Homeಮುಖಪುಟತಮಿಳುನಾಡಿನ ಜಿಲ್ಲಾಧಿಕಾರಿಗಳಿಗೆ ಅನಾವಶ್ಯಕ ಕಿರುಕುಳ: ED ಅಧಿಕಾರಿಗಳಿಗೆ ಸುಪ್ರೀಂಕೋರ್ಟ್‌ ತರಾಟೆ

ತಮಿಳುನಾಡಿನ ಜಿಲ್ಲಾಧಿಕಾರಿಗಳಿಗೆ ಅನಾವಶ್ಯಕ ಕಿರುಕುಳ: ED ಅಧಿಕಾರಿಗಳಿಗೆ ಸುಪ್ರೀಂಕೋರ್ಟ್‌ ತರಾಟೆ

- Advertisement -
- Advertisement -

ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಸಮನ್ಸ್ ಪಡೆದಿರುವ ಜಿಲ್ಲಾಧಿಕಾರಿಗಳಿಗೆ ತಮ್ಮ ಕಚೇರಿಯ ಹೊರಗೆ ಬಹಳ ಗಂಟೆಗಳ ಕಾಲ ಕಾಯುವಂತೆ “ಅನಾವಶ್ಯಕ ಕಿರುಕುಳ” ನೀಡಬೇಡಿ ಎಂದು ಸುಪ್ರೀಂಕೋರ್ಟ್ ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದೆ.

ಇಡಿಯಿಂದ ಸಮನ್ಸ್ ಪಡೆದಿರುವ ಜಿಲ್ಲಾಧಿಕಾರಿಗಳನ್ನು ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಜಾರಿ ನಿರ್ದೇಶನಾಲಯದ ಕಚೇರಿಯ ಮುಂದೆ ಕಾಯುವಂತೆ ಮಾಡಲಾಗುತ್ತಿದೆ ಎಂದು ತಮಿಳುನಾಡು ಸರ್ಕಾರ ದೂರು ನೀಡಿದ ನಂತರ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ಪೀಠ ‘ಇಡಿ’ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ.

ತಮಿಳುನಾಡು ರಾಜ್ಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಕೇಂದ್ರೀಯ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯವು, ಜಿಲ್ಲಾಧಿಕಾರಿಗಳನ್ನು ಬೆಳಗ್ಗೆ 8 ಗಂಟೆಗೆ ಬಂದು ಸಂಜೆ 6 ಗಂಟೆವರೆಗೆ ಕುಳಿತುಕೊಳ್ಳುವಂತೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಗಮನಕ್ಕೆ ತಂದಿದ್ದಾರೆ. ಈ ಕುರಿತು ನ್ಯಾಯಾಲಯವು ‘ಇಡಿ’ಗೆ ಎಚ್ಚರಿಕೆ ನೋಟಿಸ್ ಜಾರಿ ಮಾಡಿದ್ದು, ಜಾರಿ ನಿರ್ದೇಶನಾಲಯ ಆ ರೀತಿ ಮಾಡುವಂತಿಲ್ಲ ಎಂದು ಹೇಳಿದೆ.

ಅವರನ್ನು ಕಾಯುವಂತೆ ಮಾಡಬೇಡಿ ಎಂದು ನ್ಯಾಯಮೂರ್ತಿ ತ್ರಿವೇದಿ ಹೇಳಿದ್ದು, ಅವರಿಗೆ ಅನಗತ್ಯ ಕಿರುಕುಳ ನೀಡಬೇಡಿ ಎಂದು ನ್ಯಾಯಮೂರ್ತಿ ಮಿಥಾಲ್ ಇದೇ ವೇಳೆ ಹೇಳಿದ್ದಾರೆ. ಮತ್ತೊಂದೆಡೆ ಜಿಲ್ಲಾಧಿಕಾರಿಗಳು ಅಗತ್ಯ ದಾಖಲೆಗಳನ್ನು ಸಲ್ಲಿಸಿಲ್ಲ ಮತ್ತು ಪ್ರತಿಕ್ರಿಯೆ ಸಲ್ಲಿಸಲು ಸಮಯ ಕೇಳಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್‌ಗೆ ಹೇಳಿದೆ.

ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ತಮಿಳುನಾಡಿನ ಐವರು ಕಲೆಕ್ಟರ್‌ಗಳಿಗೆ ಸಮನ್ಸ್‌ಗೆ ತಡೆಯಾಜ್ಞೆ ನೀಡಿದ ಮದ್ರಾಸ್ ಹೈಕೋರ್ಟ್‌ನ ಆದೇಶದ ಕುರಿತು ‘ಇಡಿ’ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ ಮತ್ತು ಪ್ರಾಥಮಿಕವಾಗಿ ಈ ಪ್ರಕರಣದಲ್ಲಿ ‘ಇಡಿ’ಗೆ ಕಲೆಕ್ಟರ್‌ಗಳನ್ನು ಕರೆಸುವ ಅಧಿಕಾರವಿಲ್ಲ ಎಂದು ಕೋರ್ಟ್‌ ಗಮನಿಸಿದೆ.

ಹೈಕೋರ್ಟ್ ತಡೆಯಾಜ್ಞೆ ವಿರುದ್ಧದ ತನ್ನ ಮೇಲ್ಮನವಿಯಲ್ಲಿ, ತಮಿಳುನಾಡಿನಲ್ಲಿ ಅಕ್ರಮ ಗಣಿಗಾರರು, ಅಧಿಕಾರಿಗಳು ಮತ್ತು ಸ್ಥಳೀಯ ಮಾಫಿಯಾ ನಡುವಿನ ಸಂಬಂಧವನ್ನು ಬಹಿರಂಗಪಡಿಸಲು ತನಿಖೆ ನಡೆಯುತ್ತಿದೆ ಎಂದು ‘ಇಡಿ’ ಹೇಳಿದೆ. ಪ್ರಕರಣ ಸಂಬಂಧ ವೆಲ್ಲೂರು, ತಿರುಚಿರಾಪಳ್ಳಿ, ಕರೂರು, ತಾಂಜಾವೂರು ಹಾಗೂ ಅರಿಯಲೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಿಚಾರಣೆ ಎದುರಿಸುತ್ತಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಎಎಪಿಯನ್ನು ಹತ್ತಿಕ್ಕಲು ಬಿಜೆಪಿ ಆಪರೇಷನ್ ಜಾದು ಆರಂಭಿಸಿದೆ..’; ಅರವಿಂದ್ ಕೇಜ್ರಿವಾಲ್

0
"ಪ್ರಧಾನಿ ನರೇಂದ್ರ ಮೋದಿ ಅವರು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕರೊಂದಿಗೆ ಇಂದು ಬಿಜೆಪಿ ಕೇಂದ್ರ ಕಚೇರಿಗೆ ಯೋಜಿತ...