Homeಮುಖಪುಟಮೋದಿ ಕುರಿತ ಟೀಕೆ: ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ಧತಿಗೆ ಸುಪ್ರೀಂ ನಕಾರ

ಮೋದಿ ಕುರಿತ ಟೀಕೆ: ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ಧತಿಗೆ ಸುಪ್ರೀಂ ನಕಾರ

- Advertisement -
- Advertisement -

ಪ್ರಧಾನಿ ಮೋದಿ ಬಗ್ಗೆ ಮಾತನಾಡುವಾಗ  ‘ನರೇಂದ್ರ ಗೌತಮ್ ದಾಸ್ ಮೋದಿ’ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರ ಪವನ್ ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರು ಖೇರಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ನಿರಾಕರಿಸಿದ ಅಲಹಾಬಾದ್ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ  ವಿಚಾರಣೆ ನಡೆಸುತ್ತಿದ್ದು, ಈ ಕುರಿತ ಮನವಿಯನ್ನು ತಿರಸ್ಕರಿಸಿದೆ.

ಫೆಬ್ರವರಿ 17, 2023ರಂದು, ಅದಾನಿ-ಹಿಂಡೆನ್‌ಬರ್ಗ್ ಸಂಬಂಧದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಖೇರಾ ಮೋದಿಯವರ ಹೆಸರನ್ನು ಉಲ್ಲೇಖಿಸಿದ್ದರು . ನರಸಿಂಹರಾವ್ ಅವರು ಜಂಟಿ ಸಂಸದೀಯ ಸಮಿತಿ ರಚಿಸಬಹುದಾದರೆ, ಅಟಲ್ ಬಿಹಾರಿ ವಾಜಪೇಯಿ ಅವರು ಜಂಟಿ ಸಂಸದೀಯ ಸಮಿತಿ ರಚಿಸಬಹುದಾದರೆ, ನರೇಂದ್ರ ಗೌತಮ್ ದಾಸ್… ಕ್ಷಮಿಸಿ ದಾಮೋದರದಾಸ್… ಮೋದಿಗೆ ಯಾವ ಸಮಸ್ಯೆ ಇದೆ?  ಎಂದು ಕೇಳಿದ್ದರು.

ಪ್ರಧಾನಿಯವರ ತಂದೆಯ ಹೆಸರನ್ನು ತಪ್ಪಾಗಿ ಹೇಳಿ ಅವಹೇಳನ ಮಾಡಲಾಗಿದೆ ಎಂಬ ಆರೋಪದ ಮೇಲೆ ಉತ್ತರಪ್ರದೇಶ, ಅಸ್ಸಾಂನಲ್ಲಿ ಪವನ್ ಖೇರಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ಅಸ್ಸಾಂ ಪೊಲೀಸರು ಅವರನ್ನು ಬಂಧಿಸಿದ್ದರು.

ಪವನ್ ಖೇರಾ ಪರ ವಕೀಲರು, ಇದು ಬಾಯ್ತಪ್ಪಿನಿಂದ ಉಚ್ಚರಿಸಲಾಗಿದೆ. ಅವರು ಕ್ಷಮೆಯಾಚಿಸಿದ್ದರು ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು. ಫೆ.23ರಂದು ಅವರನ್ನು ಬಂಧಿಸಿದ ನಂತರ ಸುಪ್ರೀಂಕೋರ್ಟ್ ಅದೇ ದಿನ ಖೇರಾಗೆ ತಾತ್ಕಾಲಿಕವಾಗಿ ಬಂಧನದಿಂದ ರಕ್ಷಣೆ ನೀಡಿತ್ತು. ಮುಂದಿನ ವಿಚಾರಣೆಯ ದಿನಾಂಕದವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸೂಚಿಸಿತ್ತು. ಬಳಿಕ ಅವರ ಮಧ್ಯಂತರ ಜಾಮೀನು ಅವಧಿಯನ್ನು ಮಾ.17ರವರೆಗೆ ವಿಸ್ತರಿಸಲಾಗಿತ್ತು.

ಲೈವ್‌ ಲಾ ಪ್ರಕಾರ, ಖೇರಾ ವಿರುದ್ಧ ಸೆಕ್ಷನ್ 153A (ಕೋಮು ದ್ವೇಷವನ್ನು ಉತ್ತೇಜಿಸುವುದು), 153B,  500 (ಮಾನನಷ್ಟ), 504 (ಶಾಂತಿ ಭಂಗಕ್ಕೆ ಪ್ರಚೋದಿಸುವ ಉದ್ದೇಶದಿಂದ ಅವಮಾನ) ಮತ್ತು ಭಾರತೀಯ ದಂಡ ಸಂಹಿತೆಯ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಖೇರಾ ಬಾಯ್ತಪ್ಪಿನಿಂದ ಕಾಮೆಂಟ್ ಮಾಡಿದ್ದಾರೆ ಮತ್ತು ಅವರು ತ್ವರಿತ ಕ್ಷಮೆಯಾಚನೆಯನ್ನು ಮಾಡಿದ್ದಾರೆ. ಖೇರಾ ವಿರುದ್ಧ ಮಾನಹಾನಿ, ವಿವಿಧ ಗುಂಪುಗಳ ನಡುವೆ ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸುವ, ಸಾರ್ವಜನಿಕ ಶಾಂತಿಯನ್ನು ಕದಡುವ ಆರೋಪಗಳನ್ನು ಹೊರಿಸಿ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ಹೇಳಿದ್ದರು.

ಇದಕ್ಕೂ ಮೊದಲು ಖೇರಾ ಅವರು ತಮ್ಮ ವಿರುದ್ಧ ಸಲ್ಲಿಸಲಾದ ಸಮನ್ಸ್ ಆದೇಶ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ ಮೊರೆ ಹೋಗಿದ್ದರು. ಅವರು ತಮ್ಮ ಮಾತಿಗೆ ಬೇಷರತ್ ಕ್ಷಮೆಯಾಚಿಸಿರುವುದಾಗಿಯೂ ಹೇಳಿದ್ದರು. ಆದರೆ ಹೈಕೋರ್ಟ್‌ ಪ್ರಕರಣದ ರದ್ಧತಿಗೆ ನಿರಾಕರಿಸಿತ್ತು.

ಇದನ್ನು ಓದಿ: ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾದರೂ, ಪೆಟ್ರೋಲ್‌ ಬೆಲೆ ಕಡಿತಗೊಳಿಸಿಲ್ಲ: ಕೇಂದ್ರದ ವಿರುದ್ಧ ಖರ್ಗೆ ವಾಗ್ಧಾಳಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಜನರು ನಮಗೆ 56% ಮತ ನೀಡಿದ್ದಾರೆ, ಅವರು ಪಾಕಿಸ್ತಾನಿಗಳೇ..?’; ಅಮಿತ್‌ ಶಾ ವಿರುದ್ಧ...

0
'ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಾರಣ ಅವರು ಅಹಂಕಾರಿಯಾಗಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...