Homeಮುಖಪುಟʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

- Advertisement -
- Advertisement -

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ವಿಲಾತಿಕುಲಂ ವಿಧಾನಸಭಾ ಕ್ಷೇತ್ರದಲ್ಲಿರುವ ಈ ಗ್ರಾಮದಲ್ಲಿ ಸುಮಾರು 900 ಮತದಾರರಿದ್ದು, ಅವರಲ್ಲಿ ಸುಮಾರು 500 ಜನರು ಎಸ್‌ಸಿ ಸಮುದಾಯಗಳಿಗೆ ಸೇರಿದವರು.

ಚರ್ಚ್‌ಗೆ ಹೋಗುವ ದಾರಿಯನ್ನು ವಿವಾದಿತ ಜಾಗದಲ್ಲಿ ಗೋಡೆ ನಿರ್ಮಿಸುವ ಮೂಲಕ ತಡೆಯಲಾಗಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

ಹಲವು ಕಾಲದಿಂದ ಗ್ರಾಮಸ್ಥರು ಸಾರ್ವಜನಿಕವಾಗಿ ಬಳಸುತ್ತಿದ್ದ ಒಂದು ಎಕರೆ ಸರ್ಕಾರಿ ‘ಪೋರಂಬೋಕು’ (ಸರ್ಕಾರಿ ಪಡೀಲು ಭೂಮಿ) ಭೂಮಿಗೆ ಪಟ್ಟಾ (ಹಕ್ಕು ಪತ್ರ) ನೀಡಲು ಕಂದಾಯ ಅಧಿಕಾರಿಗಳು ಖಾಸಗಿ ವ್ಯಕ್ತಿಯೊಂದಿಗೆ ಶಾಮೀಲಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಗ್ರಾಮಸ್ಥರ ಪ್ರಕಾರ, ಕಾನೂನುಬಾಹಿರವಾಗಿ ಖಾಸಗಿ ವ್ಯಕ್ತಿಗೆ ಹಕ್ಕು ಪತ್ರ ನೀಡಲಾಗಿದ್ದು, ಇದರಿಂದಾಗಿ ಅವರು ಗೋಡೆ ನಿರ್ಮಿಸಿದ್ದಾರೆ.

ಗೋಡೆಯನ್ನು ಕೆಡವಲು ಮತ್ತು ಹಕ್ಕು ಪತ್ರವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 2024ರಿಂದಲೇ ಶಂಕರಲಿಂಗಪುರಂ ಗ್ರಾಮದ ಎಸ್‌ಸಿ ಸಮುದಾಯದ ನಿವಾಸಿಗಳು ಹಲವಾರು ಪ್ರತಿಭಟನೆಗಳನ್ನು ನಡೆಸುತ್ತಾ ಬಂದಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳು ಸದ್ಯ ವಿಲಾತಿಕುಲಂ ಉಪ ನ್ಯಾಯಾಲಯ ಮತ್ತು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ವಿಚಾರಣೆಯ ಹಂತದಲ್ಲಿವೆ.

2025ರಲ್ಲಿ, ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ. ಇಳಂಬಗವತ್ ಅವರು ಗ್ರಾಮಕ್ಕೆ ಭೇಟಿ ನೀಡಿದ್ದರು. ಇದರ ನಂತರ, ಭೂಮಿಯ ಒಂದು ಭಾಗಕ್ಕೆ ಬೇಲಿ ಹಾಕಲು ಅನುಮತಿ ನೀಡಿದ್ದ 2012 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಆದರೆ, ಮೇಲ್ಮನವಿ ಸಲ್ಲಿಸಲು ನಿಗದಿಪಡಿಸಿದ ಕಾಲಮಿತಿ ಮೀರಿಹೋದ ಕಾರಣ ಆ ಅರ್ಜಿ ತಿರಸ್ಕತಗೊಂಡಿತ್ತು.

ಈ ವಿಷಯದಲ್ಲಿ ಜಾತಿ ಆಧಾರಿತ ತಾರತಮ್ಯ ಎಸಗಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ವಿಡುದಲೈ ಚಿರೂತೈಗಲ್ ಕಚ್ಚಿ (ವಿಸಿಕೆ) ಪಕ್ಷದ ಮುರಸು ತಮಿಳಪ್ಪನ್ ಅವರು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಯೊಂದಿಗೆ ಮಾತನಾಡಿ, “ಗ್ರಾಮದಲ್ಲಿ ಒಟ್ಟು 30 ಎಕರೆ ಪೋರಂಬೋಕು ಭೂಮಿಯಿದ್ದು, ಅದರಲ್ಲಿ ಎಸ್‌ಸಿ ನಿವಾಸಿಗಳು ಕೇವಲ ಒಂದು ಎಕರೆಯನ್ನು ಮಾತ್ರ ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸುತ್ತಿದ್ದರು. ಆದರೆ, ಕಂದಾಯ ಅಧಿಕಾರಿಗಳ ಬೆಂಬಲದೊಂದಿಗೆ ಮೇಲ್ಜಾತಿಯ ಗುಂಪುಗಳು ಆ ಜಾಗವನ್ನು ಆಕ್ರಮಿಸಿಕೊಂಡಿವೆ” ಎಂದು ದೂರಿದ್ದಾರೆ.

ದಲಿತ ಹಕ್ಕುಗಳ ಒಕ್ಕೂಟದ ಸಂಯೋಜಕರಾದ ಎಂ. ನಾಗರಾಜ್ ಅವರು ಮಾತನಾಡಿ, 2024ರಿಂದಲೂ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ. “ಕಳೆದ ಒಂದು ವರ್ಷದಿಂದ ಭೂಮಿಯನ್ನು ಮರಳಿ ಪಡೆಯಲು ಮತ್ತು ಗೋಡೆಯನ್ನು ತೆರವುಗೊಳಿಸಲು ಪ್ರತಿ ವಾರಾಂತ್ಯದಲ್ಲಿ ನಾವು ಪ್ರತಿಭಟನೆಗಳನ್ನು ನಡೆಸುತ್ತಿದ್ದೇವೆ, ಆದರೆ ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅವರು ದೂರಿದ್ದಾರೆ. ಅಲ್ಲದೆ, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ತಮಗೆ ಬೆಂಬಲ ನೀಡುವಲ್ಲಿ ವಿಫಲವಾಗಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಗೆ ಯಾವುದೇ ಪರಿಹಾರ ಸಿಗದ ಕಾರಣ ಅತೃಪ್ತರಾದ ಗ್ರಾಮಸ್ಥರು ಈಗ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೋವಿಲ್ಪಟ್ಟಿ ಉಪವಿಭಾಗಾಧಿಕಾರಿ ಹಿಮಾಂಶು ಮಂಗಲ್ ಅವರು ಮಾತನಾಡಿ, ನಿವಾಸಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮನವೊಲಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಇಂತಹ ಘಟನೆಗಳು ಹೊಸದೇನಲ್ಲ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ರಾಜ್ಯದ ಹಲವು ಗ್ರಾಮಗಳು ಜಾತಿ ತಾರತಮ್ಯ, ಮೂಲಸೌಕರ್ಯಗಳ ಕೊರತೆ, ಪರಿಸರ ಕಾಳಜಿ ಮತ್ತು ಈಡೇರದ ಅಭಿವೃದ್ಧಿ ಭರವಸೆಗಳ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕರಿಸಿದ್ದವು. 

ಪುದುಕ್ಕೊಟ್ಟೈ ಜಿಲ್ಲೆಯ ವೆಂಗವಯಲ್ ಮತ್ತು ಎರೈಯೂರು, ತೂತುಕುಡಿಯ ಪೊಟ್ಟಲೂರಾನಿ, ತಿರುವಣ್ಣಾಮಲೈ ಜಿಲ್ಲೆಯ ಮೋತಕ್ಕಲ್, ತಿರುವಳ್ಳೂರಿನ ಕಟ್ಟುಪಲ್ಲಿ, ವಿಲ್ಲುಪುರಂನ ವೇದಂಪಟ್ಟು, ತಿರುನಲ್ವೇಲಿಯ ನೆಲ್ಲೈತಿರುತ್ತು, ಕಾಂಚೀಪುರಂನ ಏಕನಾಪುರಂ ಮತ್ತು ನಾಗಪಟ್ಟು, ರಾಣಿಪೇಟೆಯ ಅವಲೂರು, ಧರ್ಮಪುರಿಯ ಜ್ಯೋತಿಹಳ್ಳಿ, ದಿಂಡಿಗಲ್‌ನ ಸೀರಂಗಂಪಟ್ಟಿ, ಕಡಲೂರು ಜಿಲ್ಲೆಯ ವಿರುತ್ತಾಚಲಂ ಮತ್ತು ಸುತ್ತಮುತ್ತಲಿನ ಹಳ್ಳಿಗಳು ಹಾಗೂ ವಿಲ್ಲುಪುರಂನ ಸಿತೇರಿ ಸೇರಿದಂತೆ ಹಲವು ಗ್ರಾಮಗಳು ಚುನಾವಣೆ ಬಹಿಷ್ಕಾರ ಮಾಡಿದ್ದವು.

Courtesy : maktoobmedia.com



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು ಡಿಲೀಟ್!

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪೂರಕ ಪಟ್ಟಿಯಲ್ಲಿ, ಒಂದೇ ಬೂತ್‌ನ 340 ಜನರ ಹೆಸರುಗಳನ್ನು ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸಿರ್ಹತ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ...

ಹಾರ್ಮುಜ್ ಮಾರ್ಗದ ಅನುಮತಿ: ಭಾರತ ನಮ್ಮ ‘ಸ್ನೇಹಪರ ರಾಷ್ಟ್ರ’ಗಳ ಸಾಲಿನಲ್ಲಿ ಸೇರಿದೆ: ಇರಾನ್ ವಿದೇಶಾಂಗ ಸಚಿವ 

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಇತರರಿಗೆ ನಿರ್ಬಂಧಗಳು ಮುಂದುವರಿದಿದ್ದರೂ, ಭಾರತ ಸೇರಿದಂತೆ ಆಯ್ದ "ಸ್ನೇಹಪರ ರಾಷ್ಟ್ರಗಳ" ಹಡಗುಗಳಿಗೆ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡುತ್ತಿರುವುದಾಗಿ ಇರಾನ್ ಹೇಳಿದೆ. ಚೀನಾ, ರಷ್ಯಾ,...

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು...

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...