Homeಕರ್ನಾಟಕಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

- Advertisement -
- Advertisement -

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌ ಶಾಸಕ ಹೆಚ್‌. ಡಿ ರೇವಣ್ಣ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಕರ್ನಾಟಕ ಹೈಕೋರ್ಟ್ ಎಚ್.ಡಿ. ರೇವಣ್ಣ ಅವರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 (ಮಹಿಳೆಯ ಘಟನತೆಗೆ ಧಕ್ಕೆ) ಅಡಿಯಲ್ಲಿದ್ದ ಆರೋಪದಿಂದ ಮುಕ್ತಗೊಳಿಸಿತ್ತು. ಆದರೆ, ಸೆಕ್ಷನ್ 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿದ್ದ ಆರೋಪಗಳನ್ನು ಹಾಗೇ ಉಳಿಸಿಕೊಂಡಿತ್ತು. ಈ ಪ್ರಕರಣದ ಕಾನೂನು ಕ್ರಮ ಕೈಗೊಳ್ಳಲು ಇರುವ ಕಾಲಮಿತಿಯನ್ನು (ಲಿಮಿಟೇಶನ್ ಪೀರಿಯಡ್) ವಿಸ್ತರಿಸಬಹುದೇ ಎಂಬುದನ್ನು ಪರಿಶೀಲಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ (ಟ್ರಯಲ್ ಕೋರ್ಟ್) ಸೂಚಿಸಿತ್ತು.

ಐಪಿಸಿ ಸೆಕ್ಷನ್ 354, 354ಎ, 506 ಮತ್ತು 509 ರ ಅಡಿಯಲ್ಲಿ ದಾಖಲಾಗಿದ್ದ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ರದ್ದುಗೊಳಿಸುವಂತೆ ಕೋರಿ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಅರ್ಜಿಯ ವಿಚಾರಣೆ ಬಾಕಿ ಇರುವಾಗಲೇ, ಪೊಲೀಸರು ದೋಷಾರೋಪ ಪಟ್ಟಿಯನ್ನು (ಚಾರ್ಜ್‌ಶೀಟ್) ಸಲ್ಲಿಸಿದ್ದರು ಮತ್ತು ವಿಚಾರಣಾ ನ್ಯಾಯಾಲಯವು ಐಪಿಸಿ ಸೆಕ್ಷನ್ 354 ಮತ್ತು 354ಎ ಅಡಿಯಲ್ಲಿ ಪ್ರಕರಣವನ್ನು ಪರಿಗಣನೆಗೆ (ಕಾಗ್ನಿಸೆನ್ಸ್) ತೆಗೆದುಕೊಂಡಿತ್ತು.

ರೇವಣ್ಣ ಅವರು ಹೈಕೋರ್ಟ್ ಮೆಟ್ಟಿಲೇರಿ, ಈ ಪ್ರಕರಣದಲ್ಲಿ ದೂರು ದಾಖಲಿಸಲು ಮೂರು ವರ್ಷಗಳಿಗಿಂತ ಹೆಚ್ಚು ವಿಳಂಬವಾಗಿದೆ ಎಂದು ವಾದಿಸಿದ್ದರು. ಮೂರು ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಯ ಜೈಲು ಶಿಕ್ಷೆ ಇರುವ ಅಪರಾಧಗಳಿಗೆ ಸಿಆರ್‌ಪಿಸಿ ಸೆಕ್ಷನ್ 468 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು 3 ವರ್ಷಗಳ ಕಾಲಮಿತಿ ಇರುತ್ತದೆ, ಆದ್ದರಿಂದ ನ್ಯಾಯಾಲಯವು ಈ ಪ್ರಕರಣವನ್ನು ಪರಿಗಣನೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದರು. ಅಂತಿಮವಾಗಿ, ಇದೇ ವಿಳಂಬದ ಕಾರಣವನ್ನು ಎತ್ತಿಹಿಡಿದ ವಿಚಾರಣಾ ನ್ಯಾಯಾಲಯವು ರೇವಣ್ಣ ಅವರನ್ನು ಸೆಕ್ಷನ್ 354ಎ ಅಡಿಯಲ್ಲಿದ್ದ ಆರೋಪದಿಂದಲೂ ಮುಕ್ತಗೊಳಿಸಿತ್ತು.

ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಕರ್ನಾಟಕ ಸರ್ಕಾರದ ಮೇಲ್ಮನವಿಯನ್ನು ವಿಚಾರಣೆ ನಡೆಸಿದೆ. ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್. ನಾಗಮುತ್ತು ಅವರು, ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿದ್ದು, ಅವರಲ್ಲಿ ಮಾಜಿ ಮನೆಗೆಲಸದ ಮಹಿಳೆಯ ಮೇಲೆ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಕೂಡ ಸೇರಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನೋಟಿಸ್ ಜಾರಿ ಮಾಡಿದ ನ್ಯಾಯಪೀಠವು, ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ರ (ಮಹಿಳೆಯ ಘನತೆಗೆ ಧಕ್ಕೆ) ಅಡಿಯಲ್ಲಿದ್ದ ಆರೋಪಗಳನ್ನು ಸೆಕ್ಷನ್ 354ಎ ಗೆ ಬದಲಾಯಿಸುವಂತೆ (ಮಾರ್ಪಡಿಸುವಂತೆ) ಸೂಚಿಸಲು ಹೈಕೋರ್ಟ್‌ಗೆ ಹೇಗೆ ಸಾಧ್ಯ ಎಂದು ಮೌಖಿಕವಾಗಿ ಪ್ರಶ್ನಿಸಿದೆ.

ಕಾಲಮಿತಿಯ (ಲಿಮಿಟೇಶನ್) ವಿಷಯಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಿದ ನಾಗಮುತ್ತು ಅವರು, ಹೊರಿಸಲಾದ ಒಟ್ಟು ಆರೋಪಗಳಲ್ಲಿ ಯಾವುದು ಅತ್ಯಂತ ಗಂಭೀರವಾದ ಅಪರಾಧವೋ (ಇಲ್ಲಿ ಸೆಕ್ಷನ್ 376 – ಅತ್ಯಾಚಾರ) ಅದಕ್ಕೆ ಅನುಗುಣವಾಗಿ ಕಾಲಮಿತಿಯನ್ನು ಲೆಕ್ಕ ಹಾಕಲಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಪರ್ದಿವಾಲಾ ಅವರು, ಜೆಡಿಎಸ್ ನಾಯಕ ರೇವಣ್ಣ ಅವರೂ ಅತ್ಯಾಚಾರದ ಆರೋಪದ ಮೇಲೆ ವಿಚಾರಣೆ ಎದುರಿಸಬೇಕೆಂದು ರಾಜ್ಯ ಸರ್ಕಾರ ಬಯಸುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ. ಆಗ ನಾಗಮುತ್ತು ಅವರು, ನ್ಯಾಯಾಲಯವು ಅಪರಾಧಿಯನ್ನಲ್ಲ, ಬದಲಿಗೆ ನಡೆದಿರುವ ಅಪರಾಧವನ್ನು (ಪ್ರಕರಣವನ್ನು) ಪರಿಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆದಾಗ್ಯೂ, ಈ ವಾದಕ್ಕೆ ಒಪ್ಪದ ನ್ಯಾಯಪೀಠ, ಎಚ್.ಡಿ. ರೇವಣ್ಣ ಅವರ ವಿರುದ್ಧ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಯಾವುದೇ ಕಾನೂನು ಕ್ರಮವನ್ನು (ಕಾಗ್ನಿಸೆನ್ಸ್) ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಸಂದರ್ಭದಲ್ಲಿ ಉದಾಹರಣೆಯೊಂದನ್ನು ನೀಡಿದ ನ್ಯಾಯಮೂರ್ತಿ ಪರ್ದಿವಾಲಾ ಅವರು, “ಒಂದು ಪ್ರಕರಣದಲ್ಲಿ ಎ ಮತ್ತು ಬಿ ಎಂಬುವವರ ಮೇಲೆ ಸೆಕ್ಷನ್ 302 (ಕೊಲೆ) ಆರೋಪ ಹಾಗೂ ಸಿ ಎಂಬಾತನ ಮೇಲೆ ಸೆಕ್ಷನ್ 201 (ಸಾಕ್ಷ್ಯ ನಾಶಪಡಿಸುವುದು) ಅಡಿಯಲ್ಲಿ ಆರೋಪ ಇರುತ್ತದೆ ಎಂದು ಭಾವಿಸೋಣ. ಆಗ ಸಿ ಎಂಬಾತನ ಮೇಲೆ ಕೇವಲ ಆ ನಿರ್ದಿಷ್ಟ ಅಪರಾಧಕ್ಕೆ ಮಾತ್ರ ದೋಷಾರೋಪ ಹೊರಿಸಿ ವಿಚಾರಣೆ ನಡೆಸಬೇಕಾಗುತ್ತದೆ. ಅದನ್ನು ಬಿಟ್ಟು ಎ ಮತ್ತು ಬಿ ಕೊಲೆ ಆರೋಪ ಎದುರಿಸುತ್ತಿದ್ದಾರೆ ಎಂಬ ಒಂದೇ ಕಾರಣಕ್ಕೆ, ಸಿ ಕೂಡ ಕೊಲೆ ಆರೋಪವನ್ನೇ ಎದುರಿಸಬೇಕು ಎಂದು ನೀವು ಹೇಳುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ನಾಗಮುತ್ತು ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಲು ಪ್ರಯತ್ನಿಸುತ್ತಾ, ಈ ಇಡೀ ಅಪರಾಧವು ಒಂದೇ ಸಾಮಾನ್ಯ ವ್ಯವಹಾರ ಅಥವಾ ಘಟನೆಯಲ್ಲಿ (ಕಾಮನ್ ಟ್ರಾನ್ಸಾಕ್ಷನ್) ನಡೆದಿರುವುದರಿಂದ, ಜಂಟಿ ದೋಷಾರೋಪ ಪಟ್ಟಿಯನ್ನು (ಕಾಮನ್ ಚಾರ್ಜ್‌ಶೀಟ್) ಸಲ್ಲಿಸಲಾಗಿದೆ ಮತ್ತು ಅಪರಾಧಗಳ ಜಂಟಿ ಕಾನೂನು ಕ್ರಮವನ್ನು (ಕಾಮನ್ ಕಾಗ್ನಿಸೆನ್ಸ್) ಕೈಗೊಳ್ಳಲಾಗಿದೆ ಎಂದು ವಾದಿಸಿದ್ದಾರೆ. ಆದ್ದರಿಂದ, ದೋಷಾರೋಪ ಪಟ್ಟಿಯಲ್ಲಿರುವ ಅತ್ಯಂತ ಗಂಭೀರವಾದ ಅಪರಾಧವನ್ನು ಆಧರಿಸಿಯೇ ಕಾಲಮಿತಿಯನ್ನು (ಲಿಮಿಟೇಶನ್ ಪೀರಿಯಡ್) ನಿರ್ಧರಿಸಬೇಕಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...