Homeಮುಖಪುಟಬಿಹಾರ ಜಾತಿ ಸಮೀಕ್ಷೆಯ ದತ್ತಾಂಶವು ಸಾರ್ವಜನಿಕರಿಗೆ ಏಕೆ ಲಭ್ಯವಿಲ್ಲ? ಸುಪ್ರೀಂಕೋರ್ಟ್ ಪ್ರಶ್ನೆ

ಬಿಹಾರ ಜಾತಿ ಸಮೀಕ್ಷೆಯ ದತ್ತಾಂಶವು ಸಾರ್ವಜನಿಕರಿಗೆ ಏಕೆ ಲಭ್ಯವಿಲ್ಲ? ಸುಪ್ರೀಂಕೋರ್ಟ್ ಪ್ರಶ್ನೆ

- Advertisement -
- Advertisement -

ಬಿಹಾರ ಜಾತಿ ಸಮೀಕ್ಷೆಯ ದತ್ತಾಂಶವು ಸಾರ್ವಜನಿಕರಿಗೆ ಲಭ್ಯವಿಲ್ಲ? ಸಮೀಕ್ಷೆಯ ಅಂಕಿಅಂಶಗಳು ಸಾರ್ವಜನಿಕರಿಗೆ ಲಭ್ಯವಾಗದಿರುವುದು ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಯಾರಾದರೂ ಪ್ರತ್ಯೇಕ ನಿರ್ಣಯಗಳ ಬಗ್ಗೆ ಪ್ರಶ್ನಿಸಬೇಕಿದ್ದರೆ ಅವರು ಆ ಮಾಹಿತಿಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಜಾತಿಗಣತಿ ಸಮೀಕ್ಷೆಯನ್ನು ಬಿಡುಗಡೆಗೊಳಿಸಲಾಗಿದೆ ಮತ್ತು ಮೀಸಲಾತಿಯನ್ನು 50% ರಿಂದ 70% ಕ್ಕೆ ಹೆಚ್ಚಿಸಲಾಗಿದೆ, ಇದು ಸವಾಲಿನ ವಿಷಯವಾಗಿದೆ ಎಂದು ಅರ್ಜಿದಾರರ ಪರ ವಕೀಲ ರಾಮಚಂದ್ರನ್ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಜನಗಣತಿಯ ವರದಿಗಿಂತ ಹೆಚ್ಚಾಗಿ ನಾವು ಕಾಳಜಿ ವಹಿಸಿದ ವಿಷಯದ ಬಗ್ಗೆ ನೀವು ಮಾತನಾಡುತ್ತಿದ್ದೀರಿ,  ಸಮೀಕ್ಷೆಯ ಕುರಿತು ಮಾಹಿತಿ ಸಾಮಾನ್ಯವಾಗಿ ಸಾರ್ವಜನಿಕರಿಗೆ ಲಭ್ಯವಾಗದಿದ್ದರೆ ಇದು ಬಹಳಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೀವು ಜನಗಣತಿ ಮಾಡಲು ಅರ್ಹರಾಗಿದ್ದರೆ, ಆದರ ಮಾಹಿತಿ ಸಾರ್ವಜನಿಕ ಲಭ್ಯತೆಯನ್ನು ಎಷ್ಟರ ಮಟ್ಟಿಗೆ ತಡೆಹಿಡಿಯಬಹುದು ಎಂದು ಪೀಠ ಕೇಳಿದೆ.

ಬಿಹಾರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್, ಸಮೀಕ್ಷೆಯು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿದೆ ಎಂದು ಹೇಳಿದರು. ಅದು ಸಂಪೂರ್ಣವಾಗಿ ಲಭ್ಯವಿದ್ದರೆ ಅದು ಬೇರೆ ವಿಷಯ ಎಂದು ಪೀಠ ಹೇಳಿದೆ. ಮಾಹಿತಿಯು ಸಾಮಾನ್ಯವಾಗಿ ಲಭ್ಯವಾಗುವಂತೆ ಮಾಡಬೇಕು ಏಕೆಂದರೆ ಜನರು ನಿರ್ದಿಷ್ಟ ವಿಚಾರವನ್ನು ಪ್ರಶ್ನಿಸಲು ಬಯಸಿದಾಗ ಅವರ ಬಳಿ ಆ ದಾಖಲೆ ಇರಬೇಕಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

ಈ ವೇಳೆ ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇದು ಸಂವಿಧಾನದ ಪ್ರಕಾರ ಜನಗಣತಿ ಅಲ್ಲ ಎಂದು ಕೋರ್ಟ್‌ನಲ್ಲಿ ಹೇಳಿದ್ದಾರೆ. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, ಅದಕ್ಕಾಗಿಯೇ ಜಾತಿ ಸಮೀಕ್ಷೆ ಕಾನೂನುಬಾಹಿರವಾಗಿದೆ, ರಾಜ್ಯವು ಅದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಿಹಾರ ಸರ್ಕಾರದ ನಡೆಸಲು ಉದ್ದೇಶಿಸಿದ್ದ ಜಾತಿ ಗಣತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಈ ಮೊದಲು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು, ಈ ಮೂಲಕ ಸಮೀಕ್ಷೆಗೆ ಇದ್ದ ತೊಂದರೆ ನಿವಾರಣೆಯಾಗಿತ್ತು.

ಅ.2ರಂದು ಬಿಹಾರ ಸರಕಾರ ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿಯ ವರದಿಯನ್ನು ಬಿಡುಗಡೆಗೊಳಿಸಿದೆ. ಈ ಮೂಲಕ ದೇಶದಲ್ಲಿ ಜಾತಿ ಆಧಾರಿತ ಸಮೀಕ್ಷೆಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಬಿಹಾರ ಪಾತ್ರವಾಗಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು  15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಯಾದವ್ ಸಮುದಾಯವು ಅತಿಹೆಚ್ಚು ಅಂದರೆ ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ. ಈ ಜಾತಿಗಣತಿಯ ವರದಿಯು ರಾಜ್ಯದಲ್ಲಿ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಲಿದೆ. ಒಬಿಸಿಗಳಿಗೆ ಕೋಟಾಗಳನ್ನು ಹೆಚ್ಚಿಸುವ ಬೇಡಿಕೆ ಕೂಡ ಹೆಚ್ಚಾಗಳಿದೆ. ಈಗ ರಾಜ್ಯದಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಇದೆ. 2024ರ ಲೋಕಸಭಾ ಚುನಾವಣೆಗೆ ತಿಂಗಳುಗಳ ಮೊದಲು ಬಿಡುಗಡೆಯಾದ ಈ ಅಂಕಿಅಂಶಗಳ ಪ್ರಕಾರ ಒಬಿಸಿಗಳು ರಾಜ್ಯದಲ್ಲಿ ಶೇಕಡಾ 63.1ರಷ್ಟಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...