Homeಮುಖಪುಟಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ನಿರ್ಧರಿಸಿದ ಹರಿಯಾಣ ಸರ್ಕಾರ

ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ನಿರ್ಧರಿಸಿದ ಹರಿಯಾಣ ಸರ್ಕಾರ

- Advertisement -
- Advertisement -

ಹರಿಯಾಣದ ನೂತನ ಬಿಜೆಪಿಯ ನಯಾಬ್ ಸಿಂಗ್ ಸೈನಿ ಸರ್ಕಾರ ಪರಿಶಿಷ್ಟ ಜಾತಿ (ಎಸ್‌ಸಿ)ಯ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ನಿರ್ಧಾರನ್ನು ಶುಕ್ರವಾರ ಕೈಗೊಂಡಿದೆ. ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವಂತೆ ಸುಪ್ರೀಂ ಕೋರ್ಟ್‌ ನೀಡಿದ್ದ ಮಹತ್ವದ ತೀರ್ಪನ್ನು ಜಾರಿಗೆ ತಂದ ಮೊದಲ ರಾಜ್ಯವಗಿ ಹರಿಯಾಣ ಹೊರಹೊಮ್ಮಿದೆ.

ಒಳ ಮೀಸಲಾತಿ ಜಾರಿ ಮಾಡುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ನಯಾಬ್ ಸಿಂಗ್, ತಮ್ಮ ಸರ್ಕಾರವು ಈ ಮೂಲಕ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಅನುಸರಿಸಿದೆ ಎಂದು ಹೇಳಿದ್ದಾರೆ. ಹಿಂದುಳಿದಿರುವಿಕೆಯ ಆಧಾರದ ಮೇಲೆ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡಲು ರಾಜ್ಯಗಳಿಗೆ ಸಾಂವಿಧಾನಿಕ ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಆಗಸ್ಟ್‌ನಲ್ಲಿ ತೀರ್ಪು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹರಿಯಾಣ ಸರ್ಕಾರವು ಪರಿಶಿಷ್ಟ ಜಾತಿಯಲ್ಲಿ ವಂಚಿತ ಪರಿಶಿಷ್ಟ ಜಾತಿ (DSC) ಎಂದು ಕರೆಯುವ ಹೊಸ ವರ್ಗವನ್ನು ರಚಿಸಿದೆ. ಅದರಲ್ಲಿ 36 ಎಸ್‌ಸಿ ಜಾತಿಗಳು ಸೇರಿವೆ. ಎಸ್‌ಸಿಗಳಿಗೆ ನೀಡುವ 20% ಮೀಸಲಾತಿಯಲ್ಲಿ 10% ದಷ್ಟು ಡಿಎಸ್‌ಸಿಗಳಿಗೆ ಮೀಸಲಿಡಲಾಗುವುದು ಎಂದು ಸರ್ಕಾರ ಹೇಳಿದೆ. ಆಗಸ್ಟ್‌ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆಯ ಮೊದಲು, ಹರಿಯಾಣದ ಎಸ್‌ಸಿ ಆಯೋಗವು ಸಮುದಾಯಗಳನ್ನು ಎರಡು ವರ್ಗಗಳಾಗಿ ವಿಂಗಡಿಸಲು ಶಿಫಾರಸು ಮಾಡಿತ್ತು.

ರಾಜ್ಯ ಸಚಿವ ಸಂಪುಟದ ಮೊದಲ ಸಭೆಯು ಪ್ರಸ್ತಾವನೆಯನ್ನು ಅಂಗೀಕರಿಸಿದೆ ಎಂದು ಸೈನಿ ಶುಕ್ರವಾರ ಘೋಷಿಸಿದ್ದಾರೆ. “ಸುಪ್ರೀಂಕೋರ್ಟ್‌ನ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಗಳನ್ನು ಎರಡು ವರ್ಗಗಳಾಗಿ ಉಪವರ್ಗೀಕರಣಗೊಳಿಸಲು ಇಂದು ಸಚಿವರ ಪರಿಷತ್ತು ನಿರ್ಧರಿಸಿದೆ.ಒಳ ಮೀಸಲಾತಿಯು ಇಂದಿನಿಂದ ಅನ್ವಯವಾಗಲಿದೆ” ಮುಖ್ಯಮಂತ್ರಿ ಸೈನಿ ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ 20% ಎಸ್‌ಸಿ ಮೀಸಲಾತಿಯಲ್ಲಿ ತಲಾ 50% ರಷ್ಟು ಎರಡು ವರ್ಗಗಳಿಗೆ ಒದಗಿಸಲು ಸಮುದಾಯವನ್ನು DSC ಗಳು ಮತ್ತು OSC ಗಳಾಗಿ ಉಪವರ್ಗೀಕರಿಸುವ ಆದೇಶದ ಅಧಿಸೂಚನೆಯನ್ನು ಮುಖ್ಯ ಕಾರ್ಯದರ್ಶಿ ಹೊರಡಿಸುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹರಿಯಾಣ ಸರ್ಕಾರವು 2020 ರಲ್ಲಿ ಹರಿಯಾಣ ಪರಿಶಿಷ್ಟ ಜಾತಿಗಳ ಕಾಯಿದೆಯನ್ನು ಜಾರಿಗೆ ತಂದಿದ್ದು, ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟ 20% ಸ್ಥಾನಗಳಲ್ಲಿ 50% ವಂಚಿತ ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟಿದೆ.

ಆಗಸ್ಟ್ 8 ರಂದು, ಸೈನಿ ನೇತೃತ್ವದ ಈ ಹಿಂದಿನ ಮಂತ್ರಿ ಮಂಡಲ, ಬಿಜೆಪಿಯ ಮಾಜಿ ಶಾಸಕ ರವೀಂದರ್ ಬಲಿಯಾಲ ನೇತೃತ್ವದ ಹರಿಯಾಣ ಎಸ್‌ಸಿ ಆಯೋಗವನ್ನು ಉಲ್ಲೇಖಿಸಿ, ರಾಜ್ಯದಲ್ಲಿ ದಲಿತರಿಗೆ ಸಂಬಂಧಿಸಿದ ಮಾಹಿತಿಯನ್ನು ಅಧ್ಯಯನ ಮಾಡಲು ಮತ್ತು ಎಸ್‌ಸಿಗಳ ಒಳ ಮೀಸಲಾತಿ ಅನುಕೂಲವಾಗುವಂತೆ ಶಿಫಾರಸುಗಳನ್ನು ಮಾಡಿತ್ತು.

ಇದನ್ನೂ ಓದಿ: ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...