Homeಮುಖಪುಟಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

ಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಉತ್ತರಖಂಡದ ಕುಮಾನ್ ಬೆಟ್ಟಗಳಲ್ಲಿ 90 ಎಕರೆ ವಿಸ್ತೀರ್ಣದ ಹೋಟೆಲ್ ಮತ್ತು ಟೌನ್‌ಶಿಪ್ ಯೋಜನೆಯ ನಿರ್ಮಾಣವನ್ನು ತಾತ್ಕಾಲಿಕವಾಗಿ ತಡೆಹಿಡಿಯುವ ಮೂಲಕ ಪರಿಸರ ದುರ್ಬಲ ಮತ್ತು ಭೂಕಂಪನ ಪೀಡಿತ ಹಿಮಾಲಯ ಶ್ರೇಣಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಯನ್ನು ತ್ವರಿತಗೊಳಿಸುವ ಸರಕಾರದ ಉದ್ದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.

ಈ ಕುರಿತು ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಮಧ್ಯಂತರ ಆದೇಶವನ್ನು ಜಾರಿಗೊಳಿಸಿದೆ. ಭೂಮಾಲೀಕ ಬೀರೇಂದ್ರ ಸಿಂಗ್ ಅವರು ಸಲ್ಲಿಸಿದ ವಿಶೇಷ ಅರ್ಜಿಯನ್ನು ಆಧರಿಸಿ, ಹಿರಿಯ ವಕೀಲ ಪಿ.ಬಿ. ಸುರೇಶ್ ಮತ್ತು ವಕೀಲರಾದ ವಿಪಿನ್ ನಾಯರ್ ಮತ್ತು ಕಾರ್ತಿಕ್ ಜಯಶಂಕರ್, ಈ ಪರಿಸರದಲ್ಲಿ ಹೋಟೆಲ್ ಯೋಜನೆಗಳಂತಹ ಬೃಹತ್ ನಿರ್ಮಾಣ ಯೊಜನೆ ಪ್ರಾರಂಭಿಸುವ ಮೊದಲು ಕಡ್ಡಾಯವಾಗಿದ್ದ ಪರಿಸರಕ್ಕೆ ಸಂಬಂಧಿಸಿದ ಕ್ಲಿಯರೆನ್ಸ್‌ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು.

ಪರಿಸರ ದುರ್ಬಲವಾದ ಉತ್ತರಾಖಂಡದಲ್ಲಿ ಹೋಟೆಲ್ ಯೋಜನೆಗಳಂತಹ ಬೃಹತ್ ನಿರ್ಮಾಣಗಳನ್ನು ಪ್ರಾರಂಭಿಸುವ ಮೊದಲು ಕ್ಲಿಯರೆನ್ಸ್‌ ಕಡ್ಡಾಯವಾಗಿದೆ. ದುರ್ಬಲವಾದ ಪರಿಸರ ವಲಯವನ್ನು ರಕ್ಷಿಸಲು  ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೆ ಯೋಜನೆಗೆ ಕ್ಲಿಯರೆನ್ಸ್‌ ಸುಲಭವಾಗಿ ನೀಡಬಹುದೇ? ಕುಮಾನ್ ಹಿಮಾಲಯದ ಪರಿಸರ ದುರ್ಬಲವಾದ ಮತ್ತು ಸೂಕ್ಷ್ಮ ಭೂಕಂಪನ ವಲಯವಾಗಿದೆ, ಆದರೂ ಯೋಜನೆಗೆ ಅನುಮತಿ ನೀಡಲಾಗಿದೆ. ಸರಾಸರಿ ಸಮುದ್ರ ಮಟ್ಟದಿಂದ 6,700 ಅಡಿಗಳಿಗಿಂತ ಹೆಚ್ಚು ಎತ್ತರವಿದೆಯೇ? ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಪ್ರಶ್ನಿಸಿದ್ದರು.

ಕಾನೂನು ಮತ್ತು ಸಮಗ್ರ ಪರಿಸರ ಪ್ರಭಾವದ ಮೌಲ್ಯಮಾಪನ (ಇಐಎ) ಅಡಿಯಲ್ಲಿ ಅಗತ್ಯವಾದ ಅನುಮತಿಯಿಲ್ಲದೆ ರಾಜ್ಯದಲ್ಲಿ ವಾಣಿಜ್ಯ ಯೋಜನೆಗಳನ್ನು ಪ್ರಾರಂಭಿಸುವುದನ್ನು ತಡೆಯುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ನ್ಯಾಯಮೂರ್ತಿ ಓಕಾ ಅವರ ಪೀಠವು ಆಗಸ್ಟ್ 12ಕ್ಕೆ ಪ್ರಕರಣವನ್ನು ಪಟ್ಟಿ ಮಾಡಿದೆ. ಹಿರಿಯ ವಕೀಲರಾದ ಸಿ.ಯು ಸಿಂಗ್ ಮತ್ತು ಆರ್ಯಮ ಸುಂದರಂ ನೇತೃತ್ವದ ತಂಡವು ಪ್ರತಿವಾದಿಗಳನ್ನು ಪ್ರತಿನಿಧಿಸಿದ್ದರು.

ಅರ್ಜಿದಾರರು ಸೆಪ್ಟೆಂಬರ್ 14, 2006ರ ಇಐಎ ಅಧಿಸೂಚನೆಯನ್ನು ಉಲ್ಲೇಖಿಸಿದ್ದಾರೆ, ಇದರಲ್ಲಿ ಯಾವುದೇ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸುವ ಮೊದಲು ಪೂರ್ವ ಪರಿಸರ ಅನುಮತಿ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಇದು ಪರಿಸರ ವಿಪತ್ತುಗಳಿಗೆ ಕಾರಣವಾಗುವುದರಿಂದ ಅದನ್ನು ಬಲವಾಗಿ ನಿರಾಕರಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....