HomeUncategorizedಜೈಲುಗಳಲ್ಲಿ ಜಾತಿ ತಾರತಮ್ಯ : ಕೇಂದ್ರ, 11 ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್

ಜೈಲುಗಳಲ್ಲಿ ಜಾತಿ ತಾರತಮ್ಯ : ಕೇಂದ್ರ, 11 ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಖೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬುಧವಾರ ಕೇಂದ್ರ ಮತ್ತು 11 ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಪಿಐಎಲ್‌ ಸಲ್ಲಿಸಿದ್ದು, ಜೈಲು ಕೈಪಿಡಿಗಳ ಮೂಲಕ ಜಾತಿ ಆಧಾರಿತ ತಾರತಮ್ಯ ನಡೆಸಲಾಗ್ತಿದೆ ಎಂದು ಆರೋಪಿಸಿದ್ದಾರೆ. ಈ ಆರೋಪ 2020ರಲ್ಲಿ ಸುಕನ್ಯಾ ಅವರು ಸಂಗ್ರಹಿಸಿದ ವರದಿಯನ್ನು ಆಧರಿಸಿದೆ.

ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಕೇಂದ್ರದ ಪರವಾಗಿ ನ್ಯಾಯಾಲಯಕ್ಕೆ ಸಹಾಯ ಮಾಡಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೋರಿದ್ದು”ಇದು ಅತ್ಯಂತ ಗಂಭೀರ ವಿಷಯ” ಎಂದಿದ್ದಾರೆ.

ವಕೀಲ ಎಸ್.ಪ್ರಸನ್ನ ಅವರೊಂದಿಗೆ ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಎಸ್.ಮುರಳೀಧರ್, ಜೈಲುಗಳಲ್ಲಿ ಖೈದಿಯ ಜಾತಿಗೆ ಅನುಗುಣವಾಗಿ ಹೇಗೆ ಕೆಲಸ ಹಂಚಿಕೆ ಮಾಡಲಾಗುತ್ತಿದೆ ಎಂಬುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಮಧ್ಯಪ್ರದೇಶ, ದೆಹಲಿ ಮತ್ತು ತಮಿಳುನಾಡು ಜೈಲುಗಳ ಕೆಲವು ನಿದರ್ಶನಗಳನ್ನು ಅರ್ಜಿಯು ಎತ್ತಿ ತೋರಿಸಿದ ಅವರು, ಈ ರಾಜ್ಯಗಳ ಜೈಲುಗಳಲ್ಲಿ ಪ್ರಬಲ ಜಾತಿಯ ಖೈದಿಗಳಿಗೆ ಅಡುಗೆ ಕೆಲಸ ಕೊಟ್ಟರೆ, ಗುಡಿಸುವುದು, ಶೌಚಾಲಯ ಸ್ವಚ್ಛಗೊಳಿಸುವಂತಹ ಕೆಲಸಗಳನ್ನು ನಿರ್ದಿಷ್ಟ ದುರ್ಬಲ ಜಾತಿಯ ಖೈದಿಗಳಿಗೆ ನೀಡಲಾಗ್ತಿದೆ ಎಂದು ಹೇಳಿದ್ದಾರೆ.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಖೈದಿಗಳನ್ನು ಜಾತಿ ಆಧಾರರ ಮೇಲೆ ಪ್ರತ್ಯೇಖಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಖೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಖೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ವಕೀಲ ಮುರಳೀಧರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಜೈಲುಗಳಲ್ಲಿ ಜಾತಿ ಆಧಾರಿತ ಖೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಖೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

2003ರ ಮಾದರಿ ಜೈಲು ಕೈಪಿಡಿಯು ಭದ್ರತೆ, ಶಿಸ್ತು ಮತ್ತು ಸಾಂಸ್ಥಿಕ ಕಾರ್ಯಕ್ರಮದ ಆಧಾರದ ಮೇಲೆ ವರ್ಗೀಕರಣವನ್ನು ಮಾಡಬೇಕು ಎಂದು ಸ್ಪಷ್ಟವಾಗಿ ಹೇಳುತ್ತದೆ. ಆದರೆ, ಸಾಮಾಜಿಕ-ಆರ್ಥಿಕ ಸ್ಥಿತಿ, ಜಾತಿ ಅಥವಾ ವರ್ಗದ ಆಧಾರದ ಮೇಲೆ ಖೈದಿಗಳನ್ನು ವರ್ಗೀಕರಣ ಮಾಡಬೇಕು ಎಂದಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳ ಆಧಾರದ ಮೇಲೆ ಜೈಲುಗಳಲ್ಲಿ ಪ್ರತ್ಯೇಕತೆಯ ಬಗ್ಗೆ ತಾನು ಕೇಳಿದ್ದೇನೆ. ಆದರೆ, ಜಾತಿ ಆಧಾರಿತ ಪ್ರತ್ಯೇಕತೆ ಇದ್ದರೆ, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆಬಿ ಪಾರ್ಧಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಉತ್ತರ ಪ್ರದೇಶ, ಒಡಿಶಾ, ಜಾರ್ಖಂಡ್, ಕೇರಳ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಪಂಜಾಬ್ ಮತ್ತು ತಮಿಳುನಾಡು ಸೇರಿದಂತೆ ಒಟ್ಟು 11 ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ. ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಇದನ್ನೂ ಓದಿ : ನಿರ್ಮಲಾ ಸೀತಾರಾಮನ್ ವಜಾಗೊಳಿಸಿ, ಇಡಿ ರಕ್ಷಿಸಿ: IRS ಅಧಿಕಾರಿಯಿಂದ ರಾಷ್ಟ್ರಪತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...