HomeUncategorizedಮೋದಿಯ ಕಾನೂನು ಕಾರ್ಯದರ್ಶಿಯಾಗಿದ್ದ ತ್ರಿವೇದಿ ಪೀಠಕ್ಕೆ 7 ಸೂಕ್ಷ್ಮ ಪ್ರಕರಣಗಳ ವರ್ಗಾವಣೆ!  

ಮೋದಿಯ ಕಾನೂನು ಕಾರ್ಯದರ್ಶಿಯಾಗಿದ್ದ ತ್ರಿವೇದಿ ಪೀಠಕ್ಕೆ 7 ಸೂಕ್ಷ್ಮ ಪ್ರಕರಣಗಳ ವರ್ಗಾವಣೆ!  

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಕಾನೂನು ಕಾರ್ಯದರ್ಶಿಯಾಗಿ  ಈ ಹಿಂದೆ ಸೇವೆ ಸಲ್ಲಿಸಿದ್ದ ಜಸ್ಟಿಸ್‌ ಬಾಲಾ ತ್ರಿವೇದಿ ಅವರ ಪೀಠಕ್ಕೆ ನಾಲ್ಕು ತಿಂಗಳಲ್ಲಿ ಏಳು ರಾಜಕೀಯವಾಗಿ ಸೂಕ್ಷವಾದ ಪ್ರಕರಣಗಳನ್ನು ವರ್ಗವಾಣೆ ಮಾಡಲಾಗಿದೆ ಎಂದು Article 14 ವರದಿ ತಿಳಿಸಿದೆ.

ಜಸ್ಟಿಸ್‌ ತ್ರಿವೇದಿ ಅವರು ಗುಜರಾತ್ ಹೈಕೋರ್ಟ್‌ನಿಂದ ಸುಪ್ರೀಂಕೋರ್ಟ್‌ಗೆ ಪದೋನ್ನತಿ ಹೊಂದಿದ್ದರು. ಅವರು ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು 2001ರಿಂದ 2014ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಕಾನೂನು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಆ.31, 2021ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬೇಲಾ ತ್ರಿವೇದಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಸ್ತುತ ಅವರು 34 ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಲ್ಲಿ ಹಿರಿತನದಲ್ಲಿ 16ನೇ ಸ್ಥಾನದಲ್ಲಿರುವ ಜಡ್ಜ್‌ ಆಗಿದ್ದಾರೆ.

ಡಿಸೆಂಬರ್ 7ರ ಗುರುವಾರ ನ್ಯೂಸ್ ಪೋರ್ಟಲ್ ಆರ್ಟಿಕಲ್ 14ನಲ್ಲಿ ಪ್ರಕಟವಾದ ವರದಿಯಲ್ಲಿ ಸ್ವತಂತ್ರ ಪತ್ರಕರ್ತ ಸೌರವ್ ದಾಸ್ ಅವರು ಕಳೆದ ನಾಲ್ಕು ತಿಂಗಳಲ್ಲಿ 7 ಪ್ರಕರಣಗಳನ್ನು ನ್ಯಾಯಮೂರ್ತಿ ತ್ರಿವೇದಿ ಅಥವಾ ನೇತೃತ್ವದ ಪೀಠಕ್ಕೆ ವರ್ಗಾಯಿಸಲಾಗಿದೆ ಎಂದು Article 14 ವರದಿ ಉಲ್ಲೇಖಿಸಿ ನ್ಯಾಶನಲ್‌ ಹೆರಾಲ್ಡ್‌ ವರದಿ ಮಾಡಿದೆ.

ಆರ್ಟಿಕಲ್ 14 ನಿಂದ ಉಲ್ಲೇಖಿಸಲಾದ ಏಳು ಪ್ರಕರಣಗಳು ಈ ಕೆಳಗಿನಂತಿವೆ:

1. ಉಮರ್ ಖಾಲಿದ್ ಅವರ  ಜಾಮೀನು ಅರ್ಜಿ

2. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA)1967ರ ನಿಬಂಧನೆಗಳನ್ನು ಪ್ರಶ್ನಿಸುವ ಅರ್ಜಿಗಳು

3. ಹೆದ್ದಾರಿ ಟೆಂಡರ್ ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ವಿರುದ್ಧದ ಹೊಸ ತನಿಖೆಯನ್ನು ವಜಾಗೊಳಿಸುವುದನ್ನು ಪ್ರಶ್ನಿಸಿದ ಅರ್ಜಿಗಳು

4. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಹ ಆರೋಪಿಯಾಗಿರುವ ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದ ಎರಡು ಅರ್ಜಿಗಳು

5. ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಸಂಬಂಧಿಸಿದ ಅರ್ಜಿ

6. ಜೈಲಿನಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಸಲ್ಲಿಸಿದ ಜಾಮೀನು ಅರ್ಜಿ

7. ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣದ ಸಹ-ಆರೋಪಿ ಮಹೇಶ್ ರಾವುತ್ ಅವರ ಜಾಮೀನು ಅರ್ಜಿ

ಈ ಪ್ರಕರಣಗಳನ್ನು ಈ ಹಿಂದೆ ಇತರ ಹಿರಿಯ ನ್ಯಾಯಾಧೀಶರ ನೇತೃತ್ವದ ಪೀಠಗಳು ವಿಚಾರಣೆ ನಡೆಸುತ್ತಿದ್ದವು ಮತ್ತು ಕೆಲವು ನ್ಯಾಯಾಧೀಶರು ತ್ರಿವೇದಿ ಅವರ ಪೀಠದ ನ್ಯಾಯಾಧೀಶರಾಗಿದ್ದರು. ಇದೀಗ ಈ ಎಲ್ಲಾ ಪ್ರಕರಣಗಳನ್ನು ಜಸ್ಟಿಸ್‌ ತ್ರಿವೇದಿ ಬಾಲಾ ಅವರ ಪೀಠಕ್ಕೆ ವರ್ಗಾಯಿಸಲಾಗಿದೆ ಎಂದು ವರದಿ ತಿಳಿಸಿದೆ.

ನ.29 2023ರಂದು ಈ ಎಲ್ಲಾ ವಿಷಯಗಳನ್ನು ನ್ಯಾಯಮೂರ್ತಿ ತ್ರಿವೇದಿ ನೇತೃತ್ವದ ಪೀಠದ ಮುಂದೆ  ಮರುಹಂಚಿಕೆ ಮಾಡಲಾಯಿತು ಎಂದು ವರದಿ ತಿಳಿಸಿದೆ.

ನ್ಯಾಯಮೂರ್ತಿ ತ್ರಿವೇದಿ ನೇತೃತ್ವದ ಪೀಠಕ್ಕೆ ವರ್ಗಾವಣೆಗೊಂಡ ಪ್ರಕರಣಗಳಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಪ್ರಕರಣವೂ ಒಂದಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿವಕುಮಾರ್ ವಿರುದ್ಧದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್‌ನ ಜೂ.12 2023ರ ತೀರ್ಪನ್ನು ಸಿಬಿಐ ಪ್ರಶ್ನಿಸಿತ್ತು.

ಇದನ್ನು ಓದಿ: ಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆ ಕನ್ನಡ ಸೇರಿ ಇತರ ವಿಷಯಗಳ ಬೋಧನೆ ಕಡ್ಡಾಯ: ಕೃಷ್ಣ ಭೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...