Homeಮುಖಪುಟಬ್ಲೂಮ್‌ಬರ್ಗ್ ವರದಿಗೆ ತಡೆ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಪೆಟ್ಟು ಎಂದ ಸುಪ್ರೀಂ ಕೋರ್ಟ್

ಬ್ಲೂಮ್‌ಬರ್ಗ್ ವರದಿಗೆ ತಡೆ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಪೆಟ್ಟು ಎಂದ ಸುಪ್ರೀಂ ಕೋರ್ಟ್

ವರದಿ ತೆಗೆದು ಹಾಕುವಂತೆ ಸೂಚಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಿದ ಸರ್ವೋಚ್ಚ ನ್ಯಾಯಾಲಯ

- Advertisement -
- Advertisement -

ಝೀ ಎಂಟರ್‌ಟೈನ್‌ಮೆಂಟ್ ಸಂಸ್ಥೆಯ ಕುರಿತು ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆ ಬ್ಲೂಮ್‌ಬರ್ಗ್ ಪ್ರಕಟಿಸಿದ್ದ ವರದಿ ತೆಗೆದು ಹಾಕುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.

ಅಸಮಾನ್ಯ ಸಂದರ್ಭಗಳನ್ನು ಹೊರತುಪಡಿಸಿ, ಸಂಬಂಧಪಟ್ಟ ಎಲ್ಲರ ವಾದ ಆಲಿಸದೆ ಸುದ್ದಿ, ಲೇಖನದ ಪ್ರಕಟಣೆಗೆ ತಡೆ ನೀಡಬಾರದು. ಈ ರೀತಿ ಮಾಡುವುದು ಲೇಖಕನ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಮತ್ತು ಜನರ ಮಾಹಿತಿ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

ತನ್ನ ವಿರುದ್ದ ಸೆಬಿ ತನಿಖೆ ನಡೆಸುತ್ತಿದೆ ಎಂದು ಬ್ಲೂಮ್‌ಬರ್ಗ್ ಮಾನಹಾನಿಕರ ವರದಿ ಪ್ರಕಟಿಸಿದೆ ಎಂದು ಝೀ ಎಂಟರ್‌ಟೈನ್‌ಮೆಂಟ್‌ ಮೊಕದ್ದಮೆ ಹೂಡಿತ್ತು. ಮಾರ್ಚ್ 1ರಂದು ಈ ಕುರಿತು ಆದೇಶ ನೀಡಿದ್ದ ವಿಚಾರಣಾ ನ್ಯಾಯಾಲಯ, ಲೇಖನ ತೆಗೆದು ಹಾಕುವಂತೆ ಬ್ಲೂಮ್‌ಬರ್ಗ್‌ಗೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಬ್ಲೂಮ್‌ಬರ್ಗ್‌ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು. ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ತಡೆ ನೀಡಲು ಕೋರಲಾಗಿರುವ ಲೇಖನದಲ್ಲಿರುವ ವಿಷಯ ದುರುದ್ದೇಶದಿಂದ ಕೂಡಿದೆ ಎಂಬುವುದು ಸ್ಪಷ್ಟವಾಗುವ ಮೊದಲು ತಡೆಯಾಜ್ಞೆ ನೀಡಬಾರದು. ಮುಖ್ಯವಾಗಿ ಎಲ್ಲರ ವಾದ ಆಲಿಸದೆ ತಡೆ ನೀಡಬಾರದು ಎಂದು ನ್ಯಾಯಮೂರ್ತಿಗಳಾದ ಜೆಬಿ ಪರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ : ಉತ್ತರ ಪ್ರದೇಶ: ನೀಟ್ ತರಬೇತಿ ಪಡೆಯುತ್ತಿದ್ದ ಮತ್ತೋರ್ವ ‘ಕೋಚಿಂಗ್ ಹಬ್’ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...