Homeಮುಖಪುಟಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ...

ಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ ಶೇ.10 : ಕೇಂದ್ರ ಸರ್ಕಾರ

- Advertisement -
- Advertisement -

ಐಐಟಿಗಳು ಮತ್ತು ಐಐಎಂಗಳು ಮೀಸಲು ವರ್ಗಗಳಿಂದ ಅಧ್ಯಾಪಕರನ್ನು ಭರ್ತಿ ಮಾಡಿಕೊಳ್ಳಲು ಅಭಿಯಾನವನ್ನು ಹಮ್ಮಿಕೊಂಡಾಗಿನಿಂದ ಎರಡು ವರ್ಷಗಳಲ್ಲಿ ಈ ಸಂಸ್ಥೆಗಳು ಒಟ್ಟಾಗಿ ನೇಮಕ ಮಾಡಿಕೊಂಡಿರುವ ಬೋಧಕರ ಪೈಕಿ ಕೇವಲ ಶೇ.10ರಷ್ಟು ಅಭ್ಯರ್ಥಿಗಳು ಪರಿಶಿಷ್ಟ ಜಾತಿಗಳು(ಎಸ್‌ಸಿ) ಮತ್ತು ಪರಿಶಿಷ್ಟ ವರ್ಗ(ಎಸ್‌ಟಿ)ಗಳಿಗೆ ಸೇರಿದವರಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯವು ಸಂಸತ್ತಿನಲ್ಲಿ ತಿಳಿಸಿದೆ ಎಂದು thewire.in ವರದಿ ಮಾಡಿದೆ.

ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜೂಮ್ದಾರ್ ಸೋಮವಾರ (ಫೆಬ್ರವರಿ 10) ಲೋಕಸಭೆಗೆ ನೀಡಿದ ಲಿಖಿತ ಉತ್ತರದ ಪ್ರಕಾರ, ಸೆಪ್ಟೆಂಬರ್ 2022ರಿಂದ ಎಲ್ಲಾ ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಡಿಸೆಂಬರ್ 23, 2024 ರವರೆಗೆ ಒಟ್ಟು 3,027 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಈ ಪೈಕಿ ಎಸ್‌ಸಿಗಳ ಸಂಖ್ಯೆ 276 ಮತ್ತು ಎಸ್‌ಟಿಗಳ ಸಂಖ್ಯೆ 52 ಇದೆ.

ಆಗಸ್ಟ್ 2021ರಲ್ಲಿ ಕೇಂದ್ರ ಸರ್ಕಾರ ಎಸ್‌ಸಿಗಳು, ಎಸ್‌ಟಿಗಳು, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳು ಹಾಗೂ ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ವ್ಯಕ್ತಿಗಳಿಗೆ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆ (ಸಿಎಹೆಚ್‌ಇಐ)ಗಳ ಬೋಧಕರ ಹುದ್ದೆಗಳಲ್ಲಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಒದಗಿಸಲು ಕೇಂದ್ರೀಯ ಶಿಕ್ಷಣ ಸಂಸ್ಥೆಗಳ (ಬೋಧಕ ಹುದ್ದೆಗಳಲ್ಲಿ ಮೀಸಲಾತಿ) 2019ನ್ನು ಅಧಿಸೂಚಿಸಿತ್ತು. ಬ್ಯಾಕ್‌ಲಾಗ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ಅಭಿಯಾನವನ್ನು ಆರಂಭಿಸುವಂತೆ ಅದೇ ತಿಂಗಳು ಎಲ್ಲಾ ಸಿಎಹೆಚ್‌ಇಐಗಳಿಗೆ ಸೂಚಿಸಲಾಗಿತ್ತು.

3,027 ಬೋಧಕ ಹುದ್ದೆಗಳಲ್ಲಿ 328 ಎಸ್‌ಸಿ/ಎಸ್‌ಟಿ ಹುದ್ದೆಗಳು ಮಾತ್ರ ಭರ್ತಿಯಾಗಿವೆ.

“ಸೆಪ್ಟೆಂಬರ್ 2022ರಿಂದ, ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಕೈಗೊಂಡಿತ್ತು. ಡಿಸೆಂಬರ್ 23,2024 ರವರೆಗೆ ಎಲ್ಲಾ ಸಿಹೆಚ್‌ಇಐಗಳು ಅಭಿಯಾನ ರೀತಿಯಲ್ಲಿ ಒಟ್ಟು 26,751 ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಇದರಲ್ಲಿ 15,637 ಅಧ್ಯಾಪಕರ ಹುದ್ದೆಗಳು ಸೇರಿವೆ. ಐಐಟಿಗಳು ಮತ್ತು ಐಐಎಂಗಳು ಒಟ್ಟಾರೆಯಾಗಿ 7,239 ಹುದ್ದೆಗಳನ್ನು ಭರ್ತಿ ಮಾಡಿವೆ. ಅವುಗಳಲ್ಲಿ 276 ಎಸ್‌ಸಿ ಮತ್ತು 52 ಎಸ್‌ಟಿ ಸೇರಿದಂತೆ 3027 ಅಧ್ಯಾಪಕರ ಹುದ್ದೆಗಳು ಒಳಗೊಂಡಿವೆ ಎಂದು ಸಚಿವ ಮಜೂಂದ್ದಾರ್ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

ಕನಿಷ್ಠ ಎರಡು ಐಐಟಿಗಳು ಮತ್ತು ಮೂರು ಐಐಎಂಗಳಲ್ಲಿ ಶೇ.90ಕ್ಕಿಂತ ಅಧಿಕ ಬೋಧಕ ಹುದ್ದೆಗಳನ್ನು ಸಾಮಾನ್ಯ ವರ್ಗದವರು ಹೊಂದಿದ್ದಾರೆ. ಹೆಚ್ಚುವರಿಯಾಗಿ ಆರು ಐಐಟಿಗಳು ಮತ್ತು ನಾಲ್ಕು ಐಐಎಂಗಳಲ್ಲಿ ಈ ಪ್ರಮಾಣ ಶೇ.80ರಿಂದ ಶೇ.90ರಷ್ಟಿದೆ ಎನ್ನುವುದನ್ನು ಡಿಸೆಂಬರ್‌ನಲ್ಲಿ ಮಾಹಿತಿ ಹಕ್ಕು(ಆರ್‌ಟಿಐ) ಕಾಯ್ದೆಯಡಿ ಪಡೆಯಲಾದ ಉತ್ತರಗಳು ಬಹಿರಂಗಗೊಳಿಸಿತ್ತು.

ಕೇಂದ್ರದ ನೀತಿಯ ಪ್ರಕಾರ, ಐಐಟಿಗಳು ಮತ್ತು ಐಐಎಂಗಳು ಸೇರಿದಂತೆ ಬಹುತೇಕ ಎಲ್ಲಾ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಶೇ.27 ರಷ್ಟು ಬೋಧಕ ಹುದ್ದೆಗಳು ಒಬಿಸಿಗಳಿಗೆ, ಶೇ.15 ರಷ್ಟು ಎಸ್‌ಸಿಗಳಿಗೆ ಮತ್ತು ಶೇ.7.5 ರಷ್ಟು ಎಸ್‌ಟಿಗಳಿಗೆ ಮೀಸಲಾಗಿವೆ.

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)2018-19ರಲ್ಲಿ 172 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದ್ದು, ಅದರಲ್ಲಿ ಶೇ. 12ರಷ್ಟು ಹುದ್ದೆಗಳು ಎಸ್‌ಸಿ/ಎಸ್‌ಟಿ ವರ್ಗಗಳಿಂದ ಭರ್ತಿಯಾಗಿವೆ. 2021-22ರಲ್ಲಿ 270 ಅಧ್ಯಾಪಕರ ಹುದ್ದೆಗಳಲ್ಲಿ ಶೇ. 14 ರಷ್ಟು ಹುದ್ದೆಗಳಿಗೆ ಎಸ್‌ಸಿ/ಎಸ್‌ಟಿಗಳು ನೇಮಕಗೊಂಡಿದ್ದಾರೆ ಎಂದು ಸಚಿವ ಮಜೂಮ್ದಾರ್ ತಿಳಿಸಿದ್ದಾರೆ.

“ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲ್ಪಟ್ಟಿದೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಒದಗಿಸಿದ ಮಾಹಿತಿಯ ಪ್ರಕಾರ, AIIMS ದೆಹಲಿ 2018-19 ಮತ್ತು 2021-22ರಲ್ಲಿ ಕ್ರಮವಾಗಿ 172 ಮತ್ತು 270 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದೆ. ಅದರಲ್ಲಿ ಕ್ರಮವಾಗಿ 22 ಮತ್ತು 40 ಎಸ್‌/ಎಸ್‌ಟಿ ಹುದ್ದೆಗಳನ್ನು ಭರ್ತಿ ಮಾಡಿದೆ” ಎಂದು ಸಚಿವರ ಉತ್ತರದಲ್ಲಿ ತಿಳಿಸಲಾಗಿದೆ.

ಸೌಜನ್ಯ : thewire.in

ರೋಹಿಂಗ್ಯಾ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಇರಬಾರದು – ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...