Homeಮುಖಪುಟಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

- Advertisement -
- Advertisement -

ಭಿಂಡ್ ಪೊಲೀಸರಿಂದ ಕಸ್ಟಡಿ ಹಿಂಸಾಚಾರ, ಜಾತಿ ಆಧಾರಿತ ನಿಂದನೆ ಮತ್ತು ಜೀವ ಬೆದರಿಕೆ ಆರೋಪ ಮಾಡಿರುವ ಮಧ್ಯಪ್ರದೇಶ ಮೂಲದ ಇಬ್ಬರು ಪತ್ರಕರ್ತರ ಪರವಾಗಿ ಯಾವುದೇ ಮಧ್ಯಂತರ ಆದೇಶ ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು, ಶಶಿಕಾಂತ್ ಜಾತವ್ ಮತ್ತು ಅಮರಕಾಂತ್ ಸಿಂಗ್ ಚೌಹಾಣ್ ಎಂಬ ಇಬ್ಬರು ಪತ್ರಕರ್ತರಿಗೆ ಸಂಬಂಧಿಸಿದ ಪ್ರಕರಣದ ನಿಖರ ಸ್ವರೂಪದ ಬಗ್ಗೆ ಅರಿವು ಮೂಡಿಸದ ಹೊರತು, ಬಂಧನದಿಂದ ರಕ್ಷಣೆ ನೀಡುವ ಮಧ್ಯಂತರ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ಅರ್ಜಿದಾರರು ಈಗಾಗಲೇ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂಬುವುದನ್ನು ತಿಳಿಸಬೇಕಿತ್ತು ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲೆ ವಾರಿಷಾ ಫರಾಸತ್, ವರದಿಯ ಪ್ರಕಾರ, ಇದು ಮಧ್ಯಪ್ರದೇಶದ ಪ್ರಕರಣ ಆಗಿರುವುದರಿಂದ ದೆಹಲಿ ಹೈಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಅಧಿಕಾರ ವ್ಯಾಪ್ತಿಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಅರ್ಜಿದಾರರಿಗೆ ಮಧ್ಯಪ್ರದೇಶ ಹೈಕೋರ್ಟ್‌ಗೆ ಹೋಗಲು ತಡೆಯಾಗಿರುವುದು ಏನು? ಎಂದು ನ್ಯಾಯಾಲಯ ಪ್ರಶ್ನಿಸಿದೆ ಮತ್ತು ಆರೋಪಗಳನ್ನು ಹೊರಿಸಲಾಗಿರುವ ಭಿಂಡ್ ಎಸ್‌ಪಿ ಅಜಿತ್ ಯಾದವ್ ಅವರನ್ನು ಅರ್ಜಿಯಲ್ಲಿ ಪಕ್ಷವಾಗಿ ಸೇರಿಸಲಾಗಿಲ್ಲ ಎಂದಿದೆ.

ನಂತರ ನ್ಯಾಯಾಲಯ ಮಧ್ಯ ಪ್ರದೇಶ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 9ಕ್ಕೆ ನಿಗದಿ ಮಾಡಿದೆ.

ಸ್ವರಾಜ್ ಎಕ್ಸ್‌ಪ್ರೆಸ್‌ನ ಅಮರ್‌ಕಾಂತ್ ಸಿಂಗ್ ಚೌಹಾಣ್ ಮತ್ತು ದೈನಿಕ್ ಬೆಜೋರ್ ರತ್ನದ ಶಶಿಕಾಂತ್ ಜಾತವ್ ಅವರು ಮೇ 1ರಂದು ತಮ್ಮನ್ನು ಅಪಹರಿಸಿ, ಕಸ್ಟಡಿಯಲ್ಲಿ ಹಲ್ಲೆ ನಡೆಸಿ, ಭಿಂಡ್‌ನ ಪೊಲೀಸ್ ಠಾಣೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅಸಿತ್ ಯಾದವ್ ಮತ್ತು ಅವರ ಸಹೋದ್ಯೋಗಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ತಮ್ಮ ವರದಿಗಳ ಮೂಲಕ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಪತ್ರಕರ್ತರು ಆರೋಪಿಸಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತಮ್ಮ ರಿಟ್ ಅರ್ಜಿಯಲ್ಲಿ, ಚೌಹಾಣ್ ಮತ್ತು ಜಾತವ್ ಅವರು ಮಧ್ಯಪ್ರದೇಶ ಪೊಲೀಸರು ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ ಅನ್ನು ಕೋರಿದ್ದರು. ಆದರೆ, ನ್ಯಾಯಾಲಯ ರಕ್ಷಣೆ ಒದಗಿಸಲು ನಿರಾಕರಿಸಿದೆ.

ಆದಾಗ್ಯೂ, ಜೀವಕ್ಕೆ ಬೆದರಿಕೆ ಇದ್ದರೆ ಅರ್ಜಿದಾರರ ರಕ್ಷಣೆಗೆ ಬರುವುದಾಗಿ ನ್ಯಾಯಾಲಯ ಭರವಸೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇ 19ರಂದು, ಪೊಲೀಸರಿಂದ ಕಿರುಕುಳ ಅನುಭವಿಸಿದ ನಂತರ ಇಬ್ಬರು ಪತ್ರಕರ್ತರು ದೆಹಲಿಗೆ ಪಲಾಯನ ಮಾಡಿದ್ದರು. ನಂತರ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಭಾರತೀಯ ಪತ್ರಿಕಾ ಮಂಡಳಿಗೆ ಸಹ ದೂರು ನೀಡಿದ್ದರು ಎಂದು ವರದಿಗಳು ಹೇಳಿವೆ.

ಪೊಲೀಸ್ ವರಿಷ್ಠಾಧಿಕಾರಿಯ ಕೊಠಡಿಯಲ್ಲಿ 5ಕ್ಕೂ ಹೆಚ್ಚು ಪತ್ರಕರ್ತರು ಇದ್ದರು. ಅವರು ನಾವು ತಲುಪುವ ಮೊದಲು ದೈಹಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಪತ್ರಕರ್ತರು ಆರೋಪಿಸಿದ್ದಾರೆ.

ಸ್ಥಳೀಯ ಪೊಲೀಸರೊಂದಿಗೆ ಸೇರಿ ಚಂಬಲ್ ನದಿಯಲ್ಲಿ ನಡೆಸುತ್ತಿರುವ ಮರಳು ಮಾಫಿಯಾ ವರದಿಗಳು ಪ್ರಕಟಿಸಿದ ಬಗ್ಗೆ ಎಸ್‌ಪಿ ಅಸಿತ್ ಯಾದವ್ ಅವರಿಗೆ ಅಸಮಾಧಾನ ಇತ್ತು ಎಂದು ಚೌಹಾಣ್ ಮತ್ತು ಗೋಯಲ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಲ್ಲೆಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ಕೈಬಿಡುವಂತೆ ಯಾದವ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಯಾದವ್ ಎಲ್ಲಾ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿದ್ದು, “ಅವರು ಪತ್ರಕರ್ತರಲ್ಲ, ಅವರು ಬ್ಲ್ಯಾಕ್‌ಮೇಲರ್‌ಗಳು” ಎಂದು ಮೇ ತಿಂಗಳಲ್ಲಿ ನ್ಯೂಸ್‌ಲಾಂಡ್ರಿಗೆ ತಿಳಿಸಿದ್ದರು ಎನ್ನಲಾಗಿದೆ.

ಮೇ 28ರಂದು, ದೆಹಲಿ ಹೈಕೋರ್ಟ್ ಚೌಹಾಣ್ ಅವರಿಗೆ ಎರಡು ತಿಂಗಳ ಕಾಲ ರಕ್ಷಣೆ ನೀಡುವಂತೆ ದೆಹಲಿ ಪೊಲೀಸರಿಗೆ ಆದೇಶಿಸಿತ್ತು. ಈ ರಕ್ಷಣೆ ಇನ್ನೂ ಜಾರಿಯಲ್ಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

“ಈ ಮಧ್ಯೆ, ನ್ಯಾಯವ್ಯಾಪ್ತಿಯ [ಮಧ್ಯಪ್ರದೇಶ] ಹೈಕೋರ್ಟ್ ಅನ್ನು ಸಂಪರ್ಕಿಸಿ ಮತ್ತು ಅಲ್ಲಿ ನೀವು ಪರಿಹಾರ ಪಡೆಯಿರಿ” ಎಂದು ನ್ಯಾಯಾಲಯವು ಚೌಹಾಣ್ ಅವರಿಗೆ ಮೌಖಿಕವಾಗಿ ನಿರ್ದೇಶಿಸಿತ್ತು.

ಜಾತವ್ ಕೂಡ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಈ ವಿಷಯವನ್ನು ಇನ್ನೂ ಕೈಗೆತ್ತಿಕೊಂಡಿಲ್ಲ. ಪ್ರಕರಣವನ್ನು ಜುಲೈ 14 ರಂದು ವಿಚಾರಣೆ ನಡೆಸಲು ಮರು ಅಧಿಸೂಚನೆ ಹೊರಡಿಸಲಾಗಿದೆ.

ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಬಿಜೆಪಿ ಮಾಜಿ ಪದಾಧಿಕಾರಿ, ಪ್ರಿಯಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...