Homeಮುಖಪುಟಶರದ್ ಪವಾರ್ ಹೆಸರು, ಫೋಟೋ ದುರ್ಬಳಕೆ ಆರೋಪ: ಅಜಿತ್‌ ಪವಾರ್‌ ಬಣದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ...

ಶರದ್ ಪವಾರ್ ಹೆಸರು, ಫೋಟೋ ದುರ್ಬಳಕೆ ಆರೋಪ: ಅಜಿತ್‌ ಪವಾರ್‌ ಬಣದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಶರದ್ ಪವಾರ್ ಅವರ ಹೆಸರು ಮತ್ತು ಪೋಟೋಗಳನ್ನು ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಶರದ್ ಪವಾರ್ ಬಣ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಸುಪ್ರೀಂ ಕೋರ್ಟ್ ಗುರುವಾರ ಪ್ರತಿಕ್ರಿಯೆ ಕೇಳಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು, ಶರದ್ ಪವಾರ್ ಅವರ ಅರ್ಜಿಗೆ ಶನಿವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಅಜಿತ್ ಪವಾರ್ ಬಣಕ್ಕೆ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಮಾರ್ಚ್ 19 ಕ್ಕೆ ನಿಗದಿಪಡಿಸಿದೆ.

“ಶರದ್ ಪವಾರ್ ಅವರ ಹೆಸರು ಮತ್ತು ಫೋಟೋಗಳನ್ನು ಬಳಸುವುದಿಲ್ಲ ಎಂದು ನಮಗೆ ಸ್ಪಷ್ಟ ಮತ್ತು ಬೇಷರತ್ತಾಗಿ ಹೇಳಬೇಕಾದ ಅಗತ್ಯವಿದೆ” ಎಂದು ನ್ಯಾಯ ಪೀಠ ಒತ್ತಿ ಹೇಳಿದೆ.

ಶರದ್ ಪವಾರ್ ಬಣಕ್ಕೆ ‘ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್’ ಎಂಬ ಹೆಸರನ್ನು ನಿಗದಿಪಡಿಸಿದ ಫೆಬ್ರವರಿ 7ರ ಚುನಾವಣಾ ಆಯೋಗದ ನಿರ್ಧಾರವು ಮುಂದಿನ ಸೂಚನೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಅಜಿತ ಪವಾರ್ ಬಣವನ್ನು ಕಾನೂನುಬದ್ಧ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಎಂದು ಗುರುತಿಸಿದ ಚುನಾವಣಾ ಆಯೋಗದ ಫೆಬ್ರವರಿ 6 ರ ಆದೇಶದ ವಿರುದ್ಧ ಶರದ್ ಪವಾರ್ ಬಣ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಅಜಿತ್ ಪವಾರ್ ಬಣದಿಂದ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ಕೇಳಿದೆ.

ಇದನ್ನೂ ಓದಿ : ಕೇರಳ: ಜಡ್ಜ್‌ ನೇಮಕಾತಿಗೆ ಆಕ್ಷೇಪ; ಕೇಂದ್ರದ ದ್ವಿಮುಖ ನೀತಿ ಗಮನಿಸಿದ ಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಜನರು ನಮಗೆ 56% ಮತ ನೀಡಿದ್ದಾರೆ, ಅವರು ಪಾಕಿಸ್ತಾನಿಗಳೇ..?’; ಅಮಿತ್‌ ಶಾ ವಿರುದ್ಧ...

0
'ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಾರಣ ಅವರು ಅಹಂಕಾರಿಯಾಗಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...