿಂಸಾತ್ಮಕ ಪ್ರತಿಭಟನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಡಿಸಲಾದ ಜಾಮೀನು ರಹಿತ ವಾರಂಟ್‌ ವಿರುದ್ಧ ಸುಪ್ರೀಂಕೋರ್ಟ್ ಗುರುವಾರ ಐದು ವಾರಗಳ ಕಾಲ ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ವಾರಣಾಸಿ ನ್ಯಾಯಾಲಯದ ಮುಂದೆ ಜಾಮೀನು ರಹಿತ ವಾರಂಟ್‌ಗಳ ರದ್ದತಿಗೆ ಹಾಜರಾಗಲು 4 ವಾರಗಳ ಕಾಲಾವಕಾಶ ನೀಡಿದೆ.

ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸುರ್ಜೆವಾಲ್ ಅವರು ಸಲ್ಲಿಸಿದ ರಿಟ್ ಅರ್ಜಿಯ ಮೇಲೆ ನ್ಯಾಯಾಲಯವು ತನ್ನ ಆದೇಶವನ್ನು ನೀಡಿದೆ.

23 ವರ್ಷಗಳ ಹಿಂದೆ ನಡೆದ ಘಟನೆಯೊಂದಕ್ಕೆ ಸಂಬಂಧಿಸಿ ಪ್ರಮುಖ ರಾಜಕೀಯ ಪಕ್ಷದ ಕಾರ್ಯದರ್ಶಿ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಲಾಗಿದೆ ಎಂದು ಹಿರಿಯ ವಕೀಲ ಎಎಂ ಸಿಂಘ್ವಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ವಿಚಾರಣೆ ವೇಳೆ ನೀವು ಯಾಕೆ ಇಲ್ಲಿಗೆ ಬಂದಿದ್ದೀರಿ? ನೀವು ಹೈಕೋರ್ಟ್‌ಗೆ ಹೋಗಬೇಕು ಎಂದು ಪೀಠ ಅವರಿಗೆ ಹೇಳಿದೆ.

ಅವರು ಹೈಕೋರ್ಟ್‌ಗೆ ಹೋಗಿದ್ದರು ಆದರೆ ಅಲ್ಲಿ ತುರ್ತು ಆದೇಶಕ್ಕೆ ನಿರಾಕರಿಸಲಾಗಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 482ರ ಅಡಿಯಲ್ಲಿ ಅರ್ಜಿದಾರರು ಸಲ್ಲಿಸಿದ ಅರ್ಜಿಯ ಮೇಲೆ ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದ್ದರೂ ಕೂಡ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ ಎಂದು ಅವರು ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಅರ್ಜಿಯ ಕುರಿತು ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದಾಗ ಜಾಮೀನು ರಹಿತ ವಾರೆಂಟ್‌ ನೀಡುವ ಅಗತ್ಯ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ. 2000 ವಿಷವಿಯಲ್ಲಿ ಮಾಡಿದ ಎಫ್‌ಐಆರ್‌ ಆಗಿದೆ. ಈ ವೇಳೆ ಆಪಾದಿತ ಕಾಂಗ್ರೆಸ್‌ ನಾಯಕರು ಯೂತ್‌ ಕಾಂಗ್ರೆಸ್‌ನಲ್ಲಿದ್ದರು.

ಈ ಕುರಿತು ಅಕ್ಟೋಬರ್‌ನಲ್ಲಿ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ ಮತ್ತು ನ.7ರಂದು ತನ್ನ ಕಕ್ಷಿದಾರನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿತ್ತು.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...