Homeಮುಖಪುಟಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ಸುಪ್ರೀಂ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ಸುಪ್ರೀಂ

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ ವಿವಿಧ ಜೈಲು ಶಿಕ್ಷೆಗಳನ್ನು ಎದುರಿಸುತ್ತಿರುವ ಸ್ವಯಂ-ಘೋಷಿತ ದೇವಮಾನವ ಅಸಾರಾಂ ಬಾಪು ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಆಯುರ್ವೇದ ಚಿಕಿತ್ಸೆಗಾಗಿ ಶಿಕ್ಷೆಯನ್ನು ಕೆಲವು ತಿಂಗಳುಗಳವರೆಗೆ ಅಮಾನತುಗೊಳಿಸುವಂತೆ ಆರೋಪಿ ಅಸಾರಾಂ ಬಾಪು ಅರ್ಜಿ ಸಲ್ಲಿಸಿದ್ದರು. ನಿಮ್ಮ ಈ ಅಪರಾಧವು “ಸಾಮಾನ್ಯ ಅಪರಾಧವಲ್ಲ” ಎಂದಿರುವ ಸುಪ್ರೀಂಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ

ನ್ಯಾಯಾಧೀಶರಾದ ಇಂದಿರಾ ಬ್ಯಾನರ್ಜಿ, ವಿ.ರಾಮಸುಬ್ರಮಣಿಯನ್ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು, ಅಪರಾಧಿಗೆ ಅಗತ್ಯವಾದ ಚಿಕಿತ್ಸೆಯನ್ನು ಜೈಲಿನಲ್ಲೇ ಒದಗಿಸಲಾಗಿದೆ ಮತ್ತು ಮನವಿಯನ್ನು ತಿರಸ್ಕರಿಸಿದೆ ಎಂದು ತೀರ್ಪು ನೀಡಿದ್ದಾರೆ.

“ಕ್ಷಮಿಸಿ. ಇದು ಸಾಮಾನ್ಯ ಅಪರಾಧವಲ್ಲ. ನಿಮ್ಮ ಎಲ್ಲಾ ಆಯುರ್ವೇದ ಚಿಕಿತ್ಸೆಯನ್ನು ನೀವು ಜೈಲಿನಲ್ಲಿ ಪಡೆಯುತ್ತೀರಿ” ಎಂದು ಅರ್ಜಿಯನ್ನು ತಿರಸ್ಕರಿಸುವಾಗ ನ್ಯಾಯಪೀಠವು ತಿಳಿಸಿದೆ.

ಇದನ್ನೂ ಓದಿ: ಜಾರ್ಖಂಡ್‌: ಅಪ್ರಾಪ್ತೆ ಮೇಲೆ 7 ಬಾಲಕರಿಂದ ಸಾಮೂಹಿಕ ಅತ್ಯಾಚಾರ

ಅಪರಾಧಿ ಪರ ಹಾಜರಾಗಿದ್ದ ಹಿರಿಯ ವಕೀಲ ಆರ್ ಬಸಂತ್, ಎರಡು ತಿಂಗಳ ಅವಧಿಗೆ ಮಧ್ಯಂತರ ಜಾಮೀನನ್ನು ಪರಿಗಣಿಸಿ ಅವರಿಗೆ ತನ್ನ ಕಾಯಿಲೆಗಳಿಗೆ ಸಮಗ್ರ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಡಬೇಕು  ಎಂದು ಕೇಳಿದ್ದರು.

ಆದರೆ, ರಾಜ್ಯವನ್ನು ಪ್ರತಿನಿಧಿಸಿದ ಹಿರಿಯ ವಕೀಲ ಮನೀಶ್ ಸಿಂಘ್ವಿ, ಅಪರಾಧಿಯು ಜೈಲಿನಲ್ಲಿ ಅತ್ಯುತ್ತಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಮನವಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದರು.

ಇತ್ತ ರಾಜಸ್ಥಾನ ರಾಜ್ಯ ಸರ್ಕಾರವು, ’ಆರೋಪಿಯು ವೈದ್ಯಕೀಯ ಚಿಕಿತ್ಸೆಯ ನೆಪದಲ್ಲಿ ತನ್ನ ಕಸ್ಟಡಿಯ ಸ್ಥಳವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಕೆಲಸ ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ” ಎಂದು ತನ್ನ ಅಫಿಡವಿಟ್‌ನಲ್ಲಿ ಹೇಳಿದೆ.

“ಆರೋಪಿಯು ಗಾಂಧಿ ನಗರ ಹಾಗೂ ಜೋಧಪುರದಲ್ಲಿ ಬಾಕಿಯಿರುವ ವಿಚಾರಣೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ, ಆರೋಪಿಯ ಆರೋಗ್ಯ ಸ್ಥಿರ ಮತ್ತು ಸದೃಢವಾಗಿದ್ದರೂ ಚಿಕಿತ್ಸೆಯ ಮನವಿಯನ್ನು ಸಲ್ಲಿಸುತ್ತಿದ್ದಾರೆ” ಎಂದು ರಾಜ್ಯ ಸರ್ಕಾರ ಆರೋಪಿಸಿದೆ.

2013 ರಲ್ಲಿ ತನ್ನ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೋಧಪುರ ನ್ಯಾಯಾಲಯವು ಏಪ್ರಿಲ್ 25, 2018 ರಂದು ಅಸಾರಾಂಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಇಂದೋರ್‌ನಲ್ಲಿ ಅಸಾರಾಂ ಅವರನ್ನು ಬಂಧಿಸಲಾಗಿತ್ತು. ಸೆಪ್ಟೆಂಬರ್ 1, 2013 ರಂದು ಜೋಧಪುರಕ್ಕೆ ಕರೆತರಲಾಯಿತು. ಅವರು ಸೆಪ್ಟೆಂಬರ್ 2, 2013 ರಿಂದ ನ್ಯಾಯಾಂಗ ಬಂಧನದಲ್ಲಿದ್ದರು. ಇದೇ ಪ್ರಕರಣದಲ್ಲಿ ಆತನ ಸಹಚರರಾದ ಶರದ್ ಮತ್ತು ಶಿಲ್ಪಿ ಅವರಿಗೆ ನ್ಯಾಯಾಲಯವು ಅದೇ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.


ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...