Homeಮುಖಪುಟ'ಮತಗಳ್ಳತನ' ಕುರಿತ ರಾಹುಲ್ ಗಾಂಧಿಯ ಆರೋಪಗಳ ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿ ವಜಾ

‘ಮತಗಳ್ಳತನ’ ಕುರಿತ ರಾಹುಲ್ ಗಾಂಧಿಯ ಆರೋಪಗಳ ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿ ವಜಾ

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದ ‘ಮತಗಳ್ಳತನ’ ನಡೆದಿದೆ ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆರೋಪಗಳ ಕುರಿತು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ಮಾಡಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಅ.13) ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಅರ್ಜಿದಾರರಿಗೆ ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದ ಮುಂದೆ ಪ್ರಸ್ತಾಪಿಸುವಂತೆ ಹೇಳಿತು. ಅರ್ಜಿದಾರರ ಪರ ವಕೀಲರು, ಭಾರತೀಯ ಚುನಾವಣಾ ಆಯೋಗಕ್ಕೆ ಈಗಾಗಲೇ ಅರ್ಜಿ ಸಲ್ಲಿಸಲಾಗಿದೆ. ಆದರೆ, ಅದು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.

ಆದಾಗ್ಯೂ, ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಪೀಠ, ಅರ್ಜಿದಾರರು ಈ ವಿಷಯವನ್ನು ಚುನಾವಣಾ ಆಯೋಗದ ಮುಂದೆ ಮುಂದುವರಿಸಬಹುದು ಎಂದು ಹೇಳಿತು ಮತ್ತು ಅದನ್ನು ವಿಲೇವಾರಿ ಮಾಡಿತು. ಈ ವೇಳೆ, ಅರ್ಜಿದಾರರ ಪರ ವಕೀಲರು, ಈ ವಿಷಯವನ್ನು ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸಮಯ ಮಿತಿಯನ್ನು ನಿಗದಿಪಡಿಸುವಂತೆ ಕೋರಿದರು. ಆದರೆ, ಪೀಠವು ಅಂತಹ ಯಾವುದೇ ನಿರ್ದೇಶನವನ್ನು ನೀಡಲು ನಿರಾಕರಿಸಿತು ಎಂದು ಲೈವ್ ಲಾ ವರದಿ ವಿವರಿಸಿದೆ.

ರೋಹಿತ್ ಪಾಂಡೆ ಎಂಬವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ, ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸುವವರೆಗೆ ಮತ್ತು ಮತದಾರರ ಪಟ್ಟಿಗಳ ಸ್ವತಂತ್ರ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಯಾವುದೇ ರೀತಿಯ ಪರಿಷ್ಕರಣೆ ಅಥವಾ ಅಂತಿಮಗೊಳಿಸುವಿಕೆ ಮಾಡಬಾರದು ಎಂದು ನಿರ್ದೇಶಿಸಲು ಕೋರಲಾಗಿತ್ತು.

ಮತದಾರರ ಪಟ್ಟಿಯ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಚುನಾವಣಾ ಆಯೋಗವು ಬದ್ಧ ಮಾರ್ಗಸೂಚಿಗಳನ್ನು ರೂಪಿಸಿ ಹೊರಡಿಸಬೇಕೆಂದು ಅರ್ಜಿದಾರರು ಕೋರಿದ್ದರು. ಇದರಲ್ಲಿ ನಕಲಿ ಅಥವಾ ಕಾಲ್ಪನಿಕ ನಮೂದುಗಳನ್ನು ಪತ್ತೆಹಚ್ಚುವ ಮತ್ತು ತಡೆಗಟ್ಟುವ ಕಾರ್ಯವಿಧಾನಗಳು ಸೇರಿವೆ.

ಅರ್ಥಪೂರ್ಣ ಪರಿಶೀಲನೆ ಮತ್ತು ಸಾರ್ವಜನಿಕ ಪರಿಶೀಲನೆಗೆ ಅನುವು ಮಾಡಿಕೊಡಲು ಮತದಾರರ ಪಟ್ಟಿಯನ್ನು ಸುಲಭವಾಗಿ ಪ್ರವೇಶಿಸಬಹುದಾದ, ಮೆಶಿನ್ ರೇಡೆಬಲ್ ಮತ್ತು ಆಪ್ಟಿಕಲ್ ಕ್ಯಾರೆಕ್ಟರ್ ರೆಕಗ್ನಿಶನ್ (ಒಸಿಆರ್) ಫಾರ್ಮೆಟ್‌ನಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಲಾಗಿತ್ತು.

ಮತಗಳ್ಳತನದ ಬಗ್ಗೆ ಜುಲೈ 24ರಂದು ಸಂಸತ್ ಮುಂದೆ ಮೊದಲ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ, ಆಗಸ್ಟ್ 7ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತನ್ನ ಆರೋಪದ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯ ವೇಳೆ ಬರೋಬ್ಬರಿ 1 ಲಕ್ಷಕ್ಕೂ (1,00, 250) ಹೆಚ್ಚು ಮತಗಳ್ಳತನ ನಡೆದಿದೆ ಎಂದಿದ್ದರು.

“ಆದಾಯ ನಿಂತು ಹೋಗಿದೆ”: ಕೇಂದ್ರ ಸಚಿವ ಸ್ಥಾನ ತೊರೆದು ನಟನೆಯಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ಸುರೇಶ್ ಗೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...