Homeಮುಖಪುಟಬಿಹಾರ ಎಸ್‌ಐಆರ್ ಪ್ರಶ್ನಿಸಿ ಅರ್ಜಿ: ಅ.7ರಂದು ಅಂತಿಮ ವಾದ ಆಲಿಸಲಿರುವ ಸುಪ್ರೀಂ ಕೋರ್ಟ್

ಬಿಹಾರ ಎಸ್‌ಐಆರ್ ಪ್ರಶ್ನಿಸಿ ಅರ್ಜಿ: ಅ.7ರಂದು ಅಂತಿಮ ವಾದ ಆಲಿಸಲಿರುವ ಸುಪ್ರೀಂ ಕೋರ್ಟ್

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸಿದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಯಾವುದೇ ಅಕ್ರಮ ಕಂಡುಬಂದರೆ ಮಧ್ಯಪ್ರವೇಶಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ (ಸೆ.15) ಹೇಳಿದೆ. ಈ ಕುರಿತು ಅರ್ಜಿಗಳ ಅಂತಿಮ ವಾದಗಳನ್ನು ಅಕ್ಟೋಬರ್ 7ರಂದು ಆಲಿಸಲಿದೆ.

ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 1ರಂದು ಪ್ರಕಟಿಸಲಿದೆ. ಅದಕ್ಕೂ ಮುನ್ನ ಅಂತಿಮ ವಾದ ಆಲಿಸುವಂತೆ ಅರ್ಜಿದಾರರು ಕೋರಿದ್ದರು. ಆದರೆ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ದಿನಾಂಕ ಬದಲಾಯಿಸಲು ನಿರಾಕರಿಸಿದೆ.

ಅಂತಿಮ ಪಟ್ಟಿ ಪ್ರಕಟಗೊಂಡರೂ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಅಕ್ರಮ ಕಂಡು ಬಂದರೆ ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ನ್ಯಾಯಪೀಠ ಒತ್ತಿ ಹೇಳಿದೆ.

ಬಿಹಾರದ ಎಸ್‌ಐಆರ್‌ಗೆ ಸಂಬಂಧಪಟ್ಟಂತೆ ನ್ಯಾಯಾಲಯ ನೀಡುವ ತೀರ್ಪು ಇಡೀ ದೇಶದ ಮತದಾರರ ಪಟ್ಟಿಯ ಪರಿಷ್ಕರಣೆಗೆ ಅನ್ವಯಿಸಲಿದೆ. ಆದರೆ, ಬಿಹಾರದಂತೆ ಇತರ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡದಂತೆ ನಾವು ಚುನಾವಣಾ ಆಯೋಗವನ್ನು ತಡೆಯಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಅಲ್ಲದೆ, ಅಕ್ಟೋಬರ್ 7ರಂದು ಬಿಹಾರ ಎಸ್‌ಐಆರ್ ವಿರುದ್ಧದ ಅರ್ಜಿದಾರರಿಗೆ ಇಡೀ ದೇಶದ ಎಸ್‌ಐಆರ್ ಬಗ್ಗೆಯೂ ವಾದಿಸಲು ಪೀಠ ಅವಕಾಶ ನೀಡಿತು.

ಈ ಮಧ್ಯೆ, ಬಿಹಾರದ ಎಸ್‌ಐಆರ್‌ನಲ್ಲಿ 12 ನೇ ದಾಖಲೆಯಾಗಿ ಆಧಾರ್ ಕಾರ್ಡ್ ಅನ್ನು ಪರಿಗಣಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದ ಸೆಪ್ಟೆಂಬರ್ 8ರ ಆದೇಶವನ್ನು ಹಿಂಪಡೆಯುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಆಧಾರ್ ಪೌರತ್ವದ ದಾಖಲೆಯಲ್ಲಿ. ಮತದಾರರ ಪಟ್ಟಿಯಲ್ಲಿ ಸೇರಿಸಲು ಮತದಾರರು ಸಲ್ಲಿಸಿದ ನಂತರ ಚುನಾವಣಾ ಆಯೋಗ ಅದರ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 8ರ ಆದೇಶದಲ್ಲಿ ಸ್ಪಷ್ಟಪಡಿಸಿತ್ತು.

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...