Homeಮುಖಪುಟಕರ್ನಲ್ ಸೋಫಿಯಾ ಖುರೇಷಿಯನ್ನು 'ಭಯೋತ್ಪಾದಕರ ಸಹೋದರಿ' ಎಂದಿದ್ದ ಮಧ್ಯಪ್ರದೇಶ ಸಚಿವಗೆ ಸುಪ್ರೀಂ ಕೋರ್ಟ್ ಛೀಮಾರಿ

ಕರ್ನಲ್ ಸೋಫಿಯಾ ಖುರೇಷಿಯನ್ನು ‘ಭಯೋತ್ಪಾದಕರ ಸಹೋದರಿ’ ಎಂದಿದ್ದ ಮಧ್ಯಪ್ರದೇಶ ಸಚಿವಗೆ ಸುಪ್ರೀಂ ಕೋರ್ಟ್ ಛೀಮಾರಿ

- Advertisement -
- Advertisement -

ಕರ್ನಲ್ ಸೋಫಿಯಾ ಖುರೇಷಿಯನ್ನು ‘ಭಯೋತ್ಪಾದಕರ ಸಹೋದರಿ’ ಎಂದು ಕರೆದಿದ್ದ ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಕುನ್ವರ್ ವಿಜಯ್ ಶಾಗೆ ಸುಪ್ರೀಂ ಕೋರ್ಟ್ ಗುರುವಾರ (ಮೇ.15) ಛೀಮಾರಿ ಹಾಕಿದೆ ಎಂದು ವರದಿಯಾಗಿದೆ.

ತನ್ನ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ ಮೇ 14 ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಶಾ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, ವಿಜಯ್‌ ಶಾ ಸಂವೇದನಾರಹಿತ ಹೇಳಿಕೆ ನೀಡಿದ್ದು, ಸ್ವೀಕಾರ್ಹವಲ್ಲ ಎಂದಿದ್ದಾರೆ. “ನೀವು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಾ?” ಎಂದು ಶಾಗೆ ಛೀಮಾರಿ ಹಾಕಿದ್ದು, ಹೋಗಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿ ಎಂದು ಖಾರವಾಗಿ ಹೇಳಿದ್ದಾರೆ. ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳು ತಮ್ಮ ಸಾರ್ವಜನಿಕ ಹೇಳಿಕೆಗಳಲ್ಲಿ ಎಚ್ಚರಿಕೆ ಮತ್ತು ಸಂಯಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ ಎಂದು ವರದಿಯಾಗಿದೆ.

ಕರ್ನಲ್‌ ಸೋಫಿಯಾ ಖುರೇಷಿ ವಿರುದ್ದದ ವಿಜಯ್‌ ಶಾ ಹೇಳಿಕೆ ವಿಷಯವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಮಧ್ಯಪ್ರದೇಶ ಹೈಕೋರ್ಟ್, ಶಾ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಬುಧವಾರ ಪೊಲೀಸರಿಗೆ ಆದೇಶಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ತನ್ನ ಆದೇಶವನ್ನು ವಿಳಂಬವಿಲ್ಲದೆ ಪಾಲಿಸುವಂತೆ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಆದೇಶ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಹೈಕೋರ್ಟ್ ಆದೇಶದ ಬೆನ್ನಲ್ಲೇ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152, 196(1)(ಬಿ), ಮತ್ತು 197(1)(ಸಿ) ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸಚಿವ ವಿಜಯ್ ಶಾ ಹೇಳಿಕೆಯು ಪ್ರಾಥಮಿಕವಾಗಿ ಮುಸ್ಲಿಮರು ಮತ್ತು ಇತರ ನಂಬಿಕೆಯ ಜನರ ನಡುವೆ ದ್ವೇಷ ಭಾವನೆ ಉಂಟು ಮಾಡುವ ಲಕ್ಷಣ ಹೊಂದಿದೆ ಎಂದು ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಅನುರಾಧಾ ಶುಕ್ಲಾ ಅವರನ್ನೊಳಗೊಂಡ ಮಧ್ಯಪ್ರದೇಶ ಹೈಕೋರ್ಟ್‌ನ ವಿಭಾಗೀಯ ಪೀಠ ಹೇಳಿದೆ.

ತನ್ನ ಆದೇಶವನ್ನು ವಿಳಂಬ ಮಾಡದೆ ಪಾಲಿಸಲು, ಅದರ ಪ್ರತಿಯನ್ನು ತಕ್ಷಣ ಡಿಜಿಪಿ ಕಚೇರಿಗೆ ರವಾನಿಸುವಂತೆ ಸರ್ಕಾರದ ಪರ ಅಡ್ವೊಕೇಟ್ ಜನರಲ್‌ಗೆ ಹೈಕೋರ್ಟ್ ಬುಧವಾರ ಆದೇಶಿಸಿತ್ತು.

“ಮಧ್ಯಪ್ರದೇಶ ಹೈಕೋರ್ಟ್ ಆದೇಶದ ನಂತರ, ಮುಖ್ಯಮಂತ್ರಿಗಳು ಸಂಪುಟ ಸಚಿವ ವಿಜಯ್ ಶಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಿದ್ದಾರೆ” ಎಂದು ಮಧ್ಯಪ್ರದೇಶ ಸಿಎಂ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ತನ್ನ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕ್ಷಮೆಯಾಚನೆ ಮಾಡಿರುವ ಸಚಿವ ವಿಜಯ್‌ ಶಾ”ನಾನು ಕರ್ನಲ್ ಸೋಫಿಯಾ ಖುರೇಷಿ ಅವರ ಧೈರ್ಯವನ್ನು ಶ್ಲಾಘಿಸುವ ಉದ್ದೇಶದಿಂದ ಆ ಹೇಳಿಕೆ ನೀಡಿದ್ದೆ” ಎಂದಿದ್ದಾರೆ.

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ | ಶೈಕ್ಷಣಿಕ ವೆಚ್ಚ ಭರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...