Homeಮುಖಪುಟಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10...

ಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10 ಲಕ್ಷ ಪಾವತಿಸಲು ಸೂಚನೆ

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ವಕೀಲ, ಪ್ರಾಧ್ಯಾಪಕ ಹಾಗೂ ಇತರರು ಸೇರಿ ಆರು ಜನರ ಮನೆಗಳನ್ನು ಕೆಡವಿದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಕ್ರಮವನ್ನು ‘ಅಮಾನವೀಯ ಮತ್ತು ಕಾನೂನುಬಾಹಿರ’ ಎಂದಿರುವ ಸುಪ್ರೀಂ ಕೋರ್ಟ್, ಸಂತ್ರಸ್ತರಿಗೆ ಆರು ವಾರಗಳಲ್ಲಿ ತಲಾ 10 ಲಕ್ಷ ರೂಪಾಯಿಗಳನ್ನು ಪಾವತಿಸಲು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, “ಮೇಲ್ಮನವಿ ಸಲ್ಲಿಸಿದವರಿಗೆ ಮನೆ ಕೆಡವುವ ಮುನ್ನ ತಮ್ಮ ನಿಲುವನ್ನು ವಿವರಿಸಲು ಪ್ರಾಧಿಕಾರ ಸಮಂಜಸವಾದ ಅವಕಾಶ ನೀಡಿರಲಿಲ್ಲ” ಎಂದು ಹೇಳಿದೆ.

“ಧ್ವಂಸ ಪ್ರಕ್ರಿಯೆಯನ್ನು ‘ಉಗ್ರ’ ರೀತಿಯಲ್ಲಿ ನಡೆಸಲಾಗಿದೆ. ಈ ದೇಶದಲ್ಲಿ ಕಾನೂನಿನ ಆಳ್ವಿಕೆ ಇದೆ. ನಾಗರಿಕರ ಮನೆಗಳನ್ನು ಈ ರೀತಿ ಕೆಡವಲು ಸಾಧ್ಯವಿಲ್ಲ” ಎಂದಿದೆ.

“ಆಶ್ರಯ ಅಥವಾ ವಸತಿ ಹಕ್ಕು ಭಾರತದ ಸಂವಿಧಾನದ 21ನೇ ವಿಧಿಯ ಅವಿಭಾಜ್ಯ ಅಂಗವಾಗಿದೆ ಎಂಬುದನ್ನು ಅಧಿಕಾರಿಗಳು ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್‌ ಅಭಿವೃದ್ಧಿ ಪ್ರಾಧಿಕಾರ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ನ್ಯಾಯಾಲಯವು ಸೂಚಿಸಿದೆ.

ಮನೆಗಳನ್ನು ಧ್ವಂಸ ನಡೆಸಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸಿದೆ. ಅರ್ಜಿದಾರರಲ್ಲಿ ಪ್ರಾಧ್ಯಾಪಕರು, ವಕೀಲರು ಮತ್ತು ನಾಲ್ವರು ಸೇರಿದ್ದಾರೆ.

ಕಾನೂನುಬಾಹಿರವಾಗಿ ಮನೆಗಳನ್ನು ಕೆಡವಿದ್ದಕ್ಕೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮತ್ತು ಪ್ರಯಾಗ್‌ರಾಜ್‌ ಅಭಿವೃದ್ದಿ ಪ್ರಾಧಿಕಾರವನ್ನು ಮಾರ್ಚ್‌ 6ರಂದು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ, ಸರ್ಕಾರದ ಕ್ರಮಕ್ಕೆ ಅಸಮ್ಮತಿ ವ್ಯಕ್ತಪಡಿಸಿತ್ತು. ಇಂತಹ ಕ್ರಮಗಳು ‘ಆಘಾತಕಾರಿ ಮತ್ತು ತಪ್ಪು ಸಂದೇಶವ’ನ್ನು ರವಾನಿಸುತ್ತವೆ ಎಂದು ಹೇಳಿತ್ತು.

“ಸಂವಿಧಾನದಲ್ಲಿ ವಿಧಿ 21 ಎಂದು ಕರೆಯಲ್ಪಡುವ ಒಂದು ವಿಷಯವಿದೆ” ಎಂದು ನ್ಯಾಯಮೂರ್ತಿ ಓಕಾ ಕಠುವಾಗಿ ಹೇಳಿದ್ದರು.

ಧ್ವಂಸ ಕಾರ್ಯಾಚರಣೆಗೆ ಮುನ್ನ ಅನುಸರಿಸಬೇಕಾದ ಕಾರ್ಯವಿಧಾನವನ್ನು ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ತೀರ್ಪನ್ನು ನ್ಯಾಯಮೂರ್ತಿ ಓಕಾ ಅವರು ಉಲ್ಲೇಖಿಸಿದ್ದರು. “ನಿಮ್ಮ ಬುಲ್ಡೋಝರ್ ನ್ಯಾಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಮನ್ವಯ ಪೀಠ ತೀರ್ಪು ನೀಡಿದೆ” ಎಂದಿದ್ದರು.

ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿ ಓಕಾ ಅವರು, “ಕೆಡವಲಾದ ಕಟ್ಟಡಗಳನ್ನು ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಿಸಲು ಸರ್ಕಾರಕ್ಕೆ ಆದೇಶಿಸುತ್ತೇವೆ. ಅದೊಂದೆ ಮಾರ್ಗ ಈಗ ಬಾಕಿಯಿರುವುದು” ಎಂದು ಹೇಳಿದ್ದರು.

ಸರ್ಕಾರದ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ ನಂತರ ವಕೀಲ ಝುಲ್ಫಿಕರ್ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್, ಇಬ್ಬರು ವಿಧವೆಯರು ಹಾಗೂ ಇತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

“ಶನಿವಾರ ನೋಟಿಸ್ ನೀಡಿ, ಭಾನುವಾರ ಮನೆಗಳನ್ನು ಸರ್ಕಾರ ಧ್ವಂಸಗೊಳಿಸಿದೆ. ಇದನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡಿಲ್ಲ. ಅರ್ಜಿದಾರರು ಭೂಮಿಯ ಕಾನೂನುಬದ್ಧ ಗುತ್ತಿಗೆದಾರರು. ಅವರ ಗುತ್ತಿಗೆ ಹಕ್ಕುಗಳನ್ನು ಫ್ರೀಹೋಲ್ಡ್ ಆಸ್ತಿಯಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು” ಎಂದು ಅರ್ಜಿದಾರ ಪರ ವಕೀಲರು ವಿಚಾರಣೆ ವೇಳೆ ವಾದಿಸಿದ್ದರು.

“ಸರ್ಕಾರ ಅರ್ಜಿದಾರರ ಜಾಗವನ್ನು 2023ರಲ್ಲಿ ಕೊಲ್ಲಲ್ಪಟ್ಟ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ರೊಂದಿಗೆ ತಪ್ಪಾಗಿ ಜೋಡಿಸಿದೆ” ಎಂದು ಆರೋಪಿಸಿದ್ದರು.

ಆದರೆ, ಅರ್ಜಿದಾರರಿಗೆ ನೋಟಿಸ್‌ಗೆ ಉತ್ತರ ನೀಡಲು ಸಾಕಷ್ಟು ಸಮಯ ಇತ್ತು ಎಂದು ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ವಾದ ಮಂಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾ. ಓಕಾ ಅವರು, ನೋಟಿಸ್ ಜಾರಿ ಮಾಡಿದ ವಿಧಾನವನ್ನು ಪ್ರಶ್ನಿಸಿದ್ದರು. ನೋಟಿಸ್ ಕಳುಹಿಸುವ ವಿಧಾನದ ಕುರಿತ ರಾಜ್ಯದ ವಾದದಲ್ಲಿ ಬದ್ದತೆ ಕೊರೆತೆಯನ್ನು ಎತ್ತಿ ತೋರಿಸಿದ್ದರು.

ಅಟಾರ್ನಿ ಜನರಲ್ ಈ ಪ್ರಕರಣವನ್ನು ಹೈಕೋರ್ಟ್‌ಗೆ ಹಿಂತಿರುಗಿಸಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಪ್ರಕರಣವನ್ನು ವಾಪಸ್ ಕಳುಹಿಸುವುದರಿಂದ ಅನಗತ್ಯ ವಿಳಂಬವಾಗುತ್ತದೆ ಎಂದು ಹೇಳಿತ್ತು.

“ಅರ್ಜಿದಾರರು ತಾವು ಅತಿಕ್ರಮಣಕಾರರಲ್ಲ, ಬದಲಾಗಿ ತಮ್ಮ ಗುತ್ತಿಗೆ ಹಕ್ಕನ್ನು ಫ್ರೀಹೋಲ್ಡಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು. ಮಾರ್ಚ್ 1, 2021ರಂದು ಅವರ ಮನೆಗಳನ್ನು ಕೆಡವಲು ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 6, 2021 ರಂದು ಅದು ಅವರಿಗೆ ತಲುಪಿದೆ. ಮರುದಿನ ಮಾರ್ಚ್ 7, 2021ರಂದು ಅವರ ಮನೆಗಳನ್ನು ಕೆಡವಲಾಗಿದೆ. ಯುಪಿ ನಗರ ಯೋಜನೆ ಮತ್ತು ಅಭಿವೃದ್ಧಿ ಕಾಯ್ದೆಯ ಸೆಕ್ಷನ್ 27(2) ರ ಅಡಿಯಲ್ಲಿ ಮೇಲ್ಮನವಿ ಪ್ರಾಧಿಕಾರದ ಮುಂದೆ ಧ್ವಂಸ ಕಾರ್ಯಾಚರಣೆ ಕುರಿತು ಪ್ರಶ್ನಿಸಲು ಅವರಿಗೆ ಸರಿಯಾದ ಅವಕಾಶ ನೀಡಿಲ್ಲ. ಅರ್ಜಿದಾರರಲ್ಲಿ ವಕೀಲರು ಮತ್ತು ಪ್ರಾಧ್ಯಾಪಕರು ಸೇರಿದ್ದಾರೆ, ಅವರ ಸಂಪೂರ್ಣ ಗ್ರಂಥಾಲಯವನ್ನು ಕೆಡವಲಾಗಿದೆ. ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 15, 2020ರಂದು ಬರೆದ ಪತ್ರವನ್ನು ಆಧರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಅವರಿಗೆ ಅದನ್ನು ಸಮರ್ಥಿಸಿಕೊಳ್ಳಲೂ ಅವಕಾಶ ನೀಡಿಲ್ಲ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ಈ ಪ್ರಕರಣ ಪ್ರಯಾಗ್‌ರಾಜ್‌ನಲ್ಲಿರುವ ನಜುಲ್ ಪ್ಲಾಟ್‌ ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದೆ. ವಿವಾದಿತ ಭೂಮಿಯನ್ನು 1906 ರಲ್ಲಿ ಗುತ್ತಿಗೆಗೆ ನೀಡಲಾಗಿತ್ತು. ಗುತ್ತಿಗೆ 1996 ರಲ್ಲಿ ಮುಕ್ತಾಯಗೊಂಡಿತ್ತು. ಅದನ್ನು ಫ್ರೀಹೋಲ್ಡ್ ಪರಿವರ್ತನೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು 2015 ಮತ್ತು 2019 ರಲ್ಲಿ ತಿರಸ್ಕರಿಸಲಾಗಿದೆ. ಭೂಮಿಯನ್ನು ಸಾರ್ವಜನಿಕ ಬಳಕೆಗಾಗಿ ಮೀಸಲಿಡಲಾಗಿದೆ ಎಂದು ಸರ್ಕಾರ ವಾದಿಸಿತ್ತು ಮತ್ತು ಅರ್ಜಿದಾರರು ತಮ್ಮ ವಹಿವಾಟುಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಇಲ್ಲದ ಕಾರಣ ಅವರಿಗೆ ಯಾವುದೇ ಕಾನೂನು ಹಕ್ಕುಗಳಿಲ್ಲ. ಅಲ್ಲಿನ ನಿರ್ಮಾಣಗಳು ಅನಧಿಕೃತವಾಗಿವೆ ಎಂದು ತೀರ್ಮಾನಿಸಿ ಹೈಕೋರ್ಟ್ ಅರ್ಜಿದಾರರ  ಅರ್ಜಿಗಳನ್ನು ವಜಾಗೊಳಿಸಿತ್ತು.

ಆರಾಧನಾ ಸ್ಥಳಗಳ ಕಾಯ್ದೆ ಸಿಂಧುತ್ವ..ಹೊಸ ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...