Homeಮುಖಪುಟಪಹಲ್ಗಾಮ್ ದಾಳಿಯ ನ್ಯಾಯಾಂಗ ತನಿಖೆ ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಪಹಲ್ಗಾಮ್ ದಾಳಿಯ ನ್ಯಾಯಾಂಗ ತನಿಖೆ ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಘಟನೆಯ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ (ಏ.30) ನಿರಾಕರಿಸಿದೆ.

ಪಹಲ್ಗಾಮ್ ದಾಳಿಯ ತನಿಖೆಯನ್ನು ಮೇಲ್ವಿಚಾರಣೆಯನ್ನು ನಿವೃತ್ತ ನ್ಯಾಯಾಧೀಶರಿಂದ ಮಾಡಿಸಬೇಕು ಎಂದು ಕೋರಿದ್ದಕ್ಕಾಗಿ ಅರ್ಜಿದಾರರನ್ನು ಟೀಕಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಅವರ ಪೀಠವು, ನಿವೃತ್ತ ನ್ಯಾಯಾಧೀಶರು ತಜ್ಞರಲ್ಲ ಎಂದು ಹೇಳಿದೆ.

“ಈ ನಿರ್ಣಾಯಕ ಸಮಯದಲ್ಲಿ, ದೇಶದ ಪ್ರತಿಯೊಬ್ಬ ನಾಗರಿಕರು ಭಯೋತ್ಪಾದನೆಯ ವಿರುದ್ಧ ಹೋರಾಡಲು ಕೈಜೋಡಿಸಿದ್ದಾರೆ. ಈ ರೀತಿಯ ಪಿಐಎಲ್ ಸಲ್ಲಿಸುವ ಮೂಲಕ ಭದ್ರತಾ ಪಡೆಗಳ ಸ್ಥೈರ್ಯ ಕುಗ್ಗಿಸಲು ನೀವು ಬಯಸುತ್ತೀರಾ? ಈ ರೀತಿಯ ಸಮಸ್ಯೆಯನ್ನು ನ್ಯಾಯಾಂಗ ವ್ಯಾಪ್ತಿಯಲ್ಲಿ ತರಬೇಡಿ” ಎಂದು ನ್ಯಾಯಪೀಠ ಹೇಳಿದೆ ಎಂದು ವರದಿಯಾಗಿದೆ.

ಅರ್ಜಿದಾರರಾದ ಫತೇಶ್ ಕುಮಾರ್ ಸಾಹು ಮತ್ತು ಇತರರಿಗೆ ಪಿಐಎಲ್ ಹಿಂಪಡೆಯಲು ನ್ಯಾಯಾಲಯ ಸೂಚಿಸಿದೆ. ಅರ್ಜಿದಾರರು ಈ ವಿಷಯದ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು ಮತ್ತು ಭದ್ರತಾ ಪಡೆಗಳ ಸ್ಥೈರ್ಯ ಕುಗ್ಗಿಸುವ ಯಾವುದೇ ಮನವಿಯನ್ನು ನ್ಯಾಯಾಲಯದಲ್ಲಿ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಕೇಳಿದೆ ಎಂದು ವರದಿ ತಿಳಿಸಿದೆ.

“ನೀವು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಲು ಕೇಳುತ್ತಿದ್ದೀರಿ. ಅವರು ತನಿಖೆಯಲ್ಲಿ ಪರಿಣತರಲ್ಲ, ಆದರೆ ಅವರು ಸಮಸ್ಯೆಯನ್ನು ನಿರ್ಣಯಿಸಬಹುದು ಮತ್ತು ನಿರ್ಧರಿಸಬಹುದು. ಆದೇಶ ಹೊರಡಿಸಲು ನಮ್ಮನ್ನು ಕೇಳಬೇಡಿ. ನೀವು ಎಲ್ಲಿಗೆ ಹೋಗಬೇಕೆಂದರೂ ಹೋಗಿ. ನೀವು ಇದರಿಂದ ಹಿಂದೆ ಸರಿಯುವುದು ಉತ್ತಮ” ಎಂದು ಪೀಠವು ಅರ್ಜಿದಾರರಲ್ಲಿ ಒಬ್ಬರಿಗೆ ಹೇಳಿದೆ ಎಂದು ವರದಿ ವಿವರಿಸಿದೆ.

ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಆಡಳಿತಕ್ಕೆ ನಿರ್ದೇಶನ ನೀಡಬೇಕೆಂದು ಪಿಐಎಲ್ ಕೋರಿತ್ತು.

ಏಪ್ರಿಲ್ 22ರಂದು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನ ಜನಪ್ರಿಯ ಪ್ರವಾಸಿ ತಾಣ ಬೈಸರನ್‌ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ.

ಪಹಲ್ಗಾಮ್ ದಾಳಿ ಗಮನ ಬೇರೆಡೆ ಸೆಳೆಯಲು ಮೋದಿ ಸರ್ಕಾರದಿಂದ ಜಾತಿ ಜನಗಣತಿ ಮುನ್ನೆಲೆಗೆ: ಸಂಜಯ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...