HomeಮುಖಪುಟPFI ನಿಷೇಧ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

PFI ನಿಷೇಧ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಐದು ವರ್ಷಗಳ ನಿಷೇಧವನ್ನು ಪ್ರಶ್ನಿಸಿ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಸಂಸ್ಥೆಯು ಮೊದಲು ಸಂಬಂಧಪಟ್ಟ ಹೈಕೋರ್ಟ್‌ನ್ನು ಸಂಪರ್ಕಿಸಬೇಕು ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠ ಹೇಳಿದೆ.

ಸೆಪ್ಟೆಂಬರ್ 28, 2022 ರಂದು, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ದೇಶದ ಭಯೋತ್ಪಾದನೆ-ವಿರೋಧಿ ಕಾನೂನಿನ ಅಡಿಯಲ್ಲಿ “ಕಾನೂನುಬಾಹಿರ” ಸಂಘಟನೆ ಎಂದು ಘೋ‍ಷಿಸಿತು.

ದೇಶದಲ್ಲಿ ಭಯೋತ್ಪಾದನೆಯ ಆಳ್ವಿಕೆಯನ್ನು ಸೃಷ್ಟಿಸುವ ಉದ್ದೇಶದಿಂದ ಮುಸ್ಲಿಂ ಸಂಘಟನೆಯು ತನ್ನ ಎಂಟು ಅಂಗಸಂಸ್ಥೆಗಳು ಅಥವಾ ರಂಗಗಳೊಂದಿಗೆ “ಹಿಂಸಾತ್ಮಕ ಭಯೋತ್ಪಾದಕ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡಿದೆ ಎಂದು ಕೇಂದ್ರವು ಕಳೆದ ವರ್ಷ ಆರೋಪಿಸಿತ್ತು.

ಮಾರ್ಚ್‌ನಲ್ಲಿ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ನೇತೃತ್ವದ ಯುಎಪಿಎ ನ್ಯಾಯಮಂಡಳಿ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು.

ದಕ್ಷಿಣ ಭಾರತದಲ್ಲಿ ಮೂರು ಮುಸ್ಲಿಂ ಸಂಘಟನೆಗಳ ವಿಲೀನದ ಮೂಲಕ 2007ರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ರಚಿಸಲಾಯಿತು. ಇದು ತನ್ನನ್ನು ತಾನು “ವಂಚಿತರು ಮತ್ತು ದೀನದಲಿತರ ಮತ್ತು ರಾಷ್ಟ್ರದ ಸಾಮಾಜಿಕ-ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಬಲೀಕರಣದ ಸಾಧನೆಗಾಗಿ” ಕೆಲಸ ಮಾಡುವ ಸಂಸ್ಥೆ ಎಂದು ಹೇಳುತ್ತದೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯವು ಈ ಸಂಘಟನೆಯ ಮೇಲೆ ರಾಷ್ಟ್ರವ್ಯಾಪಿ ನಿಷೇಧ ಹೇರಿತ್ತು.

ಇದನ್ನೂ ಓದಿ: ‘ದ್ರಾವಿಡ ಸಿದ್ಧಾಂತ ನಿರ್ಮೂಲನೆ’ಯ ಸಮಾವೇಶಕ್ಕೆ ಅನುಮತಿ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...